Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್

*ನೂತನ ಸಚಿವರಿಗೆ ಟಾರ್ಗೆಟ್ ಫಿಕ್ಸ್ ಮಾಡಿದ ಮುಖ್ಯಮಂತ್ರಿಗಳು*

* ನಾವು ಕೊಟ್ಟ ಗ್ಯಾರಂಟಿಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ.

* ಅಧಿಕಾರಿಗಳ ಮೇಲೆ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಿರಿ.

* ಲೋಕಸಭಾ ಚುನಾವಣೆಯಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆದ್ದು ನಾವು ನಮ್ಮ ವರಿಷ್ಠರಿಗೆ ಗಿಫ್ಟ್ ನೀಡಬೇಕು.

ಬೆಂಗಳೂರು: ಮೇ28: ಚುನಾವಣಾ ಫಲಿತಾಂಶ ಪ್ರಕಟವಾಗಿ ಹದಿನೈದು ದಿನಗಳ ಒಳಗೆ ಪೂರ್ಣ ಪ್ರಮಾಣದ ಸರ್ಕಾರವನ್ನು ಅಸ್ತಿತ್ವಕ್ಕೆ ತಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಸಚಿವರಿಗೂ ಲೋಕಸಭಾ ಚುನಾವಣೆಗೆ ಸಂಬಂಧಪಟ್ಟಂತೆ ಟಾರ್ಗೆಟ್ ಫಿಕ್ಸ್ ಮಾಡಿದ್ದಾರೆ.

ನಾಡಿನ ಜನತೆ ಅಭೂತಪೂರ್ವ ಬಹುಮತದಿಂದ ಗೆಲ್ಲಿಸಿ ನಮಗೆ ಬಹಳ ದೊಡ್ಡ ಜವಾಬ್ದಾರಿ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಜನಪರ ಆಡಳಿತ ನೀಡಬೇಕಾದ ಹೊಣೆಗಾರಿಕೆ ನಮ್ಮ ಮೇಲಿದೆ. ಜನರ ಸಮಸ್ಯೆಗಳನ್ನು ಕೇಳಿಸಿಕೊಳ್ಳಿ. ತಮ್ಮ ತಮ್ಮ ಕ್ಷೇತ್ರದಲ್ಲೇ ಸಮಸ್ಯೆ ಬಗೆಹರಿಸಲು ಬೇಕಾದ ಕ್ರಿಯಾಶೀಲತೆಯನ್ನು ರೂಢಿಸಿಕೊಳ್ಳಿ. ಸಣ್ಣ ಪುಟ್ಟ ಕೆಲಸಗಳಿಗೂ ಕ್ಷೇತ್ರದ ಜನ ಸರ್ಕಾರಿ ಕಚೇರಿಗಳಿಗೆ ಪದೆ ಪದೆ ಅಲೆಯುವುದನ್ನು ತಪ್ಪಿಸಿ. ಜನರು ತಮ್ಮ ಕೆಲಸಗಳನ್ನು ಪೂರೈಸಿಕೊಳ್ಳಲು ಬಸ್ಸು, ರೈಲು ಹತ್ತಿಕೊಂಡು ವಿಧಾನಸೌಧಕ್ಕೆ ಬರುವ ಹೊರೆಯನ್ನು ತಪ್ಪಿಸಿ ಎಂದು ಸೂಚಿಸಿದ್ದಾರೆ.

ಒಂದು ವರ್ಷದಲ್ಲಿ ಲೋಕಸಭಾ ಚುನಾವಣೆ ಬರಲಿದೆ. ನಾವು ಕನಿಷ್ಠ 20 ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತು ವರಿಷ್ಠರಾದ ಸೋನಿಯಾಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಅವರಿಗೆ ಉಡುಗೊರೆ ನೀಡಬೇಕು. ಈ ಗುರಿ ಇಟ್ಟುಕೊಂಡು ಶ್ರದ್ದೆ, ಪ್ರಾಮಾಣಿಕತೆ ಹಾಗೂ ಚುರುಕಾಗಿ ಜವಾಬ್ದಾರಿ ನಿರ್ವಹಿಸಿ ಎಂದು ಎಲ್ಲಾ ಸಚಿವರಿಗೂ ಮನವರಿಕೆ ಮಾಡಿಸಿದ್ದಾರೆ.

ನಾವು ನೀಡಿರುವ ಗ್ಯಾರಂಟಿಗಳು ಜನರಿಗೆ ಸಮರ್ಪಕವಾಗಿ ತಲುಪುವಂತೆ ಪ್ರಾಮಾಣಿಕವಾಗಿ ಶ್ರಮಿಸಬೇಕು. ಹಿಂದಿನ ಬಾರಿಯ ತಪ್ಪುಗಳು ಈ ಬಾರಿ ಮರುಕಳಿಸಬಾರದು.

ಖಾತೆ ಹಂಚಿಕೆ ಸದ್ಯದಲ್ಲೇ ಪೂರ್ಣಗೊಳ್ಳಲಿದೆ. ನೀವೆಲ್ಲಾ ಸಕ್ರಿಯರಾಗಿ. ವಿರೋಧಪಕ್ಷದಲ್ಲಿದ್ದಾಗ ನಾವು ನಡೆಸಿದ ಹೋರಾಟದ ಫಲವಾಗಿ ಜನತೆ ಬಿಜೆಪಿಯ ದುರಾಡಳಿತವನ್ನು ತಿರಸ್ಕರಿಸಿ ನಮ್ಮ ಕೈ ಹಿಡಿದಿದ್ದಾರೆ. ಈಗ ನಾವು ಸರ್ಕಾರವನ್ನು, ಸರ್ಕಾರದ ಸವಲತ್ತುಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು. ನಮ್ಮ ಜನಪರ ನಿಷ್ಠೆ ಮತ್ತು ಕೆಲಸಗಳ ಮೂಲಕ ಮತ್ತೆ ಲೋಕಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವನ್ನು ದಾಖಲಿಸಬೇಕಿದೆ ಎಂದು ಸಚಿವರಿಗೆ ಸೂಚಿಸಿದ್ದಾರೆ.

ಕೇಂದ್ರದ ದುರಾಡಳಿತವನ್ನು ಕರ್ನಾಟಕದ ಮೂಲಕ ಕೊನೆಗೊಳಿಸಲು ಪರಿಸ್ಥಿತಿ ಹದವಾಗಿದೆ. ಇದನ್ನು ನಾವು ಮರೆಯಬಾರದು. ಹೀಗಾಗಿ ಸಚಿವರು ತಮಗೆ ಉಸ್ತುವಾರಿ ವಹಿಸಲಾಗುವ ಜಿಲ್ಲೆಗಳಿಗೆ ಹೆಚ್ಚೆಚ್ಚು ಪ್ರವಾಸ ಮಾಡಬೇಕು. ಜಿಲ್ಲೆ, ತಾಲ್ಲೂಕು ಮಟ್ಟದಲ್ಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಅಧಿಕಾರಿಗಳ ಮೇಲೆ ಕಟ್ಟು ನಿಟ್ಟಿನ ನಿಗಾ ಇಟ್ಟು ಭ್ರಷ್ಟಾಚಾರಕ್ಕೆ ಬರೆ ಎಳೆಯಬೇಕು ಎಂದು ಮುಖ್ಯಮಂತ್ರಿಗಳು ಎಲ್ಲಾ ಸಚಿವರಿಗೂ ಟಾರ್ಗೆಟ್ ನೀಡಿ ಶುಭ ಹಾರೈಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ