Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನ

 

 

 

ಬೆಂಗಳೂರು: ಹಿಂದಿ ಸೇರಿ ತೃತೀಯ ಭಾಷಾ ವಿಷಯಕ್ಕೆ ಸಂಬಂಧಿಸಿ ಗ್ರೇಡ್ ಬದಲು ಅಂಕವನ್ನೇ ನೀಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

 

ಈ ಬಗ್ಗೆ ಪ್ರತಿಕ್ರಿಯಿಸಿರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ, ಈ ಬಾರಿ ಕೋರ್ಟ್‌ ಆದೇಶವನ್ನು ಪಾಲಿಸಲಾಗುವುದು, ನ್ಯಾಯಾಲಯದ ಆದೇಶದ ಬಗ್ಗೆ ಸಿಎಂ ಅವರ ಗಮನಕ್ಕೂ ತಂದಿದ್ದು, ತೃತೀಯ ಭಾಷಾ ವಿಷಯಕ್ಕೆ ಅಂಕವನ್ನೇ ನೀಡಲಾಗುತ್ತದೆ. ಯಾವುದೇ ಗೊಂದಲ ಇಲ್ಲ. ಫಲಿತಾಂಶ ಪ್ರಕಟಣೆ ವಿಳಂಬ ಆಗಲ್ಲ. ಗುರುವಾರವೇ ಪ್ರಕಟಿಸುತ್ತೇವೆ ಎಂದು ಹೇಳಿದ್ದಾರೆ.

 

ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಚಿವ ಮಧು ಬಂಗಾರಪ್ಪ, ನ್ಯಾಯಾಲಯದ ಆದೇಶದ ವಿರುದ್ಧ ಯಾವುದೇ ಮೇಲ್ಮನವಿ ಸಲ್ಲಿಸದೆ, ಆದೇಶವನ್ನು ಪಾಲನೆ ಮಾಡುವುದಾಗಿ ತಿಳಿಸಿ, ಗ್ರೇಡ್ ಬದಲು ಅಂಕ ನೀಡುವುದಾಗಿ ಹೇಳಿದರು. ಇದಕ್ಕೆ ಸಿಎಂ ಸಹ ಸಮ್ಮತಿಸಿದ್ದಾರೆ ಎಂದರು.

 

ಮಾ.18ರಿಂದ ಏ. 2 ರವರೆಗೆ ನಡೆದಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆ 1ಕ್ಕೆ 8.30 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ತೃತೀಯ ಭಾಷಾ ಪರೀಕ್ಷೆ ನಡೆಯಲು ಕೆಲವೇ ದಿನ ಬಾಕಿ ಇದ್ದ ವೇಳೆ ಹೊಸ ವಿಷಯ ಪ್ರಕಟಿಸಿದ್ದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಈ ಬಾರಿ ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್‌ ನೀಡುವುದಾಗಿ ಹೇಳಿದ್ದರು.

 

ಇದನ್ನು ಪ್ರಶ್ನಿಸಿ ವಿದ್ಯಾರ್ಥಿಗಳು ಹೈಕೋರ್ಟ್‌ನಲ್ಲಿ ತಕರಾರು ಅರ್ಜಿ ಸಲ್ಲಿಸಿದ್ದರು. ಸರ್ಕಾರದ ಈ ದಿಢೀರ್ ನಿರ್ಧಾರಕ್ಕೆ ಹಿಂದಿ ಶಿಕ್ಷಕರೂ ವಿರೋಧಿಸಿದ್ದರು. ನ್ಯಾಯಾಲಯ ಅಂಕ ನೀಡುವಂತೆಯೇ ಆದೇಶಿಸಿತ್ತು. ಪುನರ್‌ ಪರಿಶೀಲನಾ ಅರ್ಜಿ ಸಲ್ಲಿಕೆ ವೇಳೆಯೂ ನ್ಯಾಯಾಲಯ, ಅದೇ ಆದೇಶ ನೀಡಿತ್ತಲ್ಲದೆ, ಹಾಲಿ ಅಂಕ ನೀಡುವ ನಿಯಮ ಜಾರಿಯಲ್ಲಿ ಇರುವುದರಿಂದ ಅದನ್ನೇ ಪಾಲಿಸಿ ಎಂದೂ ತಾಕೀತು ಮಾಡಿತ್ತು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕರುನಾಡಿಗೆ ಜಲಕಂಟಕ, ಭುವಿಯೇ ತಲ್ಲಣ : ಭವಿಷ್ಯ ನುಡಿದ ಪ್ರಖ್ಯಾತ ಸ್ವಾಮೀಜಿ...!ಬಾಟಲಿ, ಕ್ಯಾನ್‌ಗಳಲ್ಲಿ ಪೆಟ್ರೋಲ್-ಡೀಸೆಲ್ ಮಾರಾಟ ನಿಷೇಧ...!ಕೊನೆಗೂ ಸಿಹಿಸುದ್ದಿ : ಶೀಘ್ರದಲ್ಲೇ ಮಾರ್ಚ್, ಏಪ್ರಿಲ್ ಗೃಹಲಕ್ಷ್ಮೀ ಹಣ ಜಮಾ:  ಲಕ್ಷ್ಮೀ ಹೆಬ್ಬಾಳಕರ್ ಕೊಟ್ರು ಈ ಗುಡ್ ನ್ಯೂಸ್..!ನೈರುತ್ಯ ರೇಲ್ವೆ ಅಧಿಕಾರಿಗಳೊಂದಿಗೆ ಸಂಸದ ಶೆಟ್ಟರ್ ಸಭೆಬೆಳಗಾವಿ : 12ಕ್ಕೆ ನಗರದ ವಿವಿಧೆಡೆ ವಿದ್ಯುತ್‌ ವ್ಯತ್ಯಯಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿಸರಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿಭತ್ಯೆ ಹೆಚ್ಚಳ ಪ್ರಜಾಪ್ರಭುತ್ವದ ತತ್ವಗಳನ್ನು ರಕ್ಷಿಸುವುದು ನಾಗರಿಕರ ಆದ್ಯ ಕರ್ತವ್ಯ : ಎ.ಎಸ್.ಪಾಶ್ಚಾಪುರೆಪ್ರಧಾನಿ ಸಂಚರಿಸುವ ಮಾರ್ಗದಲ್ಲಿ ಅನುಮಾನಾಸ್ಪದ ವಸ್ತುಗಳಿದ್ದ ಬ್ಯಾಗ್‌ ಪತ್ತೆತಮಿಳುನಾಡು ಮುಖ್ಯಮಂತ್ರಿಯಾಗಿ ವಿಜಯ ಪ್ರಮಾಣ ವಚನ