Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬಜೆಟ್‌ನ ಪಾವಿತ್ರ‍್ಯತೆಯನ್ನು ಹಾಳುಗೆಡವಿದ ಸಿಎಂ

ಮೂಡಲಗಿ: ಲೋಕಸಭಾ ಚುನಾವಣೆಯನ್ನು ಗಮನದಲ್ಲಿ ಇಟ್ಟುಕೊಂಡು ಎಲ್ಲರನ್ನೂ ಮೆಚ್ಚಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಕರ ಪತ್ರದಂತೆ ರಾಜ್ಯದ ಬಜೆಟ್‌ನ ಪಾವಿತ್ರ‍್ಯತೆಯನ್ನು ಹಾಳುಗೆಡವಿ ಜನತೆಯ ನಿರೀಕ್ಷೆಯನ್ನು ಹುಸಿಗೊಳಿಸಿರುವ ನಿರಾಶದಾಯಕ ಬಜೆಟ್ ಮಂಡನೆಯಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಶುಕ್ರವಾರ ಫೆ-16ರಂದು ರಾಜ್ಯ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು ಎಲ್ಲ ಇಲಾಖೆಗಳಿಗೂ ಮೀಸಲಿಟ್ಟ ಅನುದಾನ ಗ್ಯಾರಂಟಿ ಯೋಜನೆಗಳಿಗೆ ವ್ಯೆಯವಾಗುತ್ತಿದ್ದು, ರಾಜ್ಯದ ಅಭಿವೃದ್ಧಿ ಗಗನ ಕುಸುಮವಾಗಲಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,000 ಕೋಟಿ ಅನುದಾನ ನೀಡಲಾಗಿದ್ದು ಅದರಲ್ಲಿ ಗೃಹಲಕ್ಷ್ಮಿ ಯೋಜನೆಗೆ 28,600 ಕೋಟಿ ಖರ್ಚಾಗುತ್ತದೆ. ನೌಕರರ ವೇತನಕ್ಕೆ 4500 ಕೋಟಿ ಖರ್ಚಾಗುತ್ತದೆ ಆಗ ಉಳಿಯುವುದು ಕೇವಲ 900 ಕೋಟಿ ರೂಪಾಯಿ ಮಾತ್ರ ಇದರಿಂದಾಗಿ ರಾಜ್ಯದ ಅಂಗನವಾಡಿಗಳ ಸ್ಥಿತಿ ಮತ್ತು ಈಗಾಗಲೇ ಘೋಷಣೆ ಮಾಡಿರುವ ಯೋಜನೆಗಳು ದಿಕೆಟ್ಟು ಹೋಗುತ್ತವೆ. ಇದೇ ರೀತಿ ಆರ್ಥಿಕ ಗಂಭಿರ ಸ್ಥಿತಿ ಎಲ್ಲಾ ಇಲಾಖೆಗಳಿಗೂ ಬಿಸಿ ತಟ್ಟಲಿದೆ ಎಂದರು.

ಅನುತ್ಪಾದಕ ವಲಯಗಳಿಗೆ ಖರ್ಚು ಮಾಡಿ ಉತ್ಪಾದನಾ ವಲಯಕ್ಕೆ ಬರಗಾಲ ಬಂದಂತಾಗಿದೆ. ಹೀಗಾಗಿ ಇದೊಂದು ನಿರಪಯುಕ್ತ, ನಿರಾಶದಾಯಕ, ಜನವಿರೋಧಿ ಬಜೆಟ್ ಆಗಿದ್ದು, ಬಜೆಟ್‌ನಲ್ಲಿ ಘೋಷಿಸಿರುವ ಎಲ್ಲಾ ಯೋಜನೆಗಳನ್ನು ಅನುಷ್ಠಾನಗೊಳಿಸಲು ಕನಿಷ್ಠ 10 ವರ್ಷಗಳ ಕಾಲ ಸಮಯಬೇಕಾಗುತ್ತದೆ. ಹೀಗಾಗಿ ಜನರ ನಂಬಿಕೆಯನ್ನು ಹುಸಿಗೊಳಿಸಿದ ನಿರಾಶೆಯದಾಯಕ ಬಜೆಟ್ ಎಂದು ಈರಣ್ಣ ಕಡಾಡಿ ಕಿಡಿಕಾಡಿದರು.

ಅಭಯ ಪಾಟೀಲ ಟೀಕೆ :
ರಾಜ್ಯ ಬಜೆಟ್ ಸುಳ್ಳಿನ ಕಂತೆ‌. ಇದೊಂದು ಮಂಗೇರಿ ಲಾಲ್ ಹಸಿನ್ ಸಪನೇ ಎಂದು ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಶಾಸಕ ಅಭಯ ಪಾಟೀಲ ಹೇಳಿದ್ದಾರೆ.
ರಾಜ್ಯ ಕಾಂಗ್ರೆಸ್ ಸರಕಾರ ಗೊತ್ತು ಗುರಿ ಇಲ್ಲದ ಬಜೆಟ್ ಮಂಡಿಸಿದೆ. ಕರ್ನಾಟಕದ ಅಭಿವೃದ್ಧಿ ಈ ಬಜೆಟ್ ನಿಂದ ಶೂನ್ಯ ಎಂದು ಕಾಣಿಸುತ್ತದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ