Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ನೋಡಲು ತನ್ನಂತಿಲ್ಲ ಎಂದು ಮಗನನ್ನೇ ನದಿಗೆ ಎಸೆದು ಸಾಯಿಸಿದ ತಂದೆ…! ಚೇಷ್ಟೆ, ಅಪಹಾಸ್ಯದಿಂದ ರೋಸಿ ಹೋಗಿ ಕೃತ್ಯ

ವಿಜಯಪುರ: ಮಗ ನೋಡಲು ತನ್ನಂತೆ ಇಲ್ಲ ಎಂಬ ಕಾರಣಕ್ಕೆ 6 ವರ್ಷದ ಮಗನನ್ನು ತಂದೆಯೇ ನದಿಗೆ ಎಸೆದು ಕೊಲೆ ಮಾಡಿದ ಕ್ರೂರ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯ ನಾಗಠಾಣ ಗ್ರಾಮದ ಸಿದ್ದಾರ್ಥ ಮಲ್ಲಿಕಾರ್ಜುನ ಅರಕೇರಿ (6) ಕೊಲೆಯಾದ ಬಾಲಕ ಎಂದು ಗುರುತಿಸಲಾಗಿದೆ. ಮಲ್ಲಿಕಾರ್ಜುನ ಅರಕೇರಿ ಎಂಬಾತನೇ ಈ ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದಾನೆ. ನಾಗಠಾಣ ಗ್ರಾಮದಲ್ಲಿ ವಾಸವಿದ್ದ ಮಲ್ಲಿಕಾರ್ಜುನನಿಗೆ ಆತನ ಮಗನ ಬಗ್ಗೆ ‘ನಿನ್ನ ಮಗ ನೋಡಲು ನಿನ್ನಂತಿಲ್ಲ ಎಂದು ಕೆಲವರು ಪದೇ ಪದೇ ಚೇಡಿಸುತ್ತಿದ್ದರು.

ಗ್ರಾಮಸ್ಥರು ಹೇಳುತ್ತಿದ್ದ ಚುಚ್ಚು ಮಾತುಗಳು ಮಲ್ಲಿಕಾರ್ಜುನನ ಮನಸ್ಸಿನಲ್ಲಿ ಅನುಮಾನ ಮೂಡಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ದಿನನಿತ್ಯದ ಈ ಚೇಷ್ಟೆ ಮತ್ತು ಅಪಹಾಸ್ಯದಿಂದ ರೋಸಿಹೋದ ಮಲ್ಲಿಕಾರ್ಜುನ, ಮಗನನ್ನು ಹತ್ಯೆ ಮಾಡಲು ನಿರ್ಧರಿಸಿದ್ದ. ಮಾರ್ಚ್ 16 ರಂದು ಮಗ ಸಿದ್ದಾರ್ಥನನ್ನು ಶಾಲೆಗೆ ಸೇರಿಸುವುದಾಗಿ ನಂಬಿಸಿ ಮನೆಯಿಂದ ಕರೆದುಕೊಂಡು ಹೋಗಿದ್ದ. ಅಲ್ಲಿಂದ ನೇರವಾಗಿ ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿ ಬಳಿ ಕರೆದೊಯ್ದು, ಪುತ್ರನನ್ನು ನದಿಗೆ ತಳ್ಳಿದ್ದಾನೆ. ಮಗು ನೀರಿನಲ್ಲಿ ಮುಳುಗಿದ್ದನ್ನು ಕಂಡ ಬಳಿಕ ಅಲ್ಲಿಂದ ಪರಾರಿಯಾಗಿದ್ದಾನೆ.

ಬೃಹನ್‌ ನಾಟಕ….
ಹತ್ಯೆಯ ನಂತರ ಮನೆಗೆ ಮರಳಿದ ಮಲ್ಲಿಕಾರ್ಜುನ, ತನ್ನ ಮಗನನ್ನು ವಸತಿ ಶಾಲೆಯೊಂದಕ್ಕೆ ಸೇರಿಸಿದ್ದು, ಅಲ್ಲಿ ಇದ್ದಾನೆ ಎಂದು ಪತ್ನಿ ಭಾಗ್ಯಶ್ರೀ ಅವರಿಗೆ ಸುಳ್ಳು ಹೇಳಿ ನಂಬಿಸಿದ್ದ. ಮಗನ ಬಗ್ಗೆ ಹೆಂಡತಿ ಕೇಳಿದಾಗಲೆಲ್ಲ ಏನೋ ಸಬೂಬು ಹೇಳುತ್ತಿದ್ದ. ಏಪ್ರಿಲ್ 1 ರಂದು ಬಾಲಕ ಸಿದ್ದಾರ್ಥನ ಜನ್ಮದಿನವಿತ್ತು. ಹೀಗಾಗಿ ಮಗನನ್ನು ಮನೆಗೆ ಕರೆದುಕೊಂಡು ಬರುವಂತೆ ಪತ್ನಿ ಪಟ್ಟು ಹಿಡಿದರು. ಈ ವೇಳೆ ಗಾಬರಿಗೊಂಡ ಮಲ್ಲಿಕಾರ್ಜುನ ಆತ ಓಡಿ ಹೋಗಿದ್ದಾನೆ ಎಂದು ತಿಳಿಸಿದ್ದ. ಇದರಿಂದ ಅನುಮಾನ ಮೂಡಿ ಪತ್ನಿ, ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಮಲ್ಲಿಕಾರ್ಜುನನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ತನ್ನ ಹೀನ ಕೃತ್ಯದ ಬಗ್ಗೆ ಬಾಯ್ಬಿಟ್ಟಿದ್ದಾನೆ.

ಮಾರ್ಚ್ 16 ರಂದು ಮಹಾರಾಷ್ಟ್ರದ ಕರಾಡದ ಮಸೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪರಿಚಿತ ಬಾಲಕನ ಶವವೊಂದು ಪತ್ತೆಯಾಗಿತ್ತು. ಇದೇ ವೇಳೆ ಮಲ್ಲಿಕಾರ್ಜುನ ನೀಡಿದ ಹೇಳಿಕೆಗಳನ್ನು ನೋಡಿದಾಗ, ಅದು ಸಿದ್ದಾರ್ಥನ ಶವ ಎಂದು ತಾಳೆಯಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಮಲ್ಲಿಕಾರ್ಜುನ ಅರಕೇರಿಯನ್ನು ಪೊಲೀಸರು ಬಂಧಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆ