ನವದೆಹಲಿ: ಸ್ಟೀಪರ್ ಬಸ್ಸಿನ ಒಳಗೆ ಮಹಿಳೆಯ ಮೇಲೆ ಚಾಲಕ ಮತ್ತು ನಿರ್ವಾಹಕ ಸೇರಿ ಅತ್ಯಾಚಾರ ಮಾಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.
ಮೇ 12 ರಂದು ನಡೆದ ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಹಿಳೆಯ ಹೇಳಿಕೆಯ ಆಧಾರದ ಮೇಲೆ ರಾಣಿ ಬಾಗ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 64(1) (ಅತ್ಯಾಚಾರ), 70(1) (ಸಾಮೂಹಿಕ ಅತ್ಯಾಚಾರ) ಮತ್ತು 3(5) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯು, ಆ ದಿನ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಸರಸ್ವತಿ ವಿಹಾರ್‌ನ ಬಿ-ಬ್ಲಾಕ್ ಬಸ್ ನಿಲ್ದಾಣದ ಬಳಿ ಬಸ್ಸಿನ ಬಾಗಿಲ ಬಳಿ ನಿಂತಿದ್ದ ಆರೋಪಿಗಳಲ್ಲಿ ಒಬ್ಬನನ್ನು ಸಮಯ ಕೇಳಿದ್ದಾರೆ. ಆಗ ಆರೋಪಿಯು ಆಕೆಯನ್ನು ಬಲವಂತವಾಗಿ ಬಸ್ಸಿನೊಳಗೆ ಎಳೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎನ್ನಲಾಗಿದೆ.
ಈ ಘಟನೆಯ ಕುರಿತು ದೆಹಲಿ ಪೊಲೀಸರು ಇನ್ನೂ ಮಾಹಿತಿ ನೀಡಿಲ್ಲ.
