Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನಕಲಿ ಅಂಕಪಟ್ಟಿ ಸಲ್ಲಿಸಿ ವಿಲೇಜ್ ಅಕೌಂಟೆಂಟ್ ಹುದ್ದೆ ಪಡೆದಿದ್ದ ನಾಲ್ವರಿಗೆ ಬಿಗ್ ಶಾಕ್ ನೀಡಿದ ಬೆಳಗಾವಿ ನ್ಯಾಯಾಲಯ

ಬೆಳಗಾವಿ : ನಕಲಿ ಅಂಕಪಟ್ಟಿ ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ ಹುದ್ದೆ ಗಿಟ್ಟಿಸಿಕೊಂಡಿದ್ದ ನಾಲ್ವರಿಗೆ ಬೆಳಗಾವಿ ಜೆ ಎಂ ಎಫ್ ಸಿ ಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಆಡಳಿತಾಧಿಕಾರಿ (Village Accountant) ಹುದ್ದೆ ಪಡೆದಿದ್ದ ನಾಲ್ವರಿಗೆ ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯವು ತಲಾ ಎರಡು ವರ್ಷಗಳ ಜೈಲು ಶಿಕ್ಷೆ ಹಾಗೂ 19 ಸಾವಿರ ರೂಪಾಯಿ ದಂಡ ವಿಧಿಸಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲ್ಲೂಕಿನ ಅನೆಹಳ್ಳಿ ಗ್ರಾಮದ ರಾಜು ವೆಂಕಟೇಶಪ್ಪ ಟಿ., ಕುನ್ನಿಬಂಡಿ ಗ್ರಾಮದ ಮೋಹನ್‌ಕುಮಾರ್ ಚಂದ್ರಪ್ಪ, ಮದ್ದೇರಿ ಗ್ರಾಮದ ಮಂಜುನಾಥ ಬೈಚಪ್ಪ ಹಾಗೂ ಅನೆಹಳ್ಳಿ ಗ್ರಾಮದ ಬಾಲಕೃಷ್ಣ ವೆಂಕಟಪ್ಪ ಶಿಕ್ಷೆಗೆ ಗುರಿಯಾದವರು.

2012ರ ಸೆಪ್ಟೆಂಬರ್ 6ರಂದು ಬೆಳಗಾವಿ ಜಿಲ್ಲಾಧಿಕಾರಿಗಳು ಕಂದಾಯ ಇಲಾಖೆಯ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದ್ದರು. ಆರೋಪಿಗಳು ಬೆಂಗಳೂರಿನ ಅಪರಿಚಿತ ವ್ಯಕ್ತಿಯೊಬ್ಬರಿಂದ ನಕಲಿ ದ್ವಿತೀಯ ಪಿಯುಸಿ ಅಂಕಪಟ್ಟಿಗಳನ್ನು ಪಡೆದು, ಅದರಲ್ಲಿ ಹೆಚ್ಚಿನ ಅಂಕಗಳನ್ನು ತೋರಿಸಿ ಮೆರಿಟ್ ಪಟ್ಟಿಯಲ್ಲಿ ಸ್ಥಾನ ಪಡೆದು ಗ್ರಾಮ ಆಡಳಿತಾಧಿಕಾರಿಗಳಾಗಿ ನೇಮಕಗೊಂಡಿದ್ದರು ಎಂದು ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ನೇಮಕಾತಿಯ ನಂತರ ದಾಖಲೆಗಳ ಪರಿಶೀಲನೆ ವೇಳೆ ಅಂಕಪಟ್ಟಿಗಳು ನಕಲಿಯಾಗಿರುವುದು ಪತ್ತೆಯಾಗಿತ್ತು.

ಇದರಿಂದಾಗಿ ಅಂದಿನ ಜಿಲ್ಲಾಧಿಕಾರಿ ಎನ್. ಜಯರಾಮ್ ಅವರು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಾಗ, ಆರೋಪಿಗಳು ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ಬಳಸಿ ಸರ್ಕಾರಿ ಉದ್ಯೋಗ ಪಡೆದಿರುವುದು ದೃಢಪಟ್ಟಿತು. ಬಳಿಕ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಲಾಗಿತ್ತು. ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿದ ಬೆಳಗಾವಿಯ ಎರಡನೇ ಜೆಎಂಎಫ್‌ಸಿ ನ್ಯಾಯಾಲಯ ನಾಲ್ವರನ್ನು ದೋಷಿಗಳೆಂದು ತೀರ್ಪು ನೀಡಿ ಜೈಲು ಶಿಕ್ಷೆ ವಿಧಿಸಿದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ