Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೆಲಂಗಾಣ ರಾಜ್ಯಪಾಲರ ಹುದ್ದೆಗೆ ತಮಿಳಿಸೈ ಸೌಂದರರಾಜನ್ ರಾಜೀನಾಮೆ

ಹೈದರಾಬಾದ್‌ : ಲೋಕಸಭೆ ಚುನಾವಣೆಗೆ ಮುನ್ನ ತೆಲಂಗಾಣ ರಾಜ್ಯಪಾಲ ಮತ್ತು ಪುದುಚೇರಿ ಲೆಫ್ಟಿನೆಂಟ್ ಗವರ್ನರ್ ಹುದ್ದೆಗೆ ತಮಿಳಿಸೈ ಸೌಂದರರಾಜನ್ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಈ ಬೆಳವಣಿಗೆಯನ್ನು ಪುದುಚೇರಿ ರಾಜಭವನ ಖಚಿತಪಡಿಸಿದೆ. ವರದಿಗಳ ಪ್ರಕಾರ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯಿದೆ.
“ತೆಲಂಗಾಣದ ಗೌರವಾನ್ವಿತ ರಾಜ್ಯಪಾಲರು ಮತ್ತು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಡಾ ತಮಿಳಿಸೈ ಸೌಂದರರಾಜನ್ ಅವರು ತಕ್ಷಣದಿಂದ ಜಾರಿಗೆ ಬರುವಂತೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜೀನಾಮೆಯನ್ನು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗಿದೆ” ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ತಮಿಳಿಸೈ ಸೌಂದರರಾಜನ್ ಯಾರು?
ತಮಿಳಿಸೈ ಸೌಂದರರಾಜನ್ ತಮಿಳುನಾಡು ಬಿಜೆಪಿ ಮಾಜಿ ಮುಖ್ಯಸ್ಥರು. ಅವರನ್ನು ಸೆಪ್ಟೆಂಬರ್ 2019 ರಲ್ಲಿ ತೆಲಂಗಾಣ ರಾಜ್ಯಪಾಲರನ್ನಾಗಿ ನೇಮಿಸಲಾಯಿತು. ಕಿರಣ್ ಬೇಡಿ ಅವರನ್ನು ಹುದ್ದೆಯಿಂದ ತೆಗೆದ ನಂತರ ಅವರಿಗೆ ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಹೆಚ್ಚುವರಿ ಜವಾಬ್ದಾರಿ ನೀಡಲಾಯಿತು.
ಹಿರಿಯ ಕಾಂಗ್ರೆಸ್ಸಿಗರಾದ ಕುಮಾರಿ ಅನಂತನ್ ಅವರ ಪುತ್ರಿ ಸೌಂದರರಾಜನ್ ಅವರು ರಾಜ್ಯಪಾಲರಾಗಿ ಕಳುಹಿಸುವ ಮೊದಲು ಎರಡು ದಶಕಗಳಿಂದ ಬಿಜೆಪಿಯಲ್ಲಿದ್ದರು. ಪ್ರಭಾವಿ ನಾಗರ್ ಸಮುದಾಯದಿಂದ ಬಂದ ತಮಿಳಿಸೈ ಅವರು 2019 ರ ಲೋಕಸಭಾ ಚುನಾವಣೆಯಲ್ಲಿ ಡಿಎಂಕೆಯ ಕನಿಮೋಳಿ ವಿರುದ್ಧ ತೂತುಕುಡಿಯಲ್ಲಿ ಸೋತಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ