Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಿಲ್ಲಾಧಿಕಾರಿ ನಡೆ ಉಗರಗೋಳ ಕಡೆ; ಬಾರ್ ಬಂದ್ ಮಾಡಿಸಿದ ಡಿಸಿ !

 

ಯಲ್ಲಮ್ಮನ ಭಕ್ತರ ಅನುಕೂಲಕ್ಕೆ ಉಗರಗೋಳದಲ್ಲಿ "ಹೋಮ್ ಸ್ಟೇ" ಉದ್ಯಮಕ್ಕೆ ಪ್ರೋತ್ಸಾಹ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ

ಬೆಳಗಾವಿ :
ಜನರ ಮನೆಬಾಗಿಲಿಗೆ ಆಡಳಿತವನ್ನು ಕೊಂಡೊಯ್ದು ಸ್ಥಳೀಯವಾಗಿ ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಎಂಬ ಸರಕಾರದ ಆಶಯದಂತೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಇಂದು ಸವದತ್ತಿ ತಾಲ್ಲೂಕಿನ ಉಗರಗೋಳ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದರು.

ಬೆಳಿಗ್ಗೆ ಸವದತ್ತಿ ಯಲ್ಲಮ್ಮ ದೇವಿಯ ದರ್ಶನವನ್ನು ಪಡೆದುಕೊಂಡು ಗ್ರಾಮಕ್ಕೆ ಆಗಮಿಸಿದ ಜಿಲ್ಲಾಧಿಕಾರಿಗಳನ್ನು ಬಸವೇಶ್ವರ ವೃತ್ತದ ಬಳಿ ಗ್ರಾಮಸ್ಥರು ಪ್ರೀತಿಯಿಂದ ಬರಮಾಡಿಕೊಂಡರು.
ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಡೊಳ್ಳಿನ ಮೇಳದವರು ಮೆರವಣಿಗೆಯ ಮೂಲಕ ಕಾರ್ಯಕ್ರಮದ ವೇದಿಕೆ ಇರುವ ರೇ.ಹ.ಹಳಮನಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯವರೆಗೆ ಕರೆದುಕೊಂಡು ಹೋದರು.

*ಬಾರ್ ಗೆ ನುಗ್ಗಿ ಬಾಗಿಲು ಬಂದ್ ಮಾಡಿಸಿದ ಜಿಲ್ಲಾಧಿಕಾರಿ !*
ಉಗರಗೋಳ ಗ್ರಾಮದ ಬಸವೇಶ್ವರ ವೃತ್ತದಲ್ಲಿ ಕಾರಿನಿಂದಿಳಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲರು ನೇರವಾಗಿ ಪಕ್ದಲ್ಲೇ ಇರುವ ಆನಂದ ಬ್ರ‍್ಯಾಂಡಿ ಶಾಪ್ ಗೆ ತೆರಳಿ ಲೈಸೆನ್ಸ್, ಲಭ್ಯವಿರುವ ಮದ್ಯದ ಸಂಗ್ರಹ ಹಾಗೂ ಗುಣಮಟ್ಟದ ಬಗ್ಗೆ ಪರಿಶೀಲನೆ ಕೈಗೊಂಡರು.

ಜಿಲ್ಲಾಧಿಕಾರಿಗಳು ಬಸವೇಶ್ವರ ವೃತ್ತದಲ್ಲಿ ಇರುವ ಆನಂದ ಬ್ರ‍್ಯಾಂಡಿ ಅಂಗಡಿ ಮತ್ತು ಲಕ್ಷ್ಮೀ ಬಾರ್ ಮತ್ತು ರೆಸ್ಟೋರೆಂಟ್ ಗೆ ಸ್ವತಃ ತೆರಳಿ ಪರಿಶೀಲನೆ ಕೈಗೊಂಡರು.
ಖುದ್ದಾಗಿ ಕೆಲವು ಮದ್ಯದ ಬಾಟಲ್ ಗಳನ್ನು ತೆಗೆದುಕೊಂಡು ಅವುಗಳ ಗುಣಮಟ್ಟ ಪರಿಶೀಲಿಸುವಂತೆ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಒಪ್ಪಿಸಿದರು.

ಜಿಲ್ಲಾಧಿಕಾರಿಗಳ ಜತೆ ಆಗಮಿಸಿದ ನೂರಾರು ಮಹಿಳೆಯರು ಮತ್ತು ಗ್ರಾಮಸ್ಥರು ಗ್ರಾಮದಲ್ಲಿರುವ ಮದ್ಯ ಮಾರಾಟ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಆಗ್ರಹಿಸಿದರು.

ಗ್ರಾಮಸ್ಥರ ಅಹವಾಲು ಆಲಿಸಿದ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಸದ್ಯಕ್ಕೆ ಮದ್ಯದ ಅಂಗಡಿಗಳನ್ನು ಸ್ಥಗಿತಗೊಳಿಸಲಾಗಿದ್ದು, ನಿಯಮಗಳ ಉಲ್ಲಂಘನೆಯ ಕುರಿತು ಕೂಲಂಕುಶವಾಗಿ ಪರಿಶೀಲನೆ ಬಳಿಕ ನಿರ್ಧಾರ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದರು.
ಜಿಪಂ ಸಿಇಒ ದರ್ಶನ್, ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ಮತ್ತಿತರರು ಉಪಸ್ಥಿತರಿದ್ದರು
ಪ್ರತಿ ತಿಂಗಳು ಮೂರನೇ ಶನಿವಾರ ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು ಉದ್ಧೇಶವಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ದೇವಿವನ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ:

ದೇವಿವನಕ್ಕೆ ಭೇಟಿ ನೀಡಿ ದೇವಿವನದ ಕೀಲಿಯನ್ನು ತೆಗೆದು ಸಾರ್ವಜನಿಕ ದರ್ಶನಕ್ಕೆ ಮುಕ್ತ ಪ್ರವೇಶವನ್ನು ಕಲ್ಪಿಸಲಾಗಿದೆ.
ಗೃಹರಕ್ಷಕರನ್ನು ಭದ್ರತೆಗೆ ನಿಯೋಜಿಸಲಾಗಿದ್ದು, ಮುಂಬರುವ ದಿನಗಳಲ್ಲಿ ದೇವಿವನದ ಬಳಿಯೂ ಮಳಿಗೆಗಳನ್ನು ನಿರ್ಮಿಸಿಕೊಡಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.

ಸವದತ್ತಿ ಯಲ್ಲಮ್ಮ ದೇವಸ್ಥಾನ ಆವರಣದಲ್ಲಿ ಇರುವ 250 ಮಳಿಗೆಗಳನ್ನು ಕೂಡ ಇಂದು ಹರಾಜು ಪ್ರಕ್ರಿಯೆ ಆರಂಭಿಸಲಾಗಿದೆ.
ದೇವಸ್ಥಾನದ ಸಾವಿರ ಎಕರೆಯಲ್ಲಿ ಭಕ್ತಾದಿಗಳಿಗೆ ಅಗತ್ಯ ಮೂಲಸೌಕರ್ಯ ಒದಗಿಸಲು ಅವಕಾಶಗಳಿವೆ. ಅನಧಿಕೃತ ಅಂಗಡಿಗಳನ್ನು ಅಧಿಕೃತಗೊಳಿಸಿ ಹರಾಜು ಮಾಡಲಾಗುತ್ತಿದೆ. ಇದರಿಂದ ದೇವಸ್ಥಾನದ ಆದಾಯ ಹೆಚ್ಚಿಸುವುದರ ಜತೆಗೆ ಭಕ್ತಾದಿಗಳಿಗೆ ಮೂಲಸೌಕರ್ಯ ಒದಗಿಸುವುದು ಸಾಧ್ಯವಾಗಲಿದೆ.
ಈ ವ್ಯಾಪಾರ ಮಳಿಗೆಗಳನ್ನು ಉಗರಗೋಳ ಗ್ರಾಮದ ಜನರಿಗೂ ನೀಡಲಾಗುವುದು.

ಹೋಮ್ ಸ್ಟೇ ಮಾಡಲು ಸಲಹೆ:

ಸವದತ್ತಿ ಯಲ್ಲಮ್ಮ ಕ್ಷೇತ್ರಕ್ಕೆ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. ಈ ಜನರಿಗೆ ಅಗತ್ಯ ವಸತಿ ಮತ್ತು ಊಟೋಪಹಾರ ಒದಗಿಸಲು ಅನುಕೂಲವಾಗುವಂತೆ ಉಗರಗೋಳ ಗ್ರಾಮಸ್ಥರು ಹೋಮ್ ಸ್ಟೇ ಆರಂಭಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸಲಹೆ ನೀಡಿದರು.

ಉಗರಗೋಳ ಗ್ರಾಮದ ಜನರು ಹೋಮ್ ಸ್ಟೇ ಮಾಡಲು ಅರ್ಜಿ ಸಲ್ಲಿಸಿದರೆ ಒಂದೇ ವಾರದಲ್ಲಿ ಹೋಮ್ ಸ್ಟೇ ಲೈ
ಗ್ರಾಮದಲ್ಲಿ ಇರುವ ತಮ್ಮ ಮನೆಯ ಒಂದು ಭಾಗ ಅಥವಾ ತೋಟದ ಮನೆಗಳನ್ನು ಹೋಮ್ ಸ್ಟೇ ಗಳನ್ನಾಗಿ ಪರಿವರ್ತಿಸಿಕೊಂಡು ನಿತಂತರ ಆದಾಯ ಪಡೆದುಕೊಳ್ಳಬಹುದು.

ಯಲ್ಲಮ್ಮ ದೇವಸ್ಥಾನಕ್ಕೆ ಆಗಮಿಸುವ ಲಕ್ಷಾಂತರ ಜನರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅನುಕೂಲವಾಗುವಂತೆ ಹೋಮ್ ಸ್ಟೇ ಉದ್ಯಮವನ್ನು ಪ್ರೋತ್ಸಾಹಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದರು.
ಇದಾದ ಬಳಿಕ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಜಿಲ್ಲಾಧಿಕಾರಿಗಳು ಆಲಿಸಿದರು.
ಉಗರಗೋಳ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರ್ಲಾಪುರ, ಯಲ್ಲಮ್ಮನಗುಡ್ಡ ಹಾಗೂ ತಾಂಡಾ ಬರುತ್ತವೆ.

300 ಜನರಿಗೆ ನಿವೇಶನ ಒದಗಿಸಲು ಕ್ರಮ:

ಉಗರಗೋಳ ಗ್ರಾಮದ ಒಟ್ಟು 299 ಜನರಿಗೆ ನಿವೇಶನ ಇಲ್ಲ; ಆದ್ದರಿಂದ ಇವರಿಗೆ ನಿವೇಶನ ಒದಗಿಸಲು ಗ್ರಾಮದ ಸಮೀಪದಲ್ಲಿ ಹತ್ತು ಎಕರೆ ಗುರುತಿಸಬೇಕು.
ಗ್ರಾಮ ಪಂಚಾಯತಿಯಿಂದ ಜಮೀನು ಕೋರಿ ಠರಾವು ಪಾಸ್ ಕಳಿಸಿದರೆ ಆಶ್ರಯ ಯೋಜನೆಯಡಿ ಗ್ರಾಮಪಂಚಾಯಿತಿಗೆ ಹತ್ತು ಎಕರೆ ಜಮೀನು ಒದಗಿಸಬಹುದು.
ಗ್ರಾಮದ ಜನರು ಎಲ್ಲರೂ ಸಂಘಟಿತರಾಗಿ ಈ ಪ್ರಯತ್ನ ಮಾಡಿದರೆ ಎಲ್ಲರಿಗೂ ನಿವೇಶನ ಸಿಗಲಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

ಉಗರಗೋಳ, ಹರ್ಲಾಪುರ, ಯಲ್ಲಮ್ಮತಾಂಡಾ ಹೀಗೆ ಎಲ್ಲೆ ಸರಕಾರಿ ಜಮೀನು ಲಭ್ಯವಿದ್ದರೂ ಅದನ್ನು ಗುರುತಿಸಿ ನಿವೇಶನ ಒದಗಿಸಲಾಗುವುದು ಎಂದರು.

ಎನ್.ಎ. ಹಾಗೂ ಕೆ.ಜೆ.ಪಿ. ಪಡೆಯದೇ ನಿವೇಶನಗಳನ್ನು ಮಾರಾಟ ಮಾಡಿರುವುದು ಕಂಡುಬಂದರೆ ಅಂತಹವರಿಗೆ ನೋಟಿಸ್ ನೀಡಿ, ಸದರಿ ಜಾಗೆಯನ್ನು ಸರಕಾರದ ವಶಕ್ಕೆ ಪಡೆಯುವ ಪ್ರಕ್ರಿಯೆ ಆರಂಭಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು.

ಸರಕಾರಿ ಜಮೀನುಗಳಲ್ಲಿ ಅಕ್ರಮವಾಗಿ ಮನೆ ಕಟ್ಟಿಕೊಂಡವರು 94 ಸಿ ಅಡಿಯಲ್ಲಿ ಅರ್ಜಿಯನ್ನು ಸಲ್ಲಿಸಬಹುದು. ಅಂತಹ ಮನೆಗಳನ್ನು ಸಕ್ರಮಗೊಳಿಸಬಹುದು ಎಂದರು.

ಸಾರ್ವಜನಿಕರ ಅಹವಾಲುಗಳು:

ಬೆಳೆ ಸಾಗಾಣಿಕೆಗೆ ಹೊಲದ ರಸ್ತೆ, ಹಳ್ಳದ ರಸ್ತೆ ನಿರ್ಮಾಣ; ಅಡುಗೆ ಸಿಬ್ಬಂದಿ ವೇತನ ಹೆಚ್ಚಳ; ಜಮೀನು ಒತ್ತುವರಿ ಮಾಡಿ ಜನತಾ ಮನೆ ನಿರ್ಮಾಣ; ಜನತಾ ಮನೆ ಮಂಜೂರು ಅರ್ಜಿ; ಅಂಗವಿಕಲರ ಮಾಸಾಶನ; ಶಾಲಾ ಅವಧಿಯಲ್ಲಿ ಹೆಚ್ಚುವರಿ ಬಸ್ ಸಂಚಾರ; ಯಲ್ಲಮ್ಮ ತಾಂಡಾಗೆ ಸ್ಮಶಾನಭೂಮಿ ಮಂಜೂರಾತಿ ಮತ್ತಿತರ ವಿಷಯಗಳ ಕುರಿತು ಜನರು ಅಹವಾಲು ಸಲ್ಲಿಸಿದರು.

ಕಂದಾಯ, ಪಶುಸಂಗೋಪನೆ, ಸಮಾಜ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಆರೋಗ್ಯ ಮತ್ತಿತರ ಇಲಾಖೆಗಳಿಗೆ ಸಂಬಂಧಿಸಿದ ಅಹವಾಲುಗಳನ್ನು ಆಲಿಸಲಾಯಿತು.
ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಕೆಲವೊಂದು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರವನ್ನು ಸೂಚಿಸಿದರು.

ಪಹಣಿಯಲ್ಲಿ ಕರ್ನಾಟಕ ನೀರಾವರಿ ನಿಗಮ ಅಂತ ತಪ್ಪಾಗಿ ನಮೂದಾಗಿರುವುದನ್ನು ಸರಿಪಡಿಸಲಾಗಿರುತ್ತದೆ. ರೈತರು ಪರಿಷ್ಕೃತ ಪಹಣಿಗಳನ್ನು ಪಡೆದುಕೊಳ್ಳಬಹುದು ಎಂದು ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ ತಿಳಿಸಿದರು.

ಹಳ್ಳದ ಹೂಳು ತೆಗೆಯಲು ಸೂಚನೆ:

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಮಾತನಾಡಿ, ನರೇಗಾ ಯೋಜನೆಯಡಿ ಹಳ್ಳದ ಊಳು ತೆಗೆಯುವ ಕಾಮಗಾರಿಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಇದಲ್ಲದೇ ನಿವೇಶನ ಹೊಂದಿ ಮನೆಗಳು ಇಲ್ಲದಿರುವವರ ಪಟ್ಟಿಯನ್ನು ಜಿಲ್ಲಾ ಪಂಚಾಯತ್ ಗೆ ಕಳುಹಿಸಿಕೊಡುವಂತೆ ತಿಳಿಸಿದರು.

ಸಂಧ್ಯಾ ಸುರಕ್ಷಾ, ವಿಧವಾ ವೇತನ ಸೇರಿದಂತೆ ವಿವಿಧ ಬಗೆಯ ಸಾಮಾಜಿಕ ಭದ್ರತಾ ಯೋಜನೆಗಳಡಿ ಪಿಂಚಣಿ ಆದೇಶಪತ್ರಗಳನ್ನು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ವಿತರಿಸಿದರು.
ಪಿಂಚಣಿ ಸಿಗದ ಅರ್ಹರು ಅರ್ಜಿಯನ್ನು ಸಲ್ಲಿಸಿದರೆ 24 ಗಂಟೆಗಳಲ್ಲಿ ಆದೇಶಪತ್ರವನ್ನು ನೀಡಲಾಗುವುದು ಎಂದು ತಿಳಿಸಿದರು.
ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ಸೈಕಲ್ ವಿತರಿಸಿದರು.
ಕಾರ್ಯಕ್ರಮ ಆರಂಭಕ್ಕೂ ಮುಂಚೆ ಶಾಲಾ ಆವರಣದಲ್ಲಿ ಸಸಿಯನ್ನು ನೆಟ್ಟರು.

ಉಪ ವಿಭಾಗಾಧಿಕಾರಿ ಶಶಿಧರ್ ಬಗಲಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಜುಬೇದಾ ಬೇಗಂ ಬಾರಿಗಿಡದ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತಕುಮಾರ್, ಸಿಪಿಐ ಕರುಣೇಶ್ ಗೌಡ, ತಹಶೀಲ್ದಾರ ಜಕ್ಕನಗೌಡ್ರ ಮತ್ತಿತರರು ಉಪಸ್ಥಿತರಿದ್ದರು.
ಗ್ರಾಮದ ನೂರಾರು ಜನರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ