Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅಲ್ಲಮಪ್ರಭುದೇವರ ಹೆಸರಿಡುವ ನಿರ್ಧಾರ ಸ್ವಾಗತಿಸಿದ ಸ್ವಾಮೀಜಿ

 

ಶಿವಮೊಗ್ಗ :
ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದು ನಮಗೆ ಅಪಾರ ಸಂತೋಷ ಉಂಟು ಮಾಡಿದೆ.

ಇದು ಶ್ರೀ ಬಸವ ಮರುಳಸಿದ್ಧ ಸ್ವಾಮಿಗಳವರು
ಶ್ರೀ ಬಸವತತ್ತ್ವ ಪೀಠ, ಚಿಕ್ಕಮಗಳೂರು
ಬಸವಕೇಂದ್ರ, ಶಿವಮೊಗ್ಗ ಅವರ ಪ್ರತಿಕ್ರಿಯೆ.

2019ರ ಜನವರಿಯಲ್ಲಿ ಶಿವರಾತ್ರೀಶ್ವರರ 1059ನೆಯ ಜಯಂತಿ ಮಹೋತ್ಸವವನ್ನು ಆಚರಿಸುವಾಗ ಈ ಜಾಗಕ್ಕೆ ಅಲ್ಲಮಪ್ರಭು ಬಯಲು ಎಂದೇ ನಾಮಕರಣ ಮಾಡಿದ್ದು, ಅದನ್ನು ಹಾಗೆಯೇ ಕರೆಯಬೇಕೆಂದು ಶರಣ ಬಿ. ಎಸ್. ಯಡಿಯೂರಪ್ಪನವರ ಅಧ್ಯಕ್ಷತೆಯ ಬಹಿರಂಗ ಸಮಾರಂಭದಲ್ಲಿ ಸುತ್ತೂರು ಜಗದ್ಗುರುಗಳವರು ಸೂಚಿಸಿದ್ದರು. ಅಂದು ಎಲ್ಲ ಜನಸಮುದಾಯದ ಒಪ್ಪಿಗೆಯಿಂದ ಘೋಷಿಸಿದ್ದ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಅಧಿಕೃತವಾಗಿ ಘೋಷಿಸಿರುವುದು, 12ನೆಯ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರಿಂದ ಸ್ಥಾಪಿಸಲ್ಪಟ್ಟ ಜಗತ್ತಿನ ಪ್ರಜಾಪ್ರಭುತ್ವದ ತಂದೆಯೆಂದೇ ಖ್ಯಾತಿವೆತ್ತ ಅನುಭವ ಮಂಟಪಕ್ಕೆ ಸಂದ ಗೌರವವೆಂದು ಭಾವಿಸಿಕೊಂಡಿದ್ದೇವೆ.

ಕನ್ನಡದ ಪ್ರಥಮ ಅನುಭಾವಿ ಕವಿ, ಬಯಲು ತತ್ತ್ವದ ಪ್ರತಿಪಾದನೆ ಮಾಡಿದ ದಾರ್ಶನಿಕ, ಶೂನ್ಯಪೀಠದ ಪ್ರಥಮ ಅಧ್ಯಕ್ಷ, ಪ್ರಜಾಪ್ರಭುತ್ವದ ಮೊದಲ ಮಾದರಿ ಅನುಭವ ಮಂಟಪದ ಪ್ರಥಮ ಅಧ್ಯಕ್ಷ, ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿಯಲ್ಲಿ ಜನಿಸಿದ ಮಹಾಶರಣ ಅಲ್ಲಮಪ್ರಭುದೇವರ ಹೆಸರನ್ನು ಶಿವಮೊಗ್ಗ ನಗರದ ಹಳೇ ಕಾರಾಗೃಹದ ಮೈದಾನಕ್ಕೆ ಇಡುವುದು ಸೂಕ್ತ ಎಂದು ಘೋಷಿಸಿದ ನಾಡಿನ ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಹಾಗೂ ಈ ವಿಷಯದ ಕುರಿತಾಗಿ ದನಿ ಎತ್ತಿ ಮುಖ್ಯಮಂತ್ರಿಗಳ ಗಮನಸೆಳೆದ ಸಚಿವ ಮಧು ಬಂಗಾರಪ್ಪ ಅವರಿಗೆ ಜಿಲ್ಲೆಯ ಎಲ್ಲಾ ಮಠಾಧೀಶರ ಪರವಾಗಿ ಹಾಗೂ ಸಮಾಜ ಬಾಂಧವರ ಪರವಾಗಿ ಹೃತ್ಪೂರ್ವಕ ಕೃತಜ್ಞತೆಗಳನ್ನು ತಿಳಿಸುತ್ತಿದ್ದೇವೆ ಎಂದು ಹೇಳಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ