Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ.

ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ಮುನ್ನೆಚ್ಚರಿಕೆ ನೀಡಿದೆ. ಉತ್ತರ ಕರ್ನಾಟಕದ ಕೆಲವು ಪ್ರದೇಶಗಳು ಸೇರಿದಂತೆ ರಾಜಸ್ಥಾನ, ಗುಜರಾತ್‌, ಹರಿಯಾಣ, ಪಂಜಾಬ್‌, ಮಧ್ಯಪ್ರದೇಶ, ಮಹಾರಾಷ್ಟ್ರ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್‌, ಪಶ್ಚಿಮ ಬಂಗಾಳ, ಒಡಿಶಾ, ಛತ್ತೀಸ್‌ಗಢ, ತೆಲಂಗಾಣ, ತಮಿಳುನಾಡು ಮತ್ತು ಆಂಧ್ರ ಪ್ರದೇಶಗಳಲ್ಲಿ ಏಪ್ರಿಲ್‌ನಿಂದ ಜೂನ್‌ ತನಕ ಬಿಸಿ ಗಾಳಿ (Heatwave Alert) ಬೀಸುವ ಸಾಧ್ಯತೆ ಇದೆ ಎಂದು ಅದು ತಿಳಿಸಿದೆ.

ಮುಂದಿನ ದಿನಗಳಲ್ಲಿ ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ, ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಕಂಡು ಬರಲಿದೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಅಧಿಕವಾಗಿರಲಿದೆʼʼ ಎಂದು ಭಾರತೀಯ ಹವಾಮಾನ ಇಲಾಖೆ ಮುಖ್ಯಸ್ಥ ಮೃತ್ಯುಂಜಯ ಮೊಹಾಪಾತ್ರ (Mrutyunjay Mohapatra) ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಪಶ್ಚಿಮ ಮತ್ತು ಪೂರ್ವ ಭಾರತದ ಕೆಲವು ಪ್ರದೇಶಗಳನ್ನು ಹೊರತುಪಡಿಸಿ ದೇಶದ ಬಹುತೇಕ ಭಾಗಗಳು ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಇರಲಿದೆ ಎಂದು ನಿರೀಕ್ಷಿಸಲಾಗಿದೆ. ಹೆಚ್ಚಿನ ಪ್ರದೇಶಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಐಎಂಡಿ ಮುಖ್ಯಸ್ಥ ಮೃತ್ಯುಂಜಯ್ ಮೊಹಾಪಾತ್ರ ಆನ್‌ಲೈನ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಏಪ್ರಿಲ್‌ನಿಂದ ಜೂನ್‌ವರೆಗೆ, ಉತ್ತರ ಮತ್ತು ಪೂರ್ವ ಭಾರತದ ಹೆಚ್ಚಿನ ಭಾಗಗಳು, ಮಧ್ಯ ಭಾರತ ಮತ್ತು ವಾಯುವ್ಯ ಭಾರತದ ಬಯಲು ಪ್ರದೇಶಗಳು ಸಾಮಾನ್ಯಕ್ಕಿಂತ ಎರಡರಿಂದ ನಾಲ್ಕು ಹೆಚ್ಚು ಶಾಖದ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ” ಎಂದು ಅವರು ಹೇಳಿದರು.
ಸಾಮಾನ್ಯವಾಗಿ, ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ನಾಲ್ಕರಿಂದ ಏಳು ಶಾಖದ ದಿನಗಳನ್ನು ದಾಖಲಿಸುತ್ತದೆ.
ಈ ಬೇಸಿಗೆಯ ಋತುವಿನಲ್ಲಿ 9 ರಿಂದ 10 ಪ್ರತಿಶತದಷ್ಟು ಹೆಚ್ಚಿನ ವಿದ್ಯುತ್ ಬೇಡಿಕೆ ಪೂರೈಸಲು ಭಾರತ ಸಿದ್ಧವಾಗಬೇಕು ಎಂದು ತಜ್ಞರು ಎಚ್ಚರಿಸಿದ್ದಾರೆ, ದೇಶವು ಹೆಚ್ಚಿನ ಸಂಖ್ಯೆಯ ಶಾಖದ ದಿನಗಳನ್ನು ಅನುಭವಿಸುವ ನಿರೀಕ್ಷೆಯಿದೆ.

ಕಳೆದ ವರ್ಷ, ದೇಶದ ಗರಿಷ್ಠ ವಿದ್ಯುತ್ ಬೇಡಿಕೆಯು ಮೇ 30 ರಂದು 250 ಗಿಗಾವ್ಯಾಟ್‌ಗಳನ್ನು (GW) ದಾಟಿತ್ತು – ಇದು ಸಾಮಾನ್ಯಕ್ಕಿಂತ 6.3% ಹೆಚ್ಚಾಗಿತ್ತು. ಹವಾಮಾನ ಬದಲಾವಣೆಯಿಂದ ಉಂಟಾಗುವ ತಾಪಮಾನ ಹೆಚ್ಚಳವು ವಿದ್ಯುತ್ ಬೇಡಿಕೆಯನ್ನು ಹೆಚ್ಚಿಸುವ ಪ್ರಮುಖ ಅಂಶಗಳಲ್ಲಿ ಒಂದಾಗಿದೆ.
ಮುಂದಿನ ದಿನಗಳಲ್ಲಿ ವಾತಾವರಣದ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆ ವಹಿಸಬೇಕು ಎಂದು ತಜ್ಞರು ಸಲಹೆ ನೀಡಿದ್ದಾರೆ. ಬಿಸಿಲಾಘಾತದಿಂದ ರಕ್ಷಿಸಿಕೊಳ್ಳಲು ಬೆಳಗ್ಗೆ 11ರಿಂದ ಅಪರಾಹ್ನ 4ರ ತನಕ ಅನಿವಾರ್ಯವಲ್ಲದಿದ್ದರೆ ಮನೆಯಿಂದ ಹೊರಗಿಳಿಯುವುದನ್ನು ತಪ್ಪಿಸಬೇಕು. ಸಾಕಷ್ಟು ನೀರು, ತಾಜಾ ಹಣ್ಣಿನ ರಸ ಸೇವಿಸಬೇಕು. ಪ್ರಯಾಣ ಮಾಡುವಾಗ ನೀರು ಜತೆಯಲ್ಲೇ ಒಯ್ಯಬೇಕು. ಆದಷ್ಟು ಮಸಾಲೆಯುಕ್ತ ಆಹಾರ ಕಡಿಮೆ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ