Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದ ಪ್ರಕರಣ ; ಕಾಲೇಜಿನ ಮೂವರು ಅಮಾನತು

ಬೆಂಗಳೂರು: ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಪತ್ರ ಬರೆದಿತ್ತು. ವಸ್ತ್ರಸಂಹಿತೆ ಅಧಿಕಾರಿಗಳ ನೇಮಕ ಮಾಡಿದರೂ ಈ ಘಟನೆ ನಡೆದಿದೆ. ವಿದ್ಯಾರ್ಥಿಗಳ ಜನಿವಾರ ತೆಗೆಸಲು ವಸ್ತ್ರಸಂಹಿತೆಯಲ್ಲಿ ಸೂಚನೆ ನೀಡಿಲ್ಲ. ಆದರೂ ಜನಿವಾರ ತೆಗೆಸಿದ್ದು ಉದ್ದೇಶಪೂರ್ವಕ ಘಟನೆಯಂತೆ ಕಂಡಿದೆ. ಹೀಗಾಗಿ ಈ ಬಗ್ಗೆ ತನಿಖೆ ನಡೆಸಿ ಕ್ರಮವಹಿಸಿದ ವಿವರ ನೀಡುವಂತೆ ಪತ್ರ ಮುಕೇನ ಕೆಇಎ ಸೂಚಿಸಿತ್ತು. ಇದರ ಬೆನ್ನಲ್ಲೇ ಸಿಬ್ಬಂದಿಯಾದ ಸುಧಾಕರ, ಗಿರಿಜಮ್ಮ, ಆರ್.ಸರಿತಾ ಎಂಬವರನ್ನು ಕೃಪಾನಿಧಿ ಕಾಲೇಜು ಅಮಾನತು ಮಾಡಿದೆ.

ಏಪ್ರಿಲ್ 23ರ ಭೌತಶಾಸ್ತ್ರ ವಿಷಯದ ಪರೀಕ್ಷೆ ಬರೆಯಲು ಬಂದಿದ್ದ ಆನಂದ ಸುಧೀರ ರಾವ್ ಸೇರಿದಂತೆ ಐದಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ತಪಾಸಣೆ ನೆಪದಲ್ಲಿ ತಡೆದ ಸಿಬ್ಬಂದಿ, ಅವರ ಜನಿವಾರ ತೆಗೆಸಿದ್ದಾರೆ ಎಂಬ ಆರೋಪವಿದೆ. ಇದಕ್ಕೆ ವಿದ್ಯಾರ್ಥಿಗಳು ಆಕ್ಷೇಪಿಸಿದಾಗ, ‘ಜನಿವಾರ ತೆಗೆಯದಿದ್ದರೆ ಪರೀಕ್ಷಾ ಕೇಂದ್ರದಿಂದ ಹೊರಹೋಗಿ’ ಎಂದು ತಾಕೀತು ಮಾಡಿದ್ದರು. ಕೊನೆಗೆ ಪೋಷಕರು ಅನಿವಾರ್ಯವಾಗಿ ಜನಿವಾರವನ್ನು ತೆಗೆಸಿ ಮಗನನ್ನು ಪರೀಕ್ಷಾ ಕೊಠಡಿಗೆ ಕಳುಹಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು.

ಘಟನೆ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಶಿಕ್ಷಣ ಇಲಾಖೆ ಮತ್ತು ಸಿಇಟಿ ಸೆಲ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ