Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಂಗಳೂರು ಲಾಡ್ಜ್​ನಲ್ಲಿ ತೀರ್ಥಹಳ್ಳಿ‌ ತಹಶೀಲ್ದಾರ್ ಶವವಾಗಿ ಪತ್ತೆ

ಬೆಂಗಳೂರು : ತೀರ್ಥಹಳ್ಳಿ ತಹಶೀಲ್ದಾರ ಅವರು ಬೆಂಗಳೂರಿನ ಲಾಡ್ಜ್​ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರು ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.

ತೀರ್ಥಹಳ್ಳಿ ತಹಶೀಲ್ದಾರ ಜಕ್ಕಣ್ಣ ಗೌಡರ್ (54) ಅವರು ನ್ಯಾಯಾಲಯದ ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಜಕ್ಕಣ್ಣ ಗಾಂಧಿನಗರ ಬಳಿಯ ಲಾಡ್ಜ್​ ಒಂದರಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಬುಧವಾರ ಮಧ್ಯಾಹ್ನದಿಂದ ಕುಟುಂಬದವರು ಹಾಗೂ ಅಧಿಕಾರಿಗಳ ಫೋನ್​ ಕರೆಗೆ ಯಾವುದೇ ಪ್ರತಿಕ್ರಿಯೆ ನೀಡಿದ ಕಾರಣ ಪೊಲೀಸರು ಹುಡುಕಾಟ ನಡೆಸಿದ್ದರು. ಮೊಬೈಲ್​ ಲೊಕೇಷನ್ ಚೆಕ್ ಮಾಡಿದಾಗ ಲಾಡ್ಜ್​​ನಲ್ಲಿ ಇರುವ ಕುರಿತು ಮಾಹಿತಿ ಲಭ್ಯವಾಗಿತ್ತು.ನಂತರ ಬಳಿಕ ಲಾಡ್ಜ್​ನ ರೂಂಗೆ ಹೋಗಿ ನೋಡಿದಾಗ ಜಕ್ಕಣ್ಣ ಗೌಡರ್ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಗದಗ ಜಿಲ್ಲೆಯವರಾದ ಜಕ್ಕಣ್ಣಗೌಡರು ತೀರ್ಥಹಳ್ಳಿಯಲ್ಲಿ ತಹಶೀಲ್ದಾರರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಸದ್ಯ ಅವರ ಶವವನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ ಒಂದು ವರ್ಷದಿಂದ ಜಕ್ಕಣ್ಣ ಗೌಡರ್​​ ತೀರ್ಥಹಳ್ಳಿಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಅವರ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ