ಬೆಂಗಳೂರು: 'ಮೇ ಎರಡನೇ ಅಥವಾ ಮೂರನೇ ವಾರಕ್ಕೆ ಸಿಹಿಸುದ್ದಿ ಕೊಡ್ತವೆಂದು ಹೈಕಮಾಂಡ್ ನಾಯಕರು ಹೇಳಿದ್ದಾರೆ' ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, 'ನಾವು ದೆಹಲಿಗೆ ಹೋಗಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿದ್ದೇವೆ. ಮಲ್ಲಿಕಾರ್ಜುನ ಖರ್ಗೆಯವರೂ ನಮ್ಮ ಜೊತೆ ಮಾತನಾಡಿದ್ದಾರೆ' ಎಂದರು.
'ಮತ್ತೊಂದು ಸಭೆ ಸೇರಲು ಶಾಸಕರು ಒತ್ತಾಯಿಸುತ್ತಿದ್ದಾರೆ. ಉಪಚುನಾವಣೆ ಫಲಿತಾಂಶದ ಬಳಿಕ 40 ಜನ ಮತ್ತೆ ಹೈಕಮಾಂಡ್ ನಾಯಕರ ಭೇಟಿಗೆ ಹೋಗುತ್ತೇವೆ' ಎಂದೂ ಹೇಳಿದರು.
ಡಿ.ಕೆ. ಶಿವಕುಮಾರ್ ಅವರಿಗೆ ಹೈಕಮಾಂಡ್ ಹುಟ್ಟುಹಬ್ಬದ ಕೊಡುಗೆ ನೀಡುವ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ 'ಗಿಫ್ಟ್ ಕೊಡೋದು, ಬಿಡೋದು ಹೈಕಮಾಂಡ್ ಗೆ ಬಿಟ್ಟ ವಿಚಾರ. ಡಿಕೆಶಿಯವರಿಗೆ ಅಡ್ವಾನ್ಸ್ ಹ್ಯಾಪಿ ಬರ್ತ್ ಡೇ ಹೇಳೇನೆ' ಎಂದರು.