Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರೇಣುಕಾಸ್ವಾಮಿ ಕೇಸ್ ಮಾದರಿಯಲ್ಲೇ ಬಳ್ಳಾರಿಯಲ್ಲಿ ಭೀಕರ ಹತ್ಯೆ! ಹೆಂಡತಿಗೆ ಕಿರುಕುಳ ನೀಡಿದ್ದ ಯುವಕನಿಗೆ ಚಟ್ಟ ಕಟ್ಟಿದ ಪತಿ: ದಂಪತಿ ಸೇರಿ ಮೂವರ ಬಂಧನ

ಬಳ್ಳಾರಿ : ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣವನ್ನು ಹೋಲುವಂತಹ ಮತ್ತೊಂದು ಭೀಕರ ಕೊಲೆ ಪ್ರಕರಣ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ. ವಿವಾಹಿತ ಮಹಿಳೆಗೆ ಅಶ್ಲೀಲ ವಿಡಿಯೋ ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ನಿರಂತರ ಕಿರುಕುಳ ನೀಡುತ್ತಿದ್ದ ಯುವಕನನ್ನು ಮಹಿಳೆಯ ಪತಿ ಹಾಗೂ ಸಹೋದರ ಸೇರಿ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ, ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿರುವ ಆರೋಪ ಕೇಳಿಬಂದಿದೆ.

ಖಾಸಗಿ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದ ಬಸವನಗೌಡ ಪಾಟೀಲ (26) ಕೊಲೆಯಾದ ಯುವಕ. ಪ್ರಕರಣ ಸಂಬಂಧ ದೊಡ್ಡ ಬಸವನಗೌಡ, ಆತನ ಪತ್ನಿ ಶ್ವೇತಾ ಹಾಗೂ ಆಕೆಯ ಸಹೋದರ ವಿಜಯ್ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


ನಾಪತ್ತೆಯಾಗಿದ್ದ ಯುವಕ ಅರೆಬೆಂದ ಸ್ಥಿತಿಯಲ್ಲಿ ಪತ್ತೆ

ಜೂನ್ 7ರಂದು ರಾತ್ರಿ ಬಸವನಗೌಡ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದ. ಮರುದಿನ ಬೆಳಗ್ಗೆ ಮೋಕಾ ಪೊಲೀಸ್‌ ಠಾಣೆ ವ್ಯಾಪ್ತಿಯ ಶಿವಪುರ-ತಂಬ್ರಹಳ್ಳಿ ಎಲ್‌ಎಲ್‌ಸಿ ಕಾಲುವೆ ಸಮೀಪ ಅರೆಬೆಂದ ಸ್ಥಿತಿಯಲ್ಲಿ ಆತನ ಶವ ಪತ್ತೆಯಾಗಿತ್ತು. ಆರಂಭದಲ್ಲಿ ಇದೊಂದು ಪ್ರೇಮ ಪ್ರಕರಣಕ್ಕೆ ಸಂಬಂಧಿಸಿದ ಹತ್ಯೆ ಇರಬಹುದು ಎಂದು ಶಂಕಿಸಲಾಗಿತ್ತು. ಆದರೆ ತನಿಖೆ ಮುಂದುವರಿದಂತೆ ಬೆಚ್ಚಿಬೀಳಿಸುವ ಸತ್ಯಾಂಶಗಳು ಹೊರಬಿದ್ದಿವೆ.

ಒಂದು ವರ್ಷದಿಂದ ಕಿರುಕುಳ ಆರೋಪ

ಪೊಲೀಸರ ಮಾಹಿತಿ ಪ್ರಕಾರ, ಮೃತ ಬಸವನಗೌಡ ಕಳೆದ ಒಂದು ವರ್ಷದಿಂದ ವಿವಾಹಿತ ಮಹಿಳೆ ಶ್ವೇತಾಗೆ ಅಶ್ಲೀಲ ವಿಡಿಯೋಗಳು ಹಾಗೂ ಸಂದೇಶಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ಮಾನಸಿಕ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ. ಬಸವನಗೌಡನ ವರ್ತನೆಯಿಂದ ಬೇಸತ್ತ ಶ್ವೇತಾ ಈ ವಿಷಯವನ್ನು ತನ್ನ ಪತಿ ಹಾಗೂ ಸಹೋದರನಿಗೆ ತಿಳಿಸಿದ್ದಳು.

ಇದರಿಂದ ಆಕ್ರೋಶಗೊಂಡ ಮೂವರು ಸೇರಿ ಯುವಕನನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಮಹಿಳೆಯಿಂದಲೇ ಕರೆ ಮಾಡಿಸಿ ನಿರ್ಜನ ಪ್ರದೇಶಕ್ಕೆ ಕರೆಸಿಕೊಂಡಿದ್ದ ಪತಿ

ಜೂನ್ 7ರಂದು ಯೋಜನೆಯಂತೆ ಶ್ವೇತಾಳ ಮೂಲಕವೇ ಬಸವನಗೌಡನಿಗೆ ಕರೆ ಮಾಡಿ ಮೋಕಾ ಸಮೀಪದ ನಿರ್ಜನ ಪ್ರದೇಶಕ್ಕೆ ಬರಲು ಹೇಳಲಾಗಿತ್ತು. ಅಲ್ಲಿಗೆ ಬಂದ ತಕ್ಷಣ ಮೊದಲೇ ಹೊಂಚು ಹಾಕಿ ಕಾದಿದ್ದ

ಮಹಿಳೆಯ ಪತಿ ದೊಡ್ಡ ಬಸವನಗೌಡ ಮತ್ತು ಸಹೋದರ ವಿಜಯ್ ಸೇರಿ ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಬಳಿಕ ಶವವನ್ನು ಸುಮಾರು 10 ಕಿಲೋಮೀಟರ್ ದೂರದ ನಿರ್ಜನ ಪ್ರದೇಶಕ್ಕೆ ಸಾಗಿಸಿ, ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ. ಕೃತ್ಯ ಎಸಗಿದ ಬಳಿಕ ಮೂವರೂ ಬೆಂಗಳೂರಿಗೆ ಪರಾರಿಯಾಗಿದ್ದರು.

ಮೊಬೈಲ್‌ ತನಿಖೆಯಿಂದ ಬಯಲಾಯ್ತು ಸತ್ಯ

ಮೃತ ಬಸವನಗೌಡನ ಮೊಬೈಲ್ ಪರಿಶೀಲಿಸಿದ ವೇಳೆ ಆತ ಹಲವು ಮಹಿಳೆಯರಿಗೆ ಅಸಭ್ಯ ಸಂದೇಶಗಳನ್ನು ಕಳುಹಿಸಿರುವುದು ಪತ್ತೆಯಾಗಿದೆ. ಮೊಬೈಲ್ ಲೊಕೇಶನ್, ಕಾಲ್ ಡೀಟೇಲ್ಸ್ ಹಾಗೂ ತಾಂತ್ರಿಕ ಮಾಹಿತಿಗಳ ಆಧಾರದ ಮೇಲೆ ಆರೋಪಿಗಳ ಸುಳಿವು ಪತ್ತೆಹಚ್ಚಿದ ಪೊಲೀಸರು ಅವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಎಸ್ಪಿ ಹೇಳಿದ್ದೇನು?
ಪ್ರಕರಣ ಕುರಿತು ಮಾಹಿತಿ ನೀಡಿದ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆನ್ನೇಕ‌ರ್, "ಮೃತ ಯುವಕ ಮಹಿಳೆಗೆ ವಿಡಿಯೋ ಕಳುಹಿಸಿ ತನ್ನೊಂದಿಗೆ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ. ಮಹಿಳೆ ಈ ವಿಚಾರವನ್ನು ತನ್ನ ಪತಿ ಹಾಗೂ ಸಹೋದರನಿಗೆ ತಿಳಿಸಿದ್ದಳು. ಕಿರುಕುಳ ಮುಂದುವರಿದ ಹಿನ್ನೆಲೆಯಲ್ಲಿ ಆತನನ್ನು ಕೊಲೆ ಮಾಡಲು ಯೋಜನೆ ರೂಪಿಸಲಾಗಿತ್ತು. ಅದರಂತೆ ಮಹಿಳೆಯಿಂದ ಕರೆ ಮಾಡಿಸಿ ಶಿವಪುರ-ತಂಬ್ರಹಳ್ಳಿ ಕಾಲುವೆ ಸಮೀಪಕ್ಕೆ
ಕರೆಯಿಸಿಕೊಂಡು ಹಗ್ಗದಿಂದ ಕೊಲೆ ಮಾಡಲಾಗಿದೆ. ಕಾರಿನಲ್ಲೇ ಹಗ್ಗ ಹಾಗೂ ಪೆಟ್ರೋಲ್ ತಂದಿದ್ದು, ಕೊಲೆ ಬಳಿಕ ಶವಕ್ಕೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಲು ಯತ್ನಿಸಿದ್ದಾರೆ. ಬೆಂಗಳೂರಿಗೆ ಪರಾರಿಯಾಗಿದ್ದ ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ತನಿಖೆ ಮುಂದುವರಿದಿದೆ” ಎಂದು ತಿಳಿಸಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿದ್ಯಾರ್ಥಿಗಳು ವಿವಿಧ ಕೌಶಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಕರೆ: ಪ್ರವೀಣ ಗುಡಿಜಗತ್ತಿನ ಆವಿಷ್ಕಾರದಲ್ಲಿ ನ್ಯಾನೋ ತಂತ್ರಜ್ಞಾನದ ಪಾತ್ರ ಅಪಾರ: ಕುಲಪತಿ ಸಿ. ಎಂ. ತ್ಯಾಗರಾಜ ಆಡಳಿತದಲ್ಲಿ ಇನ್ಮುಂದೆ 'ಬಂಗಾಳಿ' ಕಡ್ಡಾಯ: ಪಶ್ಚಿಮ ಬಂಗಾಳ ಸಿಎಂ ಸುವೇಂದು ಘೋಷಣೆಕೌಶಲ್ಯ ಅಭಿವೃದ್ಧಿ ಯುವಕರ ಭವಿಷ್ಯದ ಕೀಲಿ ಜನರಲ್ಲಿ ಪುಸ್ತಕ ಓದುವ ಹವ್ಯಾಸ ಬೆಳೆಸುವ ಕಾರ್ಯ ಸ್ತುತ್ಯಾರ್ಹ : ಪ್ರೊ. ಹೊಸಕೋಟಿಬಿಸಿಸಿಐ ಚುನಾವಣೆ : ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆಕರ್ನಾಟಕದ ಹಲವು ಜಿಲ್ಲೆಗಳಲ್ಲಿ 4 ದಿನ ಭಾರಿ ಮಳೆಯ ಮುನ್ಸೂಚನೆಒಡೆಸಾ ಬಂದರಿನಲ್ಲಿ ವಾಣಿಜ್ಯ ಹಡಗಿನ ಮೇಲೆ ಕ್ಷಿಪಣಿ ದಾಳಿ: ನಾಲ್ವರು ಭಾರತೀಯರು ಸಾವು, ಮತ್ತೊಬ್ಬನ ಸ್ಥಿತಿ ಗಂಭೀರಸಿಜೆಪಿ ನಾಯಕರ ಜೊತೆ ಸೌಹಾರ್ದಯುತ ಮಾತುಕತೆ ಬಳಿಕ ಧರಣಿ ಅಂತ್ಯಗೊಳಿಸುವಂತೆ ಕೇಂದ್ರ ಸರ್ಕಾರದ ಮನವಿನ್ಯಾನೋ ಜಾಥಾ-2026' ಕಾರ್ಯಕ್ರಮ