Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪಶ್ಚಿಮ ಘಟ್ಟದಲ್ಲಿ ಭೂ ಪರಿವರ್ತನೆಗೆ ತಾತ್ಕಾಲಿಕ ತಡೆ

ಬೆಂಗಳೂರು: ರಾಜ್ಯದ ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ ಸಂರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪಶ್ಚಿಮ ಘಟ್ಟ ವ್ಯಾಪ್ತಿಯ ಭೂ ಉಪಯೋಗದ ಕುರಿತು ನೂತನವಾಗಿ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆಯ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.

ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿ, ಕೊಡಗಿನ ಭೂ ಕುಸಿತ ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ.

ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ (Zonal Regulation and Master plan on Land use pattern) ರೂಪಿಸುವ ವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದೆ. ಹೀಗಾಗಿ ಕೂಡಲೇ ಕ್ರಮ ವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.

ಸಾರ್ವಜನಿಕ ಮಹತ್ವದ ಯೋಜನೆಗೆ ಮಾತ್ರ ಸಮ್ಮತಿ
ಅತ್ಯಗತ್ಯವಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ