Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕೊಲ್ಲೂರು ಮೂಕಾಂಬಿಕೆ ದೇವಿ ದರ್ಶನ ಪಡೆದು ಬೆಳ್ಳಿ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ

ಉಡುಪಿ : ತಮಿಳುನಾಡು ಮುಖ್ಯಮಂತ್ರಿ ವಿಜಯ ಅವರು ಇಂದು, ಶುಕ್ರವಾರ (ಜೂನ್‌ 12) ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ವಿಜಯ ಅವರನ್ನು ದೇವಸ್ಥಾನದ ಆಡಳಿತ ಮಂಡಳಿಯ ಟ್ರಸ್ಟಿಗಳು ಸ್ವಾಗತಿಸಿದರು. ಬಳಿಕ ಅರ್ಚಕರು ಮಂತ್ರ ಘೋಷದೊಂದಿಗೆ ಅವರನ್ನು ದೇವಾಲಯದ ಒಳಗೆ ಬರಮಾಡಿಕೊಂಡರು.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಆಗಮಿಸಿರುವ ವಿಜಯ ಅವರ ಭೇಟಿ ಗಮನ ಸೆಳೆದಿತ್ತು. ಸರ್ಕಾರದ ಪ್ರೋಟೋಕಾಲ್ ಅನ್ವಯ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ದೇವಾಲಯಕ್ಕೆ ಭೇಟಿ ನೀಡಿದ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಪ್ರಾರ್ಥನೆ ಸಲ್ಲಿಸಿದರು. ನಂತರ ದೇವಿಗೆ ವಿಶೇಷ ಕಾಣಿಕೆಯನ್ನೂ ಅರ್ಪಿಸಿದರು. ದೇವಿಗೆ ರೇಷ್ಮೆ ಸೀರೆ, ಫಲ-ತಾಂಬೂಲ ಅರ್ಪಿಸಿದ ವಿಜಯ ಕಾಲ ಕಾಲ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನ ಅರ್ಚಕ ರಾಮಚಂದ್ರ ಅಡಿಗ ಅವರ ನೇತೃತ್ವದಲ್ಲಿ ಸಂಕಲ್ಪ ಪೂಜೆ ನೆರವೇರಿಸಲಾಯಿತು. ಬಳಿಕ ದೇವಿಗೆ 1.60 ಕಿಲೋ ತೂಕದ ಬೆಳ್ಳಿ ಖಡ್ಗವನ್ನ ಕಾಣಿಕೆಯಾಗಿ ಅರ್ಪಿಸಿದ್ದಾರೆ. ಸಂಕಲ್ಪ ಪೂಜೆ ಬಳಿಕ ದೀಪಾರಾಧನೆ ಮಾಡಲಾಯಿತು. ಈ ವೇಳೆ ಸಿಎಂಗೆ ಅರ್ಚಕರು ರಕ್ಷಾ ದಾರ ಕಟ್ಟಿದರು. ಪೂಜೆ ಬಳಿಕ ದೇವಸ್ಥಾನ ವೀಕ್ಷಿಸಿ ಕೆಲಕಾಲ ಮಾತುಕತೆ ನಡೆಸಿದರು. ನಂತರ ಅಲ್ಲಿಂದ ತೆರಳಿದರು.

 ವಿಶೇಷ ವಿಮಾನದಲ್ಲಿ ಮಧ್ಯಾಹ್ನ 1:20 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ವಿಜಯ ಅವರನ್ನು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡರು. ಅವರು ಮಂಗಳೂರಿನಿಂದ ಸುಮಾರು 120 ಕಿ.ಮೀ ದೂರದಲ್ಲಿರುವ ಬೈಂದೂರು ತಾಲೂಕಿನ ಕೊಲ್ಲೂರಿಗೆ ಎಂಟು ಕಾರುಗಳು ಮತ್ತು ಹಲವಾರು ಬೆಂಗಾವಲು ವಾಹನಗಳನ್ನು ಒಳಗೊಂಡ ಬೆಂಗಾವಲು ವಾಹನದಲ್ಲಿ ರಸ್ತೆ ಮೂಲಕ ಪ್ರಯಾಣಿಸಿದರು. ಕರ್ನಾಟಕ ಪೊಲೀಸ್ ಸಿಬ್ಬಂದಿ ಮಾರ್ಗದುದ್ದಕ್ಕೂ ಭದ್ರತೆ ಒದಗಿಸಿದರು. ಆದರೆ ತಮಿಳುನಾಡು ಪೊಲೀಸರ ತಂಡವು ಅವರೊಂದಿಗೆ ಇತ್ತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮಜಿಮ್ ಖಾನಾ ಕ್ಲಬ್‌ನಲ್ಲಿ ನಡೆದ ಫೈರಿಂಗ್ ಪ್ರಕರಣದ ಆರೋಪಿ ಬಂಧನ