Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮೂರ್ನಾಲ್ಕು ದಿನಗಳಲ್ಲೇ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಮೀಕ್ಷಾ ವರದಿ : ಡಿಕೆಶಿ

 

ಹುಬ್ಬಳ್ಳಿ :
ಲೋಕಸಭೆ ಚುನಾವಣೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ರಚಿಸಲಾಗಿರುವ ಸಮೀಕ್ಷಾ ತಂಡವು 3-4 ದಿನಗಳೊಳಗೆ ತನ್ನ ವರದಿ ಸಲ್ಲಿಸಲಿದೆ ಎಂದು ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.

ಹುಬ್ಬಳ್ಳಿ ವಿಮಾನ ನಿಲ್ದಾಣದ ಬಳಿ ಇಂದು ಮಾಧ್ಯಮ ಪ್ರತಿಕ್ರಿಯೆ ನೀಡಿದರು.

ಈಗಾಗಲೇ ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಿಗೆ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. ಅವರೆಲ್ಲ ಆಯಾ ಕ್ಷೇತ್ರದ, ಮುಖಂಡರು, ಕಾರ್ಯಕರ್ತರುಗಳನ್ನು ಭೇಟಿ ಆಗಿ ಬಂದಿದ್ದಾರೆ. ಈಗಾಗಲೇ ಅಭ್ಯರ್ಥಿಗಳ ವರದಿ ಸಿದ್ಧ ಮಾಡಿಕೊಂಡಿದ್ದಾರೆ. ಇನ್ನು ವರದಿ ಕೊಟ್ಟಿಲ್ಲ. ಪಕ್ಷದ ವರಿಷ್ಠರು ಸಹ ಕೆಲವು ಸಲಹೆ ನೀಡಿದ್ದಾರೆ ಎಂದರು.

 

ಲೋಕಸಭೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಸಮೀಕ್ಷೆ ಎಲ್ಲಿಯವರೆಗೂ ಬಂದಿದೆ ಎಂದು ಮಾಧ್ಯಮಗಳು ಕೇಳಿದಾಗ, "ಈಗಾಗಲೇ ಮಂತ್ರಿಗಳನ್ನು ಆಯಾ ಜಿಲ್ಲೆಗೆ ಕಳುಹಿಸಿದ್ದೇವೆ. ಅವರು ನಮಗೆ ವರದಿ ನೀಡಲಿದ್ದಾರೆ. ಶೆ.75ರಷ್ಟು ಮಂದಿ ನಮ್ಮ ಕಾರ್ಯಕರ್ತರು, ಶಾಸಕರು, ಸ್ಥಳೀಯ ನಾಯಕರ ಅಭಿಪ್ರಾಯ ಸಂಗ್ರಹಿಸಿದ್ದಾರೆ. ದೆಹಲಿ ನಾಯಕರು ನಮಗೆ ಕೆಲವು ಮಾರ್ಗದರ್ಶನ ನೀಡಿದ್ದಾರೆ. ಅದರ ಆಧಾರದ ಮೇಲೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕೆಲವು ಮಾನದಂಡ ನಿಗದಿ ಮಾಡಿದ್ದೇವೆ" ಎಂದು ತಿಳಿಸಿದರು.

ಪಕ್ಷದಲ್ಲಿ ಇರುವ ಅಸಮಾಧಾನ ಹೇಗೆ ಪರಿಹರಿಸಿಕೊಳ್ಳುತ್ತೀರಿ ಎಂದು ಕೇಳಿದಾಗ, "ನಮ್ಮ ಪಕ್ಷದಲ್ಲಿ ಎಲ್ಲಿ ಅಸಮಾಧಾನ ಇದೆ? ಬಿಜೆಪಿಯಲ್ಲಿ ಅಸಮಾಧಾನ ಇದ್ದು, ಅದರಿಂದ ಅವರ ನಾಯಕರ ಆಯ್ಕೆ ಮಾಡಲು ಆಗುತ್ತಿಲ್ಲ. ಈ ಬಗ್ಗೆ ನೀವು ಪ್ರಶ್ನೆ ಮಾಡುತ್ತಿಲ್ಲ. ಸರ್ಕಾರ ರಚನೆ ಆಗಿ ಐದಾರು ತಿಂಗಳು ಕಳೆದರೂ ವಿರೋಧ ಪಕ್ಷದ ನಾಯಕ ಸ್ಥಾನ ಆಯ್ಕೆ ಆಗದ ಇತಿಹಾಸವನ್ನು ರಾಜ್ಯ ಅಥವಾ ದೇಶದಲ್ಲಿ ನೋಡಿದ್ದೀರಾ?" ಎಂದು ತಿಳಿಸಿದರು.

ಬಿಜೆಪಿ ಬರ ಅಧ್ಯಯನ ಪ್ರವಾಸದ ಬಗ್ಗೆ ಕೇಳಿದಾಗ, "ಅವರು ಅಧ್ಯಯನ ಮಾಡಿ ಕೇಂದ್ರ ಸರ್ಕಾರಕ್ಕೆ ವರದಿ ನೀಡಲಿ. ನಮ್ಮ ಸಚಿವರಾದ ಚೆಲುವರಾಯ ಸ್ವಾಮಿ ಹಾಗೂ ಕೃಷ್ಣಭೈರೇಗೌಡ ಅವರು ಅಧ್ಯಯನ ಮಾಡಿ ಸುಮಾರು 200 ತಾಲೂಕುಗಳನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿದ್ದಾರೆ. ಅವರು ಸುಮ್ಮನೆ ಘೋಷಣೆ ಮಾಡಿದ್ದಾರಾ? ಮಂಡ್ಯ, ಹಾವೇರಿ ಹಾಗೂ ಇತರ ಜಿಲ್ಲೆಗಳಲ್ಲಿ ಪರಿಶೀಲನಾ ಸಭೆ ನಡೆಯುತ್ತಿದೆ" ಎಂದು ತಿಳಿಸಿದರು.

ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡಿ ಹೋಗಿದೆ ನಂತರ ಏನಾಯ್ತು ಎಂದು ಕೇಳಿದಾಗ, "ನಾವು ಬರ ಪರಿಹಾರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವನೆ ಕಳಿಸಿದ್ದೇವೆ. ನಾವು ಸಾವಿರ ಕೋಟಿಯಷ್ಟು ಹಣವನ್ನು ಮೀಸಲು ಇಟ್ಟಿದ್ದೇವೆ" ಎಂದು ತಿಳಿಸಿದರು.

 

ರಾಜ್ಯವನ್ನು ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷಗಳಾಗಿವೆ. ರಾಜ್ಯದ ಜನ ಹಾಗೂ ಸರ್ಕಾರಕ್ಕೆ ಈ ಸುವರ್ಣ ಹಬ್ಬ ಆಚರಿಸಲು ಒಂದು ಅವಕಾಶ ಇದೆ. ಇಡೀ ವರ್ಷ ಸಂಭ್ರಮಾಚರಣೆಗೆ ಸರ್ಕಾರ ತೀರ್ಮಾನ ಮಾಡಿದೆ.

ಕನ್ನಡ ಜ್ಯೋತಿಗೆ ಚಾಲನೆ ನೀಡಲಾಗಿದೆ. ಅದರ ಮುಂದುವರಿದ ಭಾಗವಾಗಿ ಗದಗದಲ್ಲಿ ಕಾರ್ಯಕ್ರಮ ಇಟ್ಟುಕೊಂಡಿದ್ದೇವೆ. ಈ ಸುವರ್ಣ ವರ್ಷಾಚರಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈಗಾಗಲೇ ಭುವನೇಶ್ವರಿ ಭವನ ನಿರ್ಮಾಣ ಘೋಷಣೆ ಮಾಡಿದ್ದಾರೆ ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ