Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆರೋಗ್ಯ ಸೇವೆ ವಿಸ್ತರಿಸುವಲ್ಲಿ ತಂತ್ರಜ್ಞಾನ ಸೇವೆ ಮಹತ್ವದ್ದು

 

ಬೆಳಗಾವಿ:
ನೆಹರು ನಗರದ ಕೆಎಲ್‌ಇ ಸಂಸ್ಥೆಯ ವಿ.ಕೆ.ದಂತ ಮಹಾವಿದ್ಯಾಲಯದಲ್ಲಿ ಮಕ್ಕಳ ಮತ್ತು ಪ್ರಿವೆಂಟಿವ್ ಡೆಂಟಿಸ್ಟ್ರಿ ವಿಭಾಗ, ಕಾಹೆರ್, ಕೆಎಲ್ಇ ವಿ.ಕೆ. ದಂತ ವಿಜ್ಞಾನ ಸಂಸ್ಥೆ, ಮಕ್ಕಳ ನರವಿಜ್ಞಾನ ವಿಭಾಗ, ಜವಾಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಮಕ್ಕಳ ಆರೋಗ್ಯ ಶುಶ್ರೂಷೆ ವಿಭಾಗ, ಕಾಹೆರ್ ಕೆಎಲ್ಇ ಸಂಸ್ಥೆ ಜಂಟಿಯಾಗಿ ಅಂತರಾಷ್ಟ್ರೀಯ ವಿಕಲಚೇತನರ ದಿನವನ್ನು ಆಚರಿಸಲಾಯಿತು.

ಕೆಎಲ್‌ಇ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ವಿಶೇಷ ಆರೋಗ್ಯ ರಕ್ಷಣೆ ಅಗತ್ಯವಿರುವ ಮಕ್ಕಳಿಗಾಗಿ ವಿಶೇಷ ಶಿಬಿರವನ್ನು ಆಯೋಜಿಸಲಾಗಿತ್ತು.

ವಿಶೇಷ ಆರೋಗ್ಯ ರಕ್ಷಣೆಯ ಅಗತ್ಯವಿರುವ ಒಟ್ಟು 40-45 ಮಕ್ಕಳನ್ನು ಮೌಖಿಕ ಆರೋಗ್ಯ ಪರೀಕ್ಷಿಸಿ ಅವರ ಪೋಷಕರಿಗೆ ಸರಿಯಾದ ಆಹಾರ ಮತ್ತು ಮೌಖಿಕ ಆರೋಗ್ಯ ನಿರ್ವಹಣೆಯ ಕುರಿತು ತರಬೇತಿಯನ್ನು ನೀಡಲಾಯಿತು.

ಸಮಾರೋಪ ಸಮಾರಂಭವನ್ನು ಕಾಹೆರ್ ಕೆಎಲ್ಇ ವಿಕೆ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್‌ನಲ್ಲಿ ನಡೆಸಲಾಯಿತು. ಕಾಹೆರ್ ಕುಲಸಚಿವ ಡಾ.ಎಂ.ಎಸ್. ಗಣಾಚಾರಿ ಮಾತನಾಡಿ, ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ಆರೋಗ್ಯ ಸೇವೆ ಒದಗಿಸುವಲ್ಲಿ ತಂತ್ರಜ್ಞಾನದ ಬಳಕೆಯ ಅಗತ್ಯವನ್ನು ಒತ್ತಿ ಹೇಳಿದರು. ಅಂತಹ ಮಕ್ಕಳ ಜೀವನದ ಗುಣಮಟ್ಟವನ್ನು ಸುಧಾರಿಸಲು ಹೆಚ್ಚಿನ ಸಂಶೋಧನೆ ಮತ್ತು ಪೇಟೆಂಟ್‌ಗಳನ್ನು ಉತ್ಪಾದಿಸಬೇಕು ಎಂದು ಅವರು ಮನವಿ ಮಾಡಿದರು.

ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯೆ ಡಾ. ಪ್ರೀತಿ ದೊಡ್ಡವಾಡ, ಜವಾಹರಲಾಲ್ ನೆಹರು ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ. ಎನ್.ಎಸ್.ಮಹಾಂತಶೆಟ್ಟಿ, ಕೆಎಎಚ್‌ಇಆರ್‌ಎಸ್ ಇನ್‌ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಚಾರ್ಯ ಡಾ.ವೀರೇಶ ನಾಡಗೌಡ ಗೌರವ ಅತಿಥಿಗಳಾಗಿದ್ದರು.

ಕೆಎಲ್ ಇ ವಿ.ಕೆ. ದಂತ ವಿಜ್ಞಾನ ಸಂಸ್ಥೆಯ ಪ್ರಾಚಾರ್ಯೆ
ಡಾ.ಅಲ್ಕಾ ಕಾಳೆ ಅಧ್ಯಕ್ಷತೆ ವಹಿಸಿದ್ದರು.

ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯರಾದ
ಡಾ.ಶಿವಯೋಗಿ ಹೂಗಾರ, ಡಾ. ಮಹೇಶ ಕಮತೆ ವಿಶೇಷ ಉಪನ್ಯಾಸ ನೀಡಿದರು. ಡಾ .ಚಂದ್ರಶೇಖರ ಕಾರ್ಯಕ್ರಮದ ಕುರಿತು ವಿವರಿಸಿದರು.ಡಾ.ವಿದ್ಯಾವತಿ ಪರಿಚಯಿಸಿದರು. ಡಾ.ನೀರಜ್ ವಂದಿಸಿದರು. ಡಾ. ಶೇತಾ ನಿರೂಪಿಸಿದರು.
ವಿ.ಕೆ.ದಂತ ಮಹಾವಿದ್ಯಾಲಯ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ