Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೆಳಗಾವಿ ಜಿಲ್ಲೆ ನಂದಗಡಕ್ಕೆ ಬರುವಾಗ ಮರಕ್ಕೆ ಡಿಕ್ಕಿ ಹೊಡೆದ ಕಾರು; ಸಾವಿನ ಸಂಖ್ಯೆ ನಾಲ್ಕಕ್ಕೆ ಏರಿಕೆ

ಬೆಳಗಾವಿ : ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಸಾವಿಗೀಡಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾವಿ ಬಳಿ ನಡೆದಿದೆ.

ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಮತ್ತಿಬ್ಬರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಮೃತರನ್ನು
ನೀಲಪ್ಪ ಮೂಲಿಮನಿ (23), ಸುದೀಪ ಕೋಟಿ (18), ಶಿವನಗೌಡ ಯಲ್ಲನಗೌಡ್ರ (20), ಕಲ್ಮೇಶ ಮಾನೋಜಿ (26) ಎಂದು ಗುರುತಿಸಲಾಗಿದೆ. ಮೃತರು ಸವಣೂರು ತಾಲೂಕಿನ ಬೇವಿನಹಳ್ಳಿ ಗ್ರಾಮದವರು.

7 ಯುವಕರು ಸ್ವಿಫ್ಟ್ ಕಾರಿನಲ್ಲಿ ಬೇವಿನಹಳ್ಳಿ ಗ್ರಾಮದಿಂದ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡಕ್ಕೆ ತೆರಳುತ್ತಿದ್ದರು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಶಿಗ್ಗಾಂವಿ ಬಳಿ ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಸ್ಥಳದಲ್ಲೇ ನೀಲಪ್ಪ ಹಾಗೂ ಸುದೀಪ ಕೋಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳುಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಶಿಗ್ಗಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು