ಬೆಳಗಾವಿ: ಈಜಲು ಹೋದ ಬಾಲಕ ಮಲಪ್ರಭಾ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮದಲ್ಲಿ ನಡೆದಿದೆ.
ಈಜಲು ತೆರಳಿದ್ದ 15 ವರ್ಷದ ಮಹೇಶ ಗಣಾಚಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಬೈಲಹೊಂಗಲ ಸಿಪಿಐ ಪ್ರಮೋದ ಯಲಿಗಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
