Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಚ್ಚರಿಗೆ ಕಾರಣವಾಯಿತು ಸಿದ್ದರಾಮಯ್ಯ ಅವರ ಮೊಮ್ಮಗನ ಪೋಸ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೊಮ್ಮಗ ಧವನ್ ರಾಕೇಶ್ ಭವಿಷ್ಯದ ದಿನಗಳಲ್ಲಿ ರಾಜಕಾರಣ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ, ಗದಗ ತಾಲೂಕು ಕುರುಬರ ಸಂಘದ ಬೆಳ್ಳಿ ಮಹೋತ್ಸವ, ಕನಕೋತ್ಸವ ಮುಂತಾದ ಕಾರ್ಯಕ್ರಮಗಳಲ್ಲಿ ರಾಜಕೀಯ ರಣರಂಗದಲ್ಲಿ ಪಾರಂಗತರಾಗಿರುವ ತಮ್ಮ ತಾತ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಈ ಬಗ್ಗೆ ತಾನು ವೇದಿಕೆ ಹಂಚಿಕೊಂಡಿರುವ ಫೋಟೋಗಳ ಜೊತೆಗೆ ಕಾಂಗ್ರೆಸ್ ಅಧಿನಾಯಕ ರಾಹುಲ್ ಗಾಂಧಿ ಜೊತೆಗೆ ಇರುವ ಫೋಟೋಗಳನ್ನು ಸಹ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಹಂಚಿಕೊಂಡಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಆಗಸ್ಟ್ 8 ರಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದರು. ಈ ಬಗ್ಗೆ ಅವರು ಇದೀಗ ಪೋಸ್ಟ್ ಮಾಡಿರುವುದು ರಾಜಕೀಯ ವಲಯದಲ್ಲಿ ನಾನಾ ವದಂತಿಗೆ ಕಾರಣವಾಗಿದೆ.

ಧವನ್‌ ರಾಕೇಶ್‌ ಪೋಸ್ಟ್‌ನಲ್ಲೇನಿದೆ?

ಕಳೆದ ಆಗಸ್ಟ್ 8ರಂದು ನಮ್ಮ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗುವ ಸದವಕಾಶ ನನಗೆ ದೊರೆಯಿತು. ಪ್ರಾಮಾಣಿಕ ನಾಯಕರನ್ನು ನಾನು ಎಷ್ಟರ ಮಟ್ಟಿಗೆ ಗೌರವಿಸುತ್ತೇನೆ. ಅವರನ್ನು ಭೇಟಿಯಾಗಲು ಬಯಸುತ್ತೇನೆ ಎಂಬುದನ್ನು ನನ್ನ ತಾತ ಗುರುತಿಸಿದ್ದರಿಂದ ಇದು ಸಾಧ್ಯವಾಯಿತು. ಈ ರಾಜಕೀಯ ವಲಯದಲ್ಲಿ ಪ್ರಾಮಾಣಿಕತೆಯನ್ನು ಬಹುತೇಕವಾಗಿ ಕಡೆಗಣಿಸಲಾಗಿದೆ. ಆದರೆ, ಇದೇ ವಲಯದಲ್ಲಿ ಪ್ರಾಮಾಣಿಕವಾಗಿರಲು ಯತ್ನಿಸುವ, ತನ್ನ ನಂಬಿಕೆಗೆ ಬದ್ಧವಾಗಿರುವ ನಾಯಕರನ್ನು ಭೇಟಿಯಾಗಲು ನಾನು ಇಚ್ಛಿಸುತ್ತೇನೆ. ವಿದ್ಯಾರ್ಥಿಯಾಗಿ, ವಕೀಲನಾಗಿ ಜತೆ ನಿಲ್ಲುತ್ತೇನೆ.

ರಾಜಕಾರಣವು ನನ್ನ ಬದುಕಿನ ಹಿನ್ನೆಲೆಯ ಒಂದು ಭಾಗವಾಗಿರುವುದು ನಿಜ. ಆದರೆ, ನಿರಂತರ ವಿರೋಧದ ನಡುವೆಯೂ ತನ್ನ ನಂಬಿಕೆ ಹಾಗೂ ಸಿದ್ಧಾಂತದ ಪರ ನಿಲ್ಲಲು ರಾಹುಲ್‌ ಗಾಂಧಿ ನಿರ್ಧರಿಸಿದರು. ಇಂತಹ ನಾಯಕನನ್ನು ಭೇಟಿಯಾಗಿದ್ದು ನಿಜವಾಗಿಯೂ ವಿಭಿನ್ನ ಅನುಭವವಾಗಿತ್ತು. ಅವರೊಂದಿನ ಸ್ವಲ್ಪ ಕ್ಷಣಗಳ ಕಾಲ ಮಾತನಾಡಿದೆ. ಅವರ ಕುರಿತು ನನ್ನಲ್ಲಿರುವ ಅಪಾರ ಗೌರವದ ಬಗ್ಗೆ ತಿಳಿಸಿದೆ. ಈಗ ವಿದ್ಯಾರ್ಥಿಯಾಗಿ, ಮುಂದೆ ವಕೀಲನಾಗಿ ನಾನು ಅವರ ಜೊತೆ ನಿಲ್ಲಲು, ಅವರೊಂದಿಗೆ ಹೆಜ್ಜೆ ಹಾಕಲು ಬಯಸುತ್ತೇನೆಂದು ಹೇಳಿದೆ.

ನಾವೂ ಸಂವಾದಕ್ಕೆ ಮುಂದಾಗಬೇಕು:
ಈಗ ನಾವೆಲ್ಲರೂ ಸ್ವಲ್ಪ ಹೆಚ್ಚು ಮುನ್ನೆಚ್ಚರಿಕೆಯಿಂದ ಯೋಚಿಸಬೇಕಿದೆ. ಹೆಚ್ಚು ಜಾಗೃತರಾಗಬೇಕಿದೆ. ಸತ್ಯ, ನಿಷ್ಠೆ ಹಾಗೂ ಪಾರದರ್ಶಕತೆಯ ಮೂಲಕ ದೇಶವನ್ನು ಮುನ್ನಡೆಸುವ ನಾಯಕರನ್ನು ಗೌರವಿಸಬೇಕಿದೆ. ರಾಹುಲ್ ಗಾಂಧಿ ಅವರು ಸಾರ್ವಜನಿಕರು ಹಾಗೂ ಮಾಧ್ಯಮಗಳೊಂದಿಗೆ ಮುಕ್ತವಾಗಿ ಸಂವಾದ ನಡೆಸುತ್ತಾರೆ. ಅದೇ ರೀತಿ, ನಾವು ಸಹ ಸಂವಾದಕ್ಕೆ ಮುಂದಾಗಬೇಕಿದೆ. ಪ್ರಾಮಾಣಿಕ ಸಂವಾದವನ್ನು ನಾನು ಯಾವಾಗಲೂ ಸ್ವಾಗತಿಸುತ್ತೇನೆ ಎಂದು ಧವನ್ ಪೋಸ್ಟ್ ಹಾಕಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ