Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಕರ್ನಾಟಕ ಪರ ನಿರ್ಣಯ ಅಂಗೀಕರಿಸಲು ಒತ್ತಾಯಿಸಿ ಮತ್ತೊಮ್ಮೆ ಮನವಿ ಸಲ್ಲಿಸಿದ ಕಿತ್ತೂರು ಕರ್ನಾಟಕ ಸೇನೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸರ್ವ ಸಾಧಾರಣ ಸಭೆಯಲ್ಲಿ ಕರ್ನಾಟಕ ಪರವಾದ ನಿರ್ಣಯಗಳನ್ನು ಅಂಗೀಕರಿಸುವಂತೆ ಆಗ್ರಹಿಸಿ ಬೆಳಗಾವಿಯ ಸಮಾನ ಮನಸ್ಕ ಕನ್ನಡ ಸಂಘಟನೆಗಳು ಆರಂಭಿಸಿರುವ ಆಂದೋಲನದ ಭಾಗವಾಗಿ ಕಿತ್ತೂರು ಕರ್ನಾಟಕ ಸೇನೆಯ ಯುವ ಘಟಕ ಮಂಗಳವಾರ ಮಹಾನಗರ ಪಾಲಿಕೆಯ ಎದುರು ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ ಮೇಯರ್ ಪ್ರೀತಿ ಕಾಮಕರ ಹಾಗೂ ಉಪಮೇಯರ್ ಹನುಮಂತ ಕೊಂಗಾಲಿ ಅವರಿಗೆ ಮನವಿ ಸಲ್ಲಿಸಿತು.

ಯುವ ಘಟಕದ ರಾಜ್ಯಾಧ್ಯಕ್ಷ ಮಹೇಶ ಶಿಗೀಹಳ್ಳಿ ಅವರ ನೇತೃತ್ವದಲ್ಲಿ ನಡೆದ ಇಂದಿನ ಧರಣಿ ಸತ್ಯಾಗ್ರಹಿಗಳು ಸಲ್ಲಿಸಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮೇಯರ್ ಹಾಗೂ ಉಪ ಮೇಯರ್ ಮನವಿಯನ್ನು ಸಹಾನುಭೂತಿಯಿಂದ ಪರಿಶೀಲಿಸುವುದಾಗಿ ಭರವಸೆ ನೀಡಿದರು.

2005 ರ ಅಕ್ಟೋಬರ್ 27 ರಂದು ಪಾಲಿಕೆಯ ಸಭೆಯಲ್ಲಿ ಮಹಾರಾಷ್ಟ್ರ ಪರವಾಗಿ ಅಂಗೀಕರಿಸಿದ ಗೊತ್ತುವಳಿಯನ್ನು ಮಹಾರಾಷ್ಟ್ರ ಸರಕಾರ ಸುಪ್ರೀಂ ಕೋರ್ಟಿನ ಗಡಿ ವಿವಾದ ದಾವೆಯಲ್ಲಿ ಪೂರಕ ದಾಖಲೆಯನ್ನಾಗಿ ಬಳಸುತ್ತಿದೆ. ಇದು ಕರ್ನಾಟಕದ ಹಿತಾಸಕ್ತಿಗೆ ಧಕ್ಕೆ ತರಬಹುದಾಗಿದೆ. ಈಗ ಪಾಲಿಕೆಯಲ್ಲಿ ಕರ್ನಾಟಕ ಪರವಾಗಿರುವ ಸದಸ್ಯರ ಸಂಖ್ಯೆ 55 ಆಗಿರುವುದರಿಂದ ಕರ್ನಾಟಕದ ಪರವಾಗಿ ನಿರ್ಣಯಗಳನ್ನು ಅಂಗೀಕರಿಸಲು ಯಾವುದೇ ಅಡಚಣೆಗಳಿಲ್ಲ. ಆದ್ದರಿಂದ ಆದಷ್ಟು ಬೇಗ ಇಂತಹ ನಿರ್ಣಯವನ್ನು ಅಂಗೀಕರಿಸಬೇಕೆಂದು ಮನವಿಯಲ್ಲಿ ಆಗ್ರಹಿಸಲಾಗಿದೆ.

ಯುವ ಘಟಕ ಪಾಲಿಕೆಯ ಆಯುಕ್ತ ಎಂ. ಕಾರ್ತಿಕ ಅವರಿಗೆ ಮತ್ತೊಂದು ಮನವಿಯನ್ನು ಸಲ್ಲಿಸಿದ್ದು ಬೆಳಗಾವಿ ಮಹಾನಗರದ ನಾಮಫಲಕಗಳಲ್ಲಿ ಪ್ರತಿಶತ 60 ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಬೇಕೆಂದು ಆಗ್ರಹಿಸಿತು
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳುಸಾವಿರಾರು ಕೋಟಿ ಹೂಡಿಕೆ ಮಾಡಿದವರಿಗೆ ಆತಂಕ :  ICE CREAM ಮಾರುತ್ತಿದ್ದವ ಈ ಪರಿ ಬೆಳೆದದ್ದು ಹೇಗೆ ?ಕೊನೆಗೂ ಶಿವಾನಂದ ನೀಲಣ್ಣವರ ಬಂಧನ..!ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆ