Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಮೌನಿ ಅಮಾವಾಸ್ಯೆ :ಕುಂಭಮೇಳದಲ್ಲಿ ಕಾಲ್ತುಳಿತ- 17ಕ್ಕೂ ಹೆಚ್ಚು ಜನರ ಸಾವು ಶಂಕೆ

 

ಮಹಾಕುಂಭನಗರ: ಮಹಾಕುಂಭ ಮೇಳ ನಡೆಯುತ್ತಿರುವ
ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಪ್ರತಿದಿನ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಕೈಗೊಳ್ಳುತ್ತಿದ್ದಾರೆ. ಈ ನಡುವೆ ಇಂದು (ಬುಧವಾರ) ಮೌನಿ ಅಮಾವಾಸ್ಯೆ ಇರುವ ಕಾರಣ ಎರಡನೇ ಅಮೃತ ಸ್ನಾನ ಕೈಗೊಳ್ಳಲು ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದು, ಕಾಲ್ತುಳಿತ ಸಂಭವಿಸಿದೆ ಎಂದು ವರದಿಯಾಗಿದೆ.

ಘಟನೆಯಲ್ಲಿ 17ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, 50ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

'ಕಾಲ್ತುಳಿತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಂದ ಮಾಹಿತಿ ಪಡೆದಿದ್ದು, ಘಟನಾ ಸ್ಥಳದಲ್ಲಿ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ' ಎಂದು ಸುದ್ದಿಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಮೃತಪಟ್ಟವರ ಬಗ್ಗೆ ಇನ್ನಷ್ಟೇ ಖಚಿತವಾಗಬೇಕಿದೆ.

ಮಹಾಕುಂಭ ನಗರದ ತ್ರಿವೇಣಿ ಮಾರ್ಗ, ಕಾಳಿ ಮಾರ್ಗ ಸೇರಿದಂತೆ ಸಂಗಮದ ಸುತ್ತಮುತ್ತಲಿನ ರಸ್ತೆಗಳು ಭಕ್ತರಿಂದ ತುಂಬಿ ತುಳುಕುತ್ತಿವೆ. ಹೀಗಾಗಿ ಜನರ ನಿಯಂತ್ರಣಕ್ಕೆ ಅಧಿಕಾರಿಗಳು ಭದ್ರತೆ ಹೆಚ್ಚಿಸಿದ್ದಾರೆ. ಭಕ್ತರ ಓಡಾಟಕ್ಕೆ ಅನುಕೂಲವಾಗಲು ಈ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ.

ಇತರ ರಾಜ್ಯ, ದೇಶಗಳಿಂದ ಬರುವ ವಾಹನಗಳಿಗೆ ನಗರದ ಹೊರವಲಯದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಜನರನ್ನು ನಿಯಂತ್ರಿಸಲು ಸಂಗಮದ ಸುತ್ತಮುತ್ತಲಿನ ರಸ್ತೆಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ ಎಂದು ವರದಿ ತಿಳಿಸಿದೆ.

ಮೌನಿ ಅಮಾವಾಸ್ಯೆ ಹಿನ್ನೆಲೆ ಭಕ್ತರ ಸಂಖ್ಯೆ ಹೆಚ್ಚುವ ಕಾರಣ ಐದು ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನೇಮಿಸಲಾಗಿದೆ. ಇಂಟಿಗ್ರೇಟೆಡ್ ಕಂಟ್ರೋಲ್ ಮತ್ತು ಕಮಾಂಡ್ ಸೆಂಟರ್ ಸಂಗಮದ ಬಳಿ ನಿಗಾ ಇರಿಸಲಿದೆ ಎಂದು ಭದ್ರತಾ ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಎರಡು ದಿನಗಳಿಂದ 3 ಕೋಟಿ ಭಕ್ತರು ಸಂಗಮದಲ್ಲಿ ಪವಿತ್ರ ಸ್ನಾನ ಕೈಗೊಂಡಿದ್ದಾರೆ.

ಮಂಗಳವಾರ ರಾತ್ರಿಯಿಂದಲೇ ಮೌನಿ ಅಮಾವಾಸ್ಯೆಯ ಅಮೃತ ಸ್ನಾನ ಆರಂಭವಾಗಲಿದೆ ಎಂದೂ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು