Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುರಪುರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯ

 

ಸುರಪುರ: ತೀವ್ರ ಜಿದ್ದಾಜಿದ್ದಿನಿಂದ ಕೂಡಿದ್ದ ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭೆ ಕ್ಷೇತ್ರದ ಫಲಿತಾಂಶ ಪ್ರಕಟವಾಗಿದ್ದು, ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ ಅವರು ಗೆಲುವು ಸಾಧಿಸಿದ್ದಾರೆ. ಚುನಾವಣಾ ಆಯೋಗದ ಮಾಹಿತಿಯಂತೆ ಕಾಂಗ್ರೆಸ್‌ನ ರಾಜಾ ವೇಣುಗೋಪಾಲ ನಾಯಕ್‌ ಅವರು 1,14,886 ಮತಗಳನ್ನು ಪಡೆದರೆ, ಬಿಜೆಪಿಯ ರಾಜುಗೌಡ (ನರಸಿಂಹ ನಾಯಕ್) ಅವರು 96,566 ಮತಗಳನ್ನು ಪಡೆದು ಸೋಲುಂಡರು.

ವೇಣುಗೋಪಾಲ ನಾಯಕ್‌ ಅವರ ತಂದೆ ರಾಜಾ ವೆಂಕಟಪ್ಪ ಅವರು ಸುರಪುರ ಶಾಸಕರಾಗಿದ್ದರು. ಅವರು ಇದೇ ವರ್ಷದ ಫೆಬ್ರವರಿ 25ರಂದು ನಿಧನರಾದ ಹಿನ್ನೆಲೆಯಲ್ಲಿ ಸುರಪುರ ವಿಧಾನಸಭೆ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿತ್ತು. ಮೇ 7ರಂದು ಸುರಪುರದಲ್ಲಿ ಉಪ ಚುನಾವಣೆ ನಡೆದಿತ್ತು. ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಹಿನ್ನೆಲೆಯಲ್ಲಿ ಉಂಟಾಗಿದ್ದ ಅನುಕಂಪದ ಅಲೆ, ಅವರ ಕುರಿತು ಕ್ಷೇತ್ರದ ಜನರಿಗೆ ಇದ್ದ ಅಭಿಮಾನದ ಫಲವಾಗಿ ರಾಜಾ ವೇಣುಗೋಪಾಲ ನಾಯಕ್‌ ಅವರಿಗೆ ಗೆಲುವು ದಕ್ಕಿದೆ ಎಂದೇ ಹೇಳಲಾಗುತ್ತಿದೆ.

2023ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ರಾಜಾ ವೇಣುಗೋಪಾಲ ನಾಯಕ್‌ ಅವರ ತಂದೆ ದಿವಂಗತ ರಾಜಾ ವೆಂಕಟಪ್ಪ ನಾಯಕ ಅವರು ರಾಜು ಗೌಡ ವಿರುದ್ಧ ‌25 ಸಾವಿರ ಮತಗಳ ಅಂತರದಲ್ಲಿ ಗೆಲುವ ಸಾಧಿಸಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು 1,13,559 ಮತಗಳನ್ನು ಪಡೆದಿದ್ದರೆ, ರಾಜುಗೌಡ ಅವರು 88,336 ಮತಗಳನ್ನು ಮಾತ್ರ ಪಡೆಯಲು ಶಕ್ತರಾಗಿದ್ದರು. ಇದಕ್ಕೂ ಮೊದಲು ರಾಜು ಗೌಡ ಅವರು ಸುರಪುರ ಕ್ಷೇತ್ರದ ಶಾಸಕರಾಗಿದ್ದರು.

2018ರ ವಿಧಾನಸಭೆ ಚುನಾವಣೆಯಲ್ಲಿ ರಾಜು ಗೌಡ ಅವರು ರಾಜಾ ವೆಂಕಟಪ್ಪ ನಾಯಕ ಅವರ ವಿರುದ್ಧ ಸುಮಾರು 22 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ರಾಜು ಗೌಡ ಅವರು 1,04,426 ಮತಗಳನ್ನು ಪಡೆದಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು 81,858 ಮತ ಪಡೆದಿದ್ದರು. ರಾಜಾ ವೆಂಕಟಪ್ಪ ನಾಯಕ ಅವರು ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತರಾಗಿದ್ದು, ಸುರಪುರ ವಿಧಾನಸಭೆ ಕ್ಷೇತ್ರದಲ್ಲಿ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ