Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಅತ್ಯಾಚಾರಿಗೆ ಘೋರ ಶಿಕ್ಷೆ ವಿಧಿಸಿದ ನ್ಯಾಯಾಲಯ ಜೀವನವಿಡೀ ಕಾರಾಗೃಹದಲ್ಲೇ ಕೊಳೆಯುವ ಸ್ಥಿತಿ

ಬೆಳಗಾವಿ : ಹಠ ಯೋಗಿ ಎಂದು ಹೇಳಿಕೊಂಡಿದ್ದ ಸ್ವಾಮೀಜಿಗೆ ಶನಿವಾರ ಬೆಳಗಾವಿಯ ನ್ಯಾಯಾಲಯ ಘೋರ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಿಮ್ಮ ಮನೆಗೆ ಬಿಡುತ್ತೇನೆ ಎಂದು ಅಪ್ರಾಪ್ತ ಬಾಲಕಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ ಮಹಾಸ್ವಾಮಿಯೊಬ್ಬನ ಮೇಲಿನ ಆರೋಪ ಸಾಬೀತಾಗಿದೆ ಎಂದು ಶುಕ್ರವಾರ ಬೆಳಗಾವಿಯ ಪೋಕ್ಸೊ ನ್ಯಾಯಾಲಯ ತೀರ್ಪು ನೀಡಿದ್ದು, ಶಿಕ್ಷೆಯನ್ನು ಶನಿವಾರ ಪ್ರಕಟ ಮಾಡಿದೆ. ಆರೋಪಿಗೆ ಬರೋಬ್ಬರಿ 35 ವರ್ಷಗಳ ಕಠಿಣ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡ ವಿಧಿಸಿದೆ.

ಕಲಬುರ್ಗಿ ಜಿಲ್ಲೆ ಚಿತ್ತಾಪುರ ಮೂಲದ, ಸದ್ಯ ರಾಯಬಾಗ ತಾಲೂಕು ಮೇಖಳಿ ಗ್ರಾಮದ ಶ್ರೀ ಹಠಯೋಗಿ ಲೋಕೇಶ್ವರ ಮಹಾಸ್ವಾಮಿ /ಲೋಕೇಶ್ವರ ಸಾಬಣ್ಣ ಜಂಬಗಿ (30) ಆರೋಪಿ.

ಬಾಲಕಿ ಅಪ್ರಾಪ್ತೆ ಎಂದು ಗೊತ್ತಿದ್ದರೂ 2025 ರ ಮೇ 13 ರಂದು ತನ್ನ ಕಾರಿನಲ್ಲಿ ಆಕೆಯನ್ನು ಬರಲು ಹೇಳಿ, ನಿಮ್ಮ ಮನೆಗೆ ಹೋಗುತ್ತಿದ್ದೇನೆ. ನೀನು ಬಾ, ನಿಮ್ಮ ಮನೆಗೆ ಬಿಡುತ್ತೇನೆ ಎಂದು ಬಾಲಕಿಯನ್ನು ಹತ್ತಿಸಿಕೊಂಡು ಅಪಹರಣ ಮಾಡಿಕೊಂಡು ಮಹಾಲಿಂಗಪುರ ಮಾರ್ಗವಾಗಿ ಬಾಗಲಕೋಟೆಗೆ ಹೋಗಿ ಅಲ್ಲಿಂದ ಆಂಧ್ರಪ್ರದೇಶದ ಮಂತ್ರಾಲಯಕ್ಕೆ ತೆರಳಿದ್ದಾನೆ. ಅಲ್ಲಿನ ಲಾಡ್ಜ್ ನಲ್ಲಿ ಮೇ 14 ರಂದು ರೂಮ್ ಬುಕ್ ಮಾಡಿ ಬಾಲಕಿ ಮೇಲೆ ಒತ್ತಾಯ ಪೂರ್ವಕವಾಗಿ ಲೈಂಗಿಕ ಅತ್ಯಾಚಾರ ಮಾಡಿದ್ದಾನೆ.

ಅಲ್ಲಿಂದ ಬಾಗಲಕೋಟೆ ಜಿಲ್ಲೆಗೆ ಮೇ 16 ರಂದು ಬಂದು ಲಾಡ್ಜ್ ನಲ್ಲಿ ರೂಮ್ ಬುಕ್ ಮಾಡಿ ಅಲ್ಲಿಯೂ ಅತ್ಯಾಚಾರ ಮಾಡಿದ್ದಾನೆ. ನಂತರ ಕಾರಿನಲ್ಲಿ ಮಹಾಲಿಂಗಪುರದ ಬಸ್ ನಿಲ್ದಾಣದಲ್ಲಿ ಇಳಿಸಿ, ನಿಮ್ಮ ಮನೆಗೆ ಹೋಗು ಎಂದು ಹೇಳಿದ್ದಾನೆ. ಈ ವಿಷಯವನ್ನು ಯಾರಿಗಾದರೂ ತಿಳಿಸಿದರೆ ನಿನ್ನನ್ನು ಜೀವಂತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದ್ದಾನೆ.

ಈ ಬಗ್ಗೆ ಮೂಡಲಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ದಾಖಲಾಧಿಕಾರಿ ರಾಜು ಪ್ರಕರಣ ದಾಖಲಿಸಿ ಕೊಂಡಿದ್ದರು. ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ ಮುಂದಿನ ತನಿಖೆ ಕೈಗೊಂಡಿದ್ದರು.

ಬಾಲಕಿಯನ್ನು ಅಪಹರಣ ಮಾಡಿದ ಕೃತ್ಯದ ಸಿಸಿ ಕ್ಯಾಮೆರಾ ದೃಶ್ಯಾವಳಿ ಕಂಡುಬಂದಿದೆ. ಮುಂದಿನ ತನಿಖೆಯನ್ನು ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯ-01 ಬೆಳಗಾವಿ ನ್ಯಾಯಾಲಯಕ್ಕೆ ಸಲ್ಲಿಸಲಾಗಿತ್ತು.

ನ್ಯಾಯಾಧೀಶೆ ಸಿ.ಎಂ. ಪುಷ್ಪಲತಾ ಪ್ರಕರಣದ ವಿಚಾರಣೆ ಮಾಡಿದ್ದರು. ಒಟ್ಟು 8 ಸಾಕ್ಷಿಗಳ ವಿಚಾರಣೆ, 78 ದಾಖಲೆ ಮತ್ತು 9 ಮುದ್ದೆ ಮಾಲುಗಳ ಆಧಾರದ ಮೇಲೆ ಶ್ರೀ ಹಠಯೋಗಿ ಲೋಕೇಶ್ವರ ಮಹಾಸ್ವಾಮಿ ಮೇಲಿನ ಆರೋಪಣೆ ಸಾಬೀತಾಗಿವೆ ಎಂದು ತೀರ್ಪು ನೀಡಿದ್ದು ಶನಿವಾರ ಶಿಕ್ಷೆ ಪ್ರಕಟ ಮಾಡಿದ್ದಾರೆ.

ಆರೋಪಿಗೆ ಒಟ್ಟು 35 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಮತ್ತು ಒಂದು ಲಕ್ಷ ರೂಪಾಯಿ ದಂಡದ ಮೊತ್ತವನ್ನು ತುಂಬಲು ತಪ್ಪಿದಲ್ಲಿ ಎರಡು ವರ್ಷಗಳ ಶಿಕ್ಷೆ ಬಿಎನ್ ಎಸ್ ಕಲಂ 137 (2) ರ ಪ್ರಕಾರ 7 ವರ್ಷ ಶಿಕ್ಷೆ, ರೂ. 25,000 ದಂಡದ ಮೊತ್ತವನ್ನು ತುಂಬಲು ತಪ್ಪಿದಲ್ಲಿ ಆರು ತಿಂಗಳ ಶಿಕ್ಷೆ ಮತ್ತು ಕಲಂ 351 ರ ಪ್ರಕಾರ ಎರಡು ವರ್ಷಗಳ ದಂಡ ರೂ.3,000, ಕಲಂ 64ರ ಪ್ರಕಾರ 10 ವರ್ಷಗಳ ಶಿಕ್ಷೆ, ದಂಡ ರೂ. 50,000 ಮೊತ್ತವನ್ನು ತುಂಬಲು ತಪ್ಪಿದಲ್ಲಿ 1 ವರ್ಷ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ರೂ. 4 ಲಕ್ಷ ಪರಿಹಾರ ಧನ ಪಡೆಯಲು ನ್ಯಾಯಾಲಯ ಆದೇಶಿಸಿದೆ. ಪರಿಹಾರ ಹಣವನ್ನು ರಾಷ್ಟ್ರೀಕೃತ ಬ್ಯಾಂಕಿನಲ್ಲಿ ಐದು ವರ್ಷಗಳ ವರೆಗೆ ಮುದ್ದತ್ತ ಠೇವಣಿಯಾಗಿ ಇಡಲು ನ್ಯಾಯಾಲಯ ತಿಳಿಸಿದೆ. ವಿಶೇಷ ಸರಕಾರಿ ಅಭಿಯೋಜಕ ಎಲ್. ವಿ. ಪಾಟೀಲ ಸರಕಾರದ ಪರವಾಗಿ ವಾದ ಮಂಡಿಸಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ