Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮರಾಠಿಯಲ್ಲಿ ದಾಖಲೆ ಕೊಡಲು ಒತ್ತಾಯ : ಗೊಂದಲಮಯವಾದ ಬೆಳಗಾವಿ ಪಾಲಿಕೆ ಸಭೆ

Advertisement
ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ಗುರುವಾರ ನಡೆದ ಮಹಾನಗರ ಪಾಲಿಕೆಯ ಪರಿಷತ್‌ ಸಭೆಯಲ್ಲಿ ನಡಾವಳಿ ಮುಂತಾದ ದಾಖಲೆಗಳನ್ನು ಮರಾಠಿಯಲ್ಲಿ ನೀಡಬೇಕೆಂಬ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಸದಸ್ಯರ ಎಂದಿನಂತೆ ಕೇಳಿ ಬಂದ ಒತ್ತಾಯ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿತ್ತು.

ಎಂಇಎಸ್ ಬೆಂಬಲಿತ ಸದಸ್ಯರಾದ ಶಿವಾಜಿ ಮಂಡೋಳಕರ, ವೈಶಾಲಿ ಭಾತಕಾಂಡೆ ಬೆಂಬಲ ಸೂಚಿಸಿದರು.

ಇದಕ್ಕೆ ತಿರುಗೇಟು ನೀಡಿದ ಕರ್ನಾಟಕ ಸರಕಾರದ ನಾಮನಿರ್ದೇಶಿತ ಸದಸ್ಯ ರಮೇಶ ಸೊಂಟಕ್ಕಿ ಅವರು, ಮಹಾರಾಷ್ಟ್ರದ ಅಕ್ಕಲಕೋಟೆ, ಜತ್ತ, ಸೊಲ್ಲಾಪುರದಲ್ಲಿ ಅಪ್ಪಟ ಕನ್ನಡಿಗರೇ ಹೆಚ್ಚಿದ್ದಾರೆ. ಆದರೆ, ಅಲ್ಲಿ ಮರಾಠಿಯಲ್ಲಿ ಮಾತ್ರ ದಾಖಲೆ‌ ನೀಡಲಾಗುತ್ತಿದೆ. ಕನ್ನಡದಲ್ಲಿ ದಾಖಲೆ ಕೊಡುತ್ತಿಲ್ಲ. ಬೆಳಗಾವಿ ಪಾಲಿಕೆಯಲ್ಲಿ ಮರಾಠಿಯಲ್ಲಿ ನಡಾವಳಿ ಕೊಡಬಾರದು. ಈ ಹಿಂದಿನ ಸಭೆಗಳಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರು ಇದೇ ವಿಷಯವಾಗಿ ತಂಟೆ-ತಕರಾರು ಮಾಡುತ್ತಾ ಬಂದಿರುವುದನ್ನು ಅವರು ಸಭೆಯ ಗಮನಕ್ಕೆ ತಂದರು. ಯಾವುದೇ ಕಾರಣಕ್ಕೆ ಮರಾಠಿಯಲ್ಲಿ ನಡಾವಳಿ ನೀಡದಂತೆ ಅವರು ಒತ್ತಾಯಿಸಿದರು.

ಆಡಳಿತ ಪಕ್ಷದ ನಾಯಕ ಹನುಮಂತ ಕೊಂಗಾಲಿ ಅವರು, ಪರಿಷತ್ ಸಭೆಯ ಕಾರ್ಯಸೂಚಿ ಪ್ರಕಾರವೇ ಸದ‌ನ ನಡೆಯಲಿ. ಅವಕಾಶ ಸಿಕ್ಕಾಗ ಸಾಳುಂಕೆ ಮಾತನಾಡಬೇಕು ಎಂದು ಹೇಳಿದರು.

ಆಡಳಿತಾರೂಢ ಬಿಜೆಪಿ ಸದಸ್ಯರು, ರವಿ ಸಾಳುಂಕೆ ವಿರುದ್ಧ ಕಿಡಿಕಾರಿದರು. ನಾಡವಿರೋಧಿ ನಿಲುವು ತಳೆದ ಸದಸ್ಯನನ್ನು ಅನರ್ಹಗೊಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತರೂಢ ಸದಸ್ಯರು ಮತ್ತು ಮಹಾರಾಷ್ಟ್ರ ಏಕೀಕರಣ ಸಮಿತಿ ಸದಸ್ಯರ ನಡುವೆ ತೀವ್ರ ವಾಗ್ವಾದ ಜೋರಾಗುತ್ತಿದ್ದಂತೆ, ಮೇಯರ್ ಮಂಗೇಶ ಪವಾರ ಐದು ನಿಮಿಷವನ್ನು ಸಭೆ ಮುಂದೂಡಿದರು.

ಕಾಂಗ್ರೆಸ್ ಸದಸ್ಯರ ಬೆಂಬಲದಿಂದಲೇ ರವಿ ಸಾಳುಂಕೆ ಈ ರೀತಿ ವರ್ತಿಸುತ್ತಿದ್ದಾರೆ. ಶಾಸಕ ಆಸಿಫ್ ಸೇಠ್ ಇಂಥವರನ್ನು ನಿಯಂತ್ರಿಸಬೇಕು ಎಂದು ಶಾಸಕ ಅಭಯ ಪಾಟೀಲ ಹೇಳಿದರು.

ನಂತರ ಸಭೆ ಮತ್ತೆ ಸೇರಿತು. ನಿಯಮದಂತೆ ಎಲ್ಲ ಸದಸ್ಯರು ಮಾತನಾಡಬೇಕು. ಏಕಾಏಕಿ ಯಾವುದೇ ವಿಷಯ ಪ್ರಸ್ತಾಪಿಸಿ ಗೊಂದಲ ಸೃಷ್ಟಿಸಬಾರದು ಎಂದು ಬಿಜೆಪಿ ಸದಸ್ಯರು ಒತ್ತಾಯಿಸಿದರು.

ಸದಸ್ಯರು ನಿಯಮಾವಳಿ ಪಾಲಿಸದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಮೇಯರ್ ಮಂಗೇಶ ಪವಾರ ತಿಳಿಸಿದರು.

ಒಟ್ಟಾರೆಯಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ ಬೆಂಬಲಿತ ಸದಸ್ಯರ ಇಂದಿನ ಭಾಷಾ ವಿವಾದ ಪಾಲಿಕೆ ಸಭೆಯಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಯಿತು.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ