Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಮಲತಾ ಇಂದೇ ಬಿಜೆಪಿ ಸೇರ್ಪಡೆ

ಬೆಂಗಳೂರು : ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಭರ್ಜರಿ ಗೆಲುವು ಸಾಧಿಸಿದ್ದ ನಟಿ ಸುಮಲತಾ ಅಂಬರೀಶ ಈ ಬಾರಿ ಬಿಜೆಪಿ ಬೆಂಬಲಿಸಲು ನಿರ್ಧರಿಸಿ ಕಣದಿಂದ ಹಿಂದೆ ಸರಿದಿದ್ದಾರೆ. ಬುಧವಾರ (ಏಪ್ರಿಲ್‌ 3)ರಂದು ಕಣದಿಂದ ಹಿಂದೆ ಸರಿಯುವುದಾಗಿ ಹಾಗೂ ಬಿಜೆಪಿ ಬೆಂಬಲಿಸುವುದಾಗಿ ಘೋಷಿಸಿದ್ದರು. ಈಗ ಬಿಜೆಪಿ ಸೇರುವ ದಿನಾಂಕ ಘೋಷಣೆ ಮಾಡಿದ್ದು, ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಅವರು ತಾನು ಶುಕ್ರವಾರ ಏಪ್ರಿಲ್‌ 5ರಂದು ಬಿಜೆಪಿಗೆ ಸೇರ್ಪಡೆಯಾಗುವುದಾಗಿ ಪ್ರಕಟಿಸಿದ್ದಾರೆ. ಸೇರ್ಪಡೆ ಕಾರ್ಯಕ್ರಮದಲ್ಲಿ ಬಿಜೆಪಿ ಘಟಾನುಘಟಿ ನಾಯಕರು ಪಾಲ್ಗೊಳ್ಳಲಿದ್ದಾರೆ.

ಮಂಡ್ಯದ ಅಭಿವೃದ್ಧಿಯೇ ನನ್ನ ಮೂಲ ಮಂತ್ರವಾಗಿಸಿ ಕೊಂಡು ಹಾಗೂ ನಮ್ಮೆಲ್ಲರ ನೆಚ್ಚಿನ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಆಗಲಿ ಎನ್ನುವ ಆಶಯದೊಂದಿಗೆ ಭಾರತೀಯ ಜನತಾ ಪಕ್ಷವನ್ನು ಬೆಂಬಲಿಸುವುದಾಗಿ ಅವರು ತಿಳಿಸಿದ್ದಾರೆ. ಬಿಜೆಪಿ ನಾಯಕರ ಸಮ್ಮುಖದಲ್ಲಿ ಏಪ್ರಿಲ್ 5ರ ಶುಕ್ರವಾರ ಬೆಳಿಗ್ಗೆ 11:30ಕ್ಕೆ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಆಗುತ್ತಿರುವೆ ಎಂದು ಹೇಳಿದ್ದಾರೆ.
ಮಂಡ್ಯದ ನನ್ನ ಸ್ವಾಭಿಮಾನಿ ಬಂಧುಗಳ, ಡಾ.ಅಂಬರೀಶ ಅವರ ಅಭಿಮಾನಿಗಳ ಹಾಗೂ ಹಿತೈಷಿಗಳ ಹಾರೈಕೆ ಮತ್ತು ಆಶೀರ್ವಾದ ಎಂದಿನಂತೆ ಇರಲಿ ಎಂದು ಅವರು ಎಕ್ಸ್‌ನಲ್ಲಿ ಬರೆದಿದ್ದಾರೆ.

ಸುಮಲತಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಮಂಡ್ಯ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ನಂತರ ಬಿಜೆಪಿಗೆ ಬೆಂಬಲಿಸಿದ್ದ ಅವರು ಈ ಬಾರಿ ಮತ್ತೆ ಮಂಡ್ಯದಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದರು. ಮಂಡ್ಯ ಟಿಕೆಟ್​ಗಾಗಿ ಭಾರೀ ಪ್ರಯತ್ನ ನಡೆಸಿದ್ದರು. ಆದರೆ ಬದಲಾದ ಸನ್ನಿವೇಶದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿ ಮಾಡಿಕೊಂಡ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಅಂತಿಮವಾಗಿ​ ಮಂಡ್ಯ ಕ್ಷೇತ್ರವನ್ನು ಜೆಡಿಎಸ್​ಗೆ ಬಿಟ್ಟುಕೊಟ್ಟಿದೆ. ಬಳಿಕ ಸುಮಲತಾ ಅವರು ತಮ್ಮ ಬೆಂಬಲಿಗರ ಅಭಿಪ್ರಾಯ ಪಡೆದು ಈ ಬಾರಿ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಘೋಷಣೆ ಮಾಡಿದ್ದರು. ಹಾಗೂ ಬಿಜೆಪಿ ಸೇರುವುದಾಗಿ ಪ್ರಕಟಿಸಿದ್ದರು. ಅದರಂತೆ ಶುಕ್ರವಾರ (ಏಪ್ರಿಲ್‌ 5) ಅಧಿಕೃತವಾಗಿ ಸುಮಲತಾ ಬಿಜೆಪಿಗೆ ಸೇರಲಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ