Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆಗೆ ನಿರ್ಬಂಧ ಹೇರಿ ಆದೇಶ ಹೊರಡಿಸಿದ ಸರಕಾರ

Advertisement
 

ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ಬ್ಯಾನ್ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ (ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಇತ್ಯಾದಿ.) ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ Celebrities ಇತ್ಯಾದಿ ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಇತ್ಯಾದಿ ಹಂಚು ಹಂಚುವ ಅದ್ದೂರಿ ಕಾರ್ಯಕ್ರಮಗಳು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಆಚರಿಸಲ್ಪಡುತ್ತಿರುವ ಹುಟ್ಟುಹಬ್ಬದೊಂದಿಗೆ ಹೋಲಿಕೆ (evaparision ಮಾಡಿಕೊಂಡಲ್ಲಿ ಈ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಿ, ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ವಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.

ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟಿ, ಬಾಲ್ಕ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ-ತಾಯಿಯಿಂದ ತಿರಸ್ಕರಿಸಲ್ಪಟ್ಟಿ, ತಾಯಿ ಅಥವಾ ತಂದೆ ಇಲ್ಲದ,
ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ. ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸನ್ನಡತೆ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾನು ಸಿಎಂ ಆದ ನಂತರ ರಾಮಲಿಂಗಾ ರೆಡ್ಡಿಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ‌ ಕೊಡ್ತೇನೆ ಅಂದ್ದಿದ್ದು ನಿಜ, ಆದರೆ…: ಸಿಎಂ ಡಿಕೆ ಶಿವಕುಮಾರ್ಜನಾಕ್ರೋಶಕ್ಕೆ ಹೆದರಿ ಕರ್ನಾಟಕದಲ್ಲಿ ಸಿಎಂ ಬದಲಾವಣೆ: ಪ್ರಧಾನಿ ಮೋದಿ  ಗುಡುಗುಡಿಕೆಶಿ ಸಂಪುಟದಲ್ಲಿ ಖಾತೆ ಅಸಮಾಧಾನ ತೀವ್ರ : ರಾಮಲಿಂಗಾ ರೆಡ್ಡಿ ರಾಜೀನಾಮೆ ಬೆನ್ನಲ್ಲೇ ಸಚಿವ ಮುನಿಯಪ್ಪ ಬಹಿರಂಗ ಅಸಮಾಧಾನ !ಉದಯಕುಮಾರಗೆ ಪ್ರತಿಷ್ಠಿತ ಪ್ರಶಸ್ತಿಮುಂದಿನ ಬಾರಿ ಮಹಿಳೆಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತದೆ ಎನ್ನುವ ವಿಶ್ವಾಸ ಇದೆ ; ಲಕ್ಷ್ಮೀ ಹೆಬ್ಬಾಳ್ಕರ್ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆಕಾನೂನು ಉತ್ಸವದಲ್ಲಿ ಸಾಧನೆ : ಸಾಧಕರಿಗೆ ಸನ್ಮಾನರಾಮಲಿಂಗಾ ರೆಡ್ಡಿ ಅವರೊಂದಿಗೆ ಮಾತನಾಡುವೆ: ಡಿ.ಕೆ. ಶಿವಕುಮಾರ್ಕೇರಳಕ್ಕೆ ಮುಂಗಾರು ಆಗಮನ : ಕರ್ನಾಟಕದಲ್ಲಿ 6 ದಿನ ಭಾರಿ ಮಳೆ ಸಾಧ್ಯತೆ ; ಹಲವು ಜಿಲ್ಲೆಗಳಿಗೆ ಆರೇಂಜ್‌ ಅಲರ್ಟ್‌ ಘೋಷಣೆಬಿಜೆಪಿಗೆ ಆಘಾತ ; ಪಕ್ಷಕ್ಕೆ ರಾಜೀನಾಮೆ ನೀಡಿದ ತಮಿಳುನಾಡಿನ ಪ್ರಭಾವಿ ನಾಯಕ ಅಣ್ಣಾಮಲೈ