Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜೆಡಿಎಸ್ ನಿಂದ ಉಚ್ಛಾಟನೆ ಮಾಡಿದರೇ ಹೊರತು ಬಿಡಲಿಲ್ಲ. ಜೆಡಿಎಸ್ ತೊರೆದೆ ಎಂದು ಬರೆಯಬೇಡಿ ಎಂದ ಸಿಎಂ

ಪತ್ರಕರ್ತರ ಸಮೂಹಕ್ಕೆ ಹೊಸ ವರ್ಷದ ಶುಭ ಕೋರಿದ ಸಿಎಂ : ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ: ಸಿದ್ದರಾಮಯ್ಯ ಅಭಿಮತ

ಬೆಂಗಳೂರು :
ಸಂವಿಧಾನವೇ ನಮ್ಮ ಧರ್ಮ. ರಾಜಕೀಯ ಧರ್ಮ ಅನುಸರಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.

ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡ ಮಾಡುವ "ವರ್ಷದ ವ್ಯಕ್ತಿ-ವಿಶೇಷ ವ್ಯಕ್ತಿ" ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, 2024ರ ಪ್ರೆಸ್ ಕ್ಲಬ್ ಡೈರಿ ಬಿಡುಗಡೆಗೊಳಿಸಿ ಮಾತನಾಡಿದರು.

ಸುದೀರ್ಘ ಮತ್ತು ಅರ್ಥಪೂರ್ಣ ಚರ್ಚೆಯ ಬಳಿಕ ನಮ್ಮ ಈ ಸಂವಿಧಾನ ಜಾರಿಯಾಗಿದೆ. ಆದ್ದರಿಂದ ಈ ಸಂವಿಧಾನವನ್ನು ಗೌರವಿಸುವುದು, ಪಾಲಿಸುವುದು ಎಲ್ಲಾ ರಾಜಕೀಯ ಪಕ್ಷಗಳ, ವ್ಯಕ್ತಿಗಳ ಕರ್ತವ್ಯ ಎಂದರು.

ಅವಕಾಶ ವಂಚಿತರ ಪರವಾಗಿ, ಧ್ವನಿ ಇಲ್ಲದವರ ಪರವಾಗಿ ದ್ವನಿ ಎತ್ತಿ ಬೆಂಬಲಿಸುವುದು, ವಸ್ತುನಿಷ್ಠವಾಗಿ ಸುದ್ದಿಗಳನ್ನು ವರದಿ ಮಾಡುವುದು ಪತ್ರಿಕಾ ವೃತ್ತಿಯ ಮೂಲಭೂತ ಮೌಲ್ಯ. ಈ ಮೌಲ್ಯಗಳನ್ನು ಪಾಲಿಸುವುದೇ ಸಂವಿಧಾನಕ್ಕೆ ಕೊಡುವ ಗೌರವ. ಇದನ್ನು ಬಿಟ್ಟು ನನ್ನ ಕಾರಿನ ಮೇಲೆ ಕಾಗೆ ಕುಳಿತದ್ದನ್ನು ದೊಡ್ಡ ಚರ್ಚೆ ಮಾಡಿ ಮೌಢ್ಯ ಬೆಳೆಸಿದಂತಹ ರೀತಿಯಲ್ಲಿ ಕೆಲಸ ಮಾಡಬೇಡಿ ಎಂದು ಕಿವಿ ಮಾತು ಹೇಳಿದರು.

ಯಾವುದೇ ಸರ್ಕಾರ ತಪ್ಪು ಮಾಡಿದರೂ ಅದನ್ನು ಹೇಳುವ ಧೈರ್ಯ ಪತ್ರಕರ್ತರಿಗೆ ಇರಬೇಕು. ಸ್ವಾತಂತ್ರ್ಯಾಪೂರ್ವ ದಲ್ಲಿ ದೇಶದ ಅಭಿವೃದ್ಧಿಯ ಚರ್ಚೆ ಮತ್ತು ಕನಸು ಇತ್ತು. ಈಗ ಮಾಧ್ಯಮ ಉದ್ಯಮಿಗಳ ಕೈಗೆ ಸಿಕ್ಕಿ ಕೊಂಡಿದೆ. ಉದ್ಯಮಿಗಳಿಗೆ ಸಮಾಜಮುಖಿಯಾದ ಯಾವ ಕಾಳಜಿಗಳೂ ಇರುವುದಿಲ್ಲ. ಈ ಬಗ್ಗೆ ಪತ್ರಕರ್ತ ಸಮೂಹ ಎಚ್ಚರ ವಹಿಸಬೇಕು ಎಂದರು.

ವರ್ಷದ ವ್ಯಕ್ತಿ ಪ್ರಶಸ್ತಿ ಪುರಸ್ಕೃತರಾದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಚತುರ ಸಂಘಟಕರು ಮತ್ತು ಕ್ರಿಯಾಶೀಲ ವ್ಯಕ್ತಿ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ಸೂಚಿಸಿದರು.

ನನ್ನನ್ನು ಜೆಡಿಎಸ್ ನಿಂದ ಉಚ್ಚಾಟನೆ ಮಾಡಿದರೇ ಹೊರತು ನಾನು ಜೆಡಿಎಸ್ ಬಿಡಲಿಲ್ಲ. ಹೀಗಾಗಿ ವರದಿ, ವಿಶ್ಲೇಷಣೆ ಮಾಡುವಾಗ ನಾನು ಜೆಡಿಎಸ್ ಪಕ್ಷ ತೊರೆದೆ ಎಂದು ಬರೆಯುವುದು ಸರಿಯಲ್ಲ ಎಂದರು.

ವರ್ಷದ ವ್ಯಕ್ತಿ ಪ್ರಶಸ್ತಿ ಪಡೆದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಶೇಷ ಪ್ರಶಸ್ತಿ ಪುರಸ್ಕೃತ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ, ಕಾರ್ಮಿಕ ಸಚಿವ ಸಂತೋಷ್ ಎಸ್ ಲಾಡ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ.ಗೋವಿಂದರಾಜು ಅವರಿಗೆ ಪ್ರಶಸ್ತಿಗಳನ್ನು ನೀಡಿ ಸನ್ಮಾನಿಸಲಾಯಿತು.

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಶಿವರಾಜ್ ಪಾಟೀಲ್ ಪ್ರಶಸ್ತಿ ಪ್ರದಾನ ಮಾಡಿದರು.

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್, ಉಪ ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕ ತ್ಯಾಗರಾಜ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ