ವಿಜಯಪುರ: ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಏಪ್ರಿಲ್ 3ರಂದು ಕೊಳವೆ ಬಾವಿಯಲ್ಲಿ ಸಿಲುಕಿ, ಸಾವು ಗೆದ್ದಿದ್ದ ಸಾತ್ವಿಕ್ಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಸಂಪೂರ್ಣವಾಗಿ ಗುಣಮುಖನಾಗಿ ಶನಿವಾರ ಸಂಜೆ ಆಸತ್ರೆ ಯಿಂದ ಬಿಡುಗಡೆಯಾಗಿದ್ದಾನೆ. 48 ಗಂಟೆಗಳವರೆಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಿದ ವೈದ್ಯರ ತಂಡ ಸಾತ್ವಿಕ್ ಹೆಸರಿನಲ್ಲಿ ಕೇಕ್ ತಂದು ಆಸ್ಪತ್ರೆಯಲ್ಲಿ ಮಗುವಿನ ತಂದೆ-ತಾಯಿ ಜೊತೆಗೆ ಕೇಕ್ ತಿನ್ನಿಸಿ ಸಂಭ್ರಮಿಸಿದರು. ಜೊತೆಗೆ ಮಗುವಿಗೆ ವಿಶೇಷ ಉಡುಗೊರೆ ನೀಡಿ ಕಳುಹಿಸಿದರು.ಸಾತ್ವಿಕ್ ಜೊತೆಗೆ ಜಿಲ್ಲಾಸ್ಪತ್ರೆಯಿಂದ ನಗು ನಗುತ್ತಲೇ ತಾಯಿ ಪೂಜಾ ಹಾಗೂ ತಂದೆ ಸತೀಶ ಮುಜಗೊಂಡ ಮನೆಗೆ ಹೋಗಿದ್ದಾರೆ. ಜಿಲ್ಲಾ ಶಸ್ತ್ರಚಿಕಿತ್ಸಕ ಶಿವಾನಂದ ಮಾಸ್ತಿಹೊಳಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಬಸವರಾಜ ಹುಬ್ಬಳ್ಳಿ ಬೀಳ್ಕೊಟ್ಟಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.