Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಸುಳ್ಳು ಸುದ್ದಿ ಹರಡುವವರ ವಿರುದ್ಧ ಖಡಕ್ ವಾರ್ನಿಂಗ್ ನೀಡಿದ ಮುಖ್ಯಮಂತ್ರಿ

ಬೆಂಗಳೂರು: ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣ ಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು.

ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು. .

*ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ*
ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡುವ ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಬೇಕು ಎಂದು ಸೂಚಿಸಿದರು. ಈ ಬಗ್ಗೆಯೇ ಪೊಲೀಸ್ ಇಲಾಖೆ ಜೊತೆಗೆ ಪ್ರತ್ಯೇಕ ಸಭೆ ಕರೆಯುವುದಾಗಿ ಹೇಳಿದರು. ಸಮಯ ಸಂದರ್ಭಕ್ಕೆ ತಕ್ಕಂತೆ ನಾವೂ ಬದಲಾಗಬೇಕು. ತ್ವರಿತ ಗತಿಯಲ್ಲಿ ಕೆಲಸ ಮಾಡಬೇಕು ಎಂದರು.

ಸಚಿವ ಪ್ರಿಯಾಂಕ ಖರ್ಗೆ, ಸಭೆಯಲ್ಲಿ ಗೃಹ ಸಚಿವ ಜಿ.ಪರಮೇಶ್ವರ್ ,ಮುಖ್ಯ ಮಂತ್ರಿಗಳ ಕಾರ್ಯದರ್ಶಿ ನಸೀರ್ ಅಹಮದ್, ಮುಖ್ಯಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್ , ಕಾರ್ಯದರ್ಶಿ ಡಾ: ತ್ರಿಲೋಕ್ ಚಂದ್ರ, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್, ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್, ಪೊಲೀಸ್ ಆಯುಕ್ತ ಬಿ.ದಯಾನಂದ್, ಮೊದಲಾದವರು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ