Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತಮಿಳುನಾಡು ಚುನಾವಣೆ 2026: ಮುಖ್ಯಮಂತ್ರಿ ಸ್ಟಾಲಿನ್‌ಗೆ ಆಘಾತಕಾರಿ ಸೋಲು

 ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆ 2026ರ ಫಲಿತಾಂಶದಲ್ಲಿ ಆಡಳಿತಾರೂಢ ಡಿಎಂಕೆ (DMK) ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ.

 ತಮಿಳುನಾಡಿನ ಮುಖ್ಯಮಂತ್ರಿ ಹಾಗೂ ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರು ತಮ್ಮ ಭದ್ರಕೋಟೆಯಾದ ಕೊಳತ್ತೂರು ಕ್ಷೇತ್ರದಲ್ಲಿ ಪರಾಭವಗೊಂಡಿದ್ದಾರೆ. ನಟ ವಿಜಯ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಭ್ಯರ್ಥಿ ವಿ.ಎಸ್. ಬಾಬು ಅವರು ಸ್ಟಾಲಿನ್ ವಿರುದ್ಧ 9,122 ಮತಗಳ ಅಂತರದಿಂದ ಭರ್ಜರಿ ಜಯ ದಾಖಲಿಸಿದ್ದಾರೆ.

ಮತ ಎಣಿಕೆಯ ಆರಂಭದಿಂದಲೂ ಚೆನ್ನೈನ ಬಹುತೇಕ ಕ್ಷೇತ್ರಗಳಲ್ಲಿ ಟಿವಿಕೆ ಪ್ರಾಬಲ್ಯ ಮೆರೆದಿದೆ.
ಒಟ್ಟು 82,110 ಮತಗಳನ್ನು ಪಡೆದ ವಿ.ಎಸ್. ಬಾಬು ಅವರು ಸ್ಟಾಲಿನ್ ಅವರನ್ನು ಮಣಿಸುವಲ್ಲಿ ಯಶಸ್ವಿಯಾದರು. ಸ್ಟಾಲಿನ್‌ ಅವರು 72,988 ಮತಗಳನ್ನು ಪಡೆದರು.

ಕೈಕೊಟ್ಟ ಭದ್ರಕೋಟೆ: 2011ರಿಂದಲೂ ಕೊಳತ್ತೂರು ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಸ್ಟಾಲಿನ್ ಅವರಿಗೆ ಇದು ಮೊದಲ ಸೋಲು. 2021ರಲ್ಲಿ ಅವರು ಬರೋಬ್ಬರಿ 70,000 ಮತಗಳ ಅಂತರದಿಂದ ಜಯಗಳಿಸಿದ್ದರು.

ಯಾರು ಈ ವಿ.ಎಸ್. ಬಾಬು?  
75 ವರ್ಷದ ಹಿರಿಯ ರಾಜಕಾರಣಿ ವಿ.ಎಸ್. ಬಾಬು ಅವರು ಈ ಹಿಂದೆ ಡಿಎಂಕೆ ಮತ್ತು ಎಐಎಡಿಎಂಕೆ ಎರಡೂ ಪಕ್ಷಗಳಲ್ಲಿ ಗುರುತಿಸಿಕೊಂಡಿದ್ದರು. 2006 ರಿಂದ 2011 ರವರೆಗೆ ಪುರಸವಾಲ್ಕಂ ಕ್ಷೇತ್ರದ ಶಾಸಕರಾಗಿದ್ದರು.
ಹಿಂದೆ ಡಿಎಂಕೆಯ ಉತ್ತರ ಚೆನ್ನೈ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಇವರು, 2011ರಲ್ಲಿ ಸ್ಟಾಲಿನ್ ಅವರ ಅಲ್ಪ ಮತಗಳ ಅಂತರದ ಜಯದ ನಂತರ ಪಕ್ಷದಿಂದ ದೂರವಾಗಿದ್ದರು. ಇತ್ತೀಚೆಗಷ್ಟೇ ನಟ ವಿಜಯ ಅವರ ಟಿವಿಕೆ ಪಕ್ಷಕ್ಕೆ ಸೇರ್ಪಡೆಯಾಗಿದ್ದ ಇವರು, ಪ್ರಸ್ತುತ ಪಕ್ಷದ ಜಂಟಿ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ.
ತಮಿಳುನಾಡಿನ ವಿಧಾನಸಭೆ ಚುನಾವಣೆಯ ಫಲಿತಾಂಶದ ಟ್ರೆಂಡ್‌ಗಳ ಪ್ರಕಾರ, ತಮಿಳುನಾಡಿನಾದ್ಯಂತ ಟಿವಿಕೆ 108 ಸ್ಥಾನಗಳಲ್ಲಿ ಮುಂದಿದೆ. ಡಿಎಂಕೆ 72 ಸ್ಥಾನಗಳು ಹಾಗೂ ಎಐಎಡಿಎಂಕೆ 53 ಸ್ಥಾನಗಳಲ್ಲಿ ಮುಂದಿದೆ.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ