Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಂಗ ಓಡಿಸಲು ಬಳಸುವ ಏರ್ ಗನ್ ಮಿಸ್ ಫೈರ್ : ಬಾಲಕ ದುರ್ಮರಣ

ಚಿಕ್ಕಮಗಳೂರು: ಪೋಷಕರ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕನೊಬ್ಬ ದಾರುಣವಾಗಿ ಮೃತಪಟ್ಟಿದ್ದಾನೆ. ಆಟವಾಡುವಾಗ ಏರ್​ ಗನ್ (Air Gun) ಜೊತೆ ಆಟವಾಡುವಾಗ ಮಿಸ್ ಫೈರ್ ಆಗಿ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿಯಲ್ಲಿ ನಡೆದಿದೆ. ಏರ್‌ ಗನ್‌ (Air Gun) ಇಟ್ಟುಕೊಂಡು ಆಟ ಆಡುವಾಗ ಬಾಲಕ ಟ್ರಿಗರ್‌ ಒತ್ತಿದ್ದಾನೆ. ಗನ್ ಮಿಸ್‌ ಫೈರ್‌ ಆಗಿ ಗುಂಡು ಬಾಲಕನ ದೇಹದೊಳಗೆ ಹೊಕ್ಕಿದೆ. 7 ವರ್ಷದ ಬಾಲಕ ವಿಷ್ಣು ಮೃತ ದುರ್ದೈವಿ.

ಕಾಫಿ ತೋಟದಲ್ಲಿ ಮಂಗಗಳನ್ನು ಓಡಿಸಲು ಬಳಸುವ ಏರ್ ಗನ್ ಜೊತೆ ವಿಷ್ಣು ಮನೆ ಮುಂದೆ ಆಟವಾಡುತ್ತಿದ್ದ. ಈ ವೇಳೆ ವಿಷ್ಣು ಅಚಾನಕ್ ಆಗಿ ಟ್ರಿಗರ್​ ಒತ್ತಿದ್ದಾನೆ. ಪರಿಣಾಮ ಏರ್​ ಗನ್ ಫೈರ್ ಆಗಿದ್ದು, ನೇರವಾಗಿ ​ಗನ್​ನೊಳಗಿದ್ದ ಬಾಲ್ಸ್ ವಿಷ್ಣುವಿನ ಹೃದಯ ಭಾಗಕ್ಕೆ ಹೊಕ್ಕಿದೆ. ಪೋಷಕರು ಮನೆಯಲ್ಲಿ ಇದ್ದಾಗಲೇ ಈ ದುರ್ಘಟನೆ ಸಂಭವಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಸದ್ಯ ವಿಷ್ಣವಿನ ಮೃತದೇಹವನ್ನು ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ದೇಹ ರವಾನೆ ಮಾಡಲಾಗಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ