Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ತೆರಿಗೆ ವಂಚನೆ-ತೆರಿಗೆ ಸೋರಿಕೆ-ತೆರಿಗೆ ಕಳ್ಳತನದ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ಸಿಎಂ ಸೂಚನೆ

 

 

ಬೆಂಗಳೂರು :
ರಾಜ್ಯದಲ್ಲಿ ತೆರಿಗೆ ವಂಚನೆ, ತೆರಿಗೆ ಸೋರಿಕೆ, ತೆರಿಗೆ ಕಳ್ಳತನ ಪ್ರಕರಣಗಳ ಬಗ್ಗೆ ತೀವ್ರ ನಿಗಾ ವಹಿಸಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಾಣಿಜ್ಯ ತೆರಿಗೆ ಇಲಾಖೆಯ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚಿದೆ ಎಂದು ಮೆಚ್ವುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಇಷ್ಟಕ್ಕೆ ಸಮಾಧಾನ ಪಟ್ಟುಕೊಳ್ಳದೆ ತೆರಿಗೆ ವಂಚಿಕೆ ಪ್ರಕರಣಗಳನ್ನು ಹೆಚ್ಚೆಚ್ಚು ಪತ್ತೆ ಹಚ್ಚಿ ತೆರಿಗೆ ಸಂಗ್ರಹ ಗುರಿಯನ್ನು ದಾಟಿ ಸಾಧನೆ ಮಾಡುವ ಅವಕಾಶಗಳಿವೆ. ಇದನ್ನು ಸಾಧಿಸಿ ತೋರಿಸಿ ಎಂದರು.

ಇಲಾಖೆಯು enforcement ಅನ್ನು ಇನ್ನಷ್ಟು ತೀವ್ರವಾಗಿ ನಡೆಸುವ ಮೂಲಕ ತೆರಿಗೆ ವಂಚನೆ ತಡೆಗಟ್ಟುವ ಕಡೆಗೆ ಹೆಚ್ಚು ಆಸಕ್ತಿ ಕೊಡಬೇಕು ಎಂದರು.

ಬೆಳವಣಿಗೆ ದರವು ಶೇ. 19.2 ರಷ್ಟಿದ್ದು, ದೇಶದಲ್ಲಿಯೇ ಅತಿ ಹೆಚ್ಚು. ದೇಶದ ಸರಾಸರಿ ತೆರಿಗೆ ಸಂಗ್ರಹ ಬೆಳವಣಿಗೆ ದರ ಶೇ.15 ರಷ್ಟು ಮಾತ್ರ ಇದೆ. ದೇಶದ ಒಟ್ಟಾರೆ ತೆರಿಗೆ ಸಂಗ್ರಹದಲ್ಲಿ ರಾಜ್ಯದ ಪಾಲು ಶೇ. 9.4 ರಷ್ಟಿದೆ. ಕಳೆದ ಬಾರಿಗಿಂತ ಈ ಬಾರಿ ರಾಜ್ಯದ ಪಾಲು ಹೆಚ್ಚಾಗಿದೆ ಎಂದು ಅಧಿಕಾರಿಗಳು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಶೇ. 24ರ ಬೆಳವಣಿಗೆ ಗುರಿಯನ್ನು ನೀಡಲಾಗಿರುವುದನ್ನುವಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಈ ಗುರಿ ದಾಟಿ ಸಾಧಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಲ್ಲದೆ
ತೆರಿಗೆ ವಂಚನೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವ ಮೂಲಕ ತೆರಿಗೆ ಸೋರಿಕೆ ತಡೆಗಟ್ಟಲು ನಿರ್ದೇಶನ ನೀಡಿದರು.

ಗುರಿಗಿಂತ ಹೆಚ್ಚಿನ ಸಾಧನೆಯಾಗಬೇಕು. ಹಿಂದೆ ಉಳಿದವರು ಎಲ್ಲ ಪ್ರಯತ್ನ ಮಾಡಬೇಕು. ಜಾಗೃತ ದಳದವರು ಸಹಕರಿಸಬೇಕು. ಎರಡು ತಿಂಗಳ ನಂತರ ಮತ್ತೆ ಪ್ರಗತಿ ಪರಿಶೀಲಿಸಲಾಗುವುದು. ಆ ವೇಳೆಗೆ ಇನ್ನಷ್ಟು ಪ್ರಗತಿಯ ವರದಿ ನೀಡಿ. ಮುಂದಿನ ಸಭೆ ವೇಳೆಗೆ ಒಟ್ಟಾರೆ ಪರಿಸ್ಥಿತಿ ಈಗಿರುವುದಕ್ಕಿಂತ ಹೆಚ್ವು ಆಶಾದಾಯವಾಗಿರುವಂತೆ ಕ್ರಮ ವಹಿಸಿ ಎಂದರು.

ತೆರಿಗೆ ಕಳ್ಳತನ ತಡೆಯುವುದಕ್ಕಾಗಿ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ನಿಮ್ಮ ಪ್ರಯತ್ನದಿಂದ ರಾಜ್ಯಕ್ಕೆ ಹೆಚ್ಚು ತೆರಿಗೆ ಬರಲು ಸಾಧ್ಯ. ಅನೇಕ ಭಾಗಗಳಲ್ಲಿ ಅನೇಕ ಉತ್ಪನ್ನಗಳಲ್ಲಿ ತೆರಿಗೆ ವಂಚನೆ ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಹೆಚ್ಚಿನ ಗಮನಹರಿಸಿ ತೆರಿಗೆ ಸಂಗ್ರಹಿಸಬೇಕು. ಹೆಚ್ಚು ತೆರಿಗೆ ಸಂಗ್ರಹ ಮಾಡಿದರೆ ಅಭಿವೃದ್ಧಿ ಕೆಲಸ ಮಾಡಲು ಹೆಚ್ಚು ಅನುಕೂಲವಾಗುತ್ತದೆ. ಸಾಮೂಹಿಕ ಜವಾಬ್ದಾರಿ ಹೊತ್ತು ಕೆಲಸ ಮಾಡಬೇಕು ಎಂದು ಸೂಚಿಸಿದರು.

ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್‌ ಗೋಯಲ್‌, ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್‌, ಹಣಕಾಸು ಇಲಾಖೆಯ ಕಾರ್ಯದರ್ಶಿಗಳಾದ ಡಾ. ಪಿ.ಸಿ. ಜಾಫರ್‌ ಹಾಗೂ ಡಾ. ಎಂ.ಟಿ. ರೇಜು, ವಾಣಿಜ್ಯ ತೆರಿಗೆ ಇಲಾಖೆ ಆಯುಕ್ತೆ ಸಿ.ಶಿಖಾ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ. ಗೋವಿಂದರಾಜು ಮತ್ತು ನಸೀರ್‌ ಅಹ್ಮದ್‌ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ