Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ವಾರದಲ್ಲಿ ಐದು ದಿನ ಮಾತ್ರ ಸರಕಾರಿ ಕೆಲಸಕ್ಕೆ ಬೇಡಿಕೆ

 

ಬೆಂಗಳೂರು :
ರಾಜ್ಯ ಸರಕಾರಿ ನೌಕರರಿಗೆ ವಾರಕ್ಕೆ 5 ದಿನ ಕೆಲಸ ಮಾಡುವ ಪದ್ಧತಿ ಜಾರಿ ತರಬೇಕು. ಇದಕ್ಕಾಗಿ ಕೆಲಸದ ಅವಧಿಯನ್ನು ಬೆಳಗ್ಗೆ 10 ರಿಂದ ಸಂಜೆ 5:30 ಬದಲಿಗೆ ಬೆಳಗ್ಗೆ 9:30 ರಿಂದ ಸಂಜೆ 6:00 ವರೆಗೆ ಬದಲಾಯಿಸಬೇಕು ಎಂದು ರಾಜ್ಯ ಸರಕಾರ, 7ನೇ ವೇತನ ಆಯೋಗದ ಮುಂದೆ ರಾಜ್ಯ ಸರಕಾರಿ ನೌಕರರು ಬೇಡಿಕೆ ಇಟ್ಟಿದ್ದಾರೆ.

ಸಂಘದ ಅಧ್ಯಕ್ಷ ಸಿ.ಎಸ್. ಷಡಕ್ಷರಿ ಶುಕ್ರವಾರ ಈ ಕುರಿತ 63 ಪುಟಗಳ ವರದಿಯನ್ನು ಸಲ್ಲಿಸಿದ್ದಾರೆ. ಸರಕಾರಿ ನೌಕರರಿಗೆ ವಾರಕ್ಕೆ ಐದು ದಿನ ಕರ್ತವ್ಯದ ಅವಧಿ ಮಾಡಿ ವಾರಾಂತ್ಯದಲ್ಲಿ ರಜೆ ನೀಡಬೇಕು. ಸರಕಾರಿ ನೌಕರರ ಪ್ರತಿದಿನದ ಕರ್ತವ್ಯದ ಅವಧಿಯನ್ನು ಒಂದು ಗಂಟೆ ಹೆಚ್ಚಿಸಬಹುದು. ಪ್ರಸ್ತುತ ಮೂಲಭೂತ ಹಾಲಿ ವೇತನಕ್ಕೆ ಇರುವ ಶೇಕಡ 31 ರಷ್ಟು ತುಟ್ಟಿಭತ್ಯೆಯನ್ನು ವಿಲೀನಗೊಳಿಸಿ ಶೇ.40 ರಷ್ಟು ಪಿಟ್ ಮೆಂಟ್ ಸೌಲಭ್ಯ 2022ರ ಜುಲೈ ಒಂದರಿಂದ ಜಾರಿಗೆ ತರುವುದು, ಹಾಲಿ 25 ಮಾಸ್ಟರ್ ವೇತನ ಶ್ರೇಣಿ ಹಾಗೂ 92 ವೇತನ ಶ್ರೇಣಿಗಳನ್ನು ಮುಂದುವರಿಸಬೇಕು ಎಂದು ಒತ್ತಾಯಿಸಲಾಗಿದೆ.

ಕೇಂದ್ರ ಸರಕಾರದ ಮಾದರಿಯಲ್ಲಿ ನಾಲ್ಕು ವರ್ಷಕ್ಕೊಮ್ಮೆ ಎಲ್ ಟಿಸಿ ಸೌಲಭ್ಯ ಮತ್ತು ದಿನಭತ್ಯೆ ನೀಡಬೇಕು. ಆರೋಗ್ಯ ಸಂಜೀವಿನಿ ಯೋಜನೆ ನಿಗದಿ ಮಾಡಬೇಕು ಎಂಬ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ