Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕದನವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಸದ್ದು

ಶ್ರೀನಗರ : ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿ ಬಂದಿದೆ.

ಈ ಕುರಿತು ಸಾಮಾಜಿಕ ಮಾದ್ಯಮ ಎಕ್ಸ್‌ನಲ್ಲಿ ವಿಷಯ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮ‌ರ್ ಅಬ್ದುಲ್ಲಾ, 'ಉಭಯ ರಾಷ್ಟ್ರಗಳು ಕದನ ವಿರಾಮ ಘೋಷಿಸಿದ ನಂತರವೂ ಸ್ಫೋಟದ ಶಬ್ದ ಕೇಳಿಸುತ್ತಿದೆ' ಎಂದಿದ್ದಾರೆ.

'ಇದೆಂಥ ಅವಸ್ಥೆ. ಕದನ ವಿರಾಮ ಘೋಷಣೆಯಾಗಿದೆ. ಆದರೂ ಶ್ರೀನಗರದ ಸುತ್ತಮುತ್ತ ಸ್ಫೋಟದ ಶಬ್ದಗಳು ಮೊಳಗುತ್ತಲೇ ಇವೆ' ಎಂದು ಹೇಳಿದ್ದಾರೆ.

ಏ. 22ರಂದು ಪಹಲ್ಲಾಮ್‌ನಲ್ಲಿ ಭಯೋತ್ಪಾದಕರು 26 ಪ್ರವಾಸಿಗರನ್ನು ಗುಂಡಿಟ್ಟು ಹತ್ಯೆಗೈದಿದ್ದಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಮೇ 7ರಂದು 'ಆಪರೇಷನ್‌ ಸಿಂಧೂರ' ಆರಂಭಿಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ನೆಲೆ ಹೊಂದಿದ್ದ ಹಲವು ಭಯೋತ್ಪಾದಕ ಸಂಘಟನೆಗಳ ಪ್ರಧಾನ ಕಚೇರಿ ಮತ್ತು ತರಬೇತಿ ಕೇಂದ್ರಗಳ ಮೇಲೆ ದಾಳಿ ನಡೆಸಿತ್ತು. ಇದಕ್ಕೆ ಪ್ರತೀಕಾರವಾಗಿ ಪಾಕಿಸ್ತಾನವೂ ದಾಳಿಯ ಯತ್ನ ನಡೆಸಿತ್ತು. ಪಾಕ್‌ನ ದಾಳಿಯ ಯತ್ನಗಳನ್ನು ತಕ್ಕ ಪ್ರತ್ಯುತ್ತರಗಳ ಮೂಲಕ ಭಾರತ ವಿಫಲಗೊಳಿಸಿದೆ.

ಇದರ ಬೆನ್ನಲ್ಲೇ ಉಭಯ ರಾಷ್ಟ್ರಗಳು ಕದನ ವಿರಾಮಕ್ಕೆ ಸಮ್ಮತಿಸಿವೆ ಎಂದು ಅಮೆರಿಕ ಶನಿವಾರ ಸಂಜೆ ಹೇಳಿತು. ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಇದಕ್ಕೆ ಪ್ರತಿಕ್ರಿಯಿಸಿ, 'ಕದನ ವಿರಾಮಕ್ಕೆ ಭಾರತ ಒಪ್ಪಿದೆ. ಆದರೆ ಭಯೋತ್ಪಾದನೆ ವಿರುದ್ಧ ಸಮರಕ್ಕಲ್ಲ' ಎಂದು ಹೇಳಿದ್ದಾರೆ.

ಕದನ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಸಿದ್ದಕ್ಕೆ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ