Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಮಾಜಿ ಪ್ರಧಾನಿ ಹತ್ಯೆ ಪ್ರಕರಣದಲ್ಲಿ ಶಿಕ್ಷೆ ಅನುಭವಿಸಿದ್ದ ವ್ಯಕ್ತಿ ಈಗ ವಕೀಲ

Advertisement

Lಚೆನ್ನೈ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ ಎ. ಜಿ. ಪೇರರಿವಾಲನ್, ಈಗ ಮದ್ರಾಸ್‌ ಹೈಕೋರ್ಟ್‌ನಲ್ಲಿ ವಕೀಲರಾಗಿ ವೃತ್ತಿ ಆರಂಭಿಸಿದ್ದಾರೆ.

ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ 31 ವರ್ಷಗಳ ಕಾಲ ಜೈಲುವಾಸ ಅನುಭವಿಸಿದ್ದ ಪೇರರಿವಾಲನ್ ಅವರನ್ನು, ಸುಪ್ರೀಂ ಕೋರ್ಟ್ 2022 ಮೇ 18ರಂದು ಬಿಡುಗಡೆಗೊಳಿಸಿತ್ತು. ನಂತರ ಬೆಂಗಳೂರಿನ ಡಾ.ಬಿ. ಆ‌ರ್. ಅಂಬೇಡ್ಕ‌ರ್ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಅವರು, 2025ರಲ್ಲಿ ನಡೆದ ಅಖಿಲ ಭಾರತ ವಕೀಲರ ಪರೀಕ್ಷೆಯಲ್ಲಿ (ಎಐಬಿಇ) ಉತ್ತೀರ್ಣರಾಗಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿ ವಕೀಲ ಸಂಘದಲ್ಲಿ ಹೆಸರು ನೋಂದಾಯಿಸಿಕೊಂಡಿರುವ ಅವರು, ಕೈದಿಗಳಿಗೆ ಕಾನೂನು ನೆರವು ನೀಡುವ ಬಗ್ಗೆ ಗಮನಹರಿಸುವುದಾಗಿ ತಿಳಿಸಿದ್ದಾರೆ.

54 ವರ್ಷದ ಪೇರರಿವಾಲನ್, ಸ್ಫೋಟಕ ಸಾಧನ ಪೂರೈಸಿದ ಆರೋಪದ ಮೇಲೆ 1991ರಲ್ಲಿ ತಮ್ಮ 19ನೇ ವಯಸ್ಸಿನಲ್ಲಿ ಬಂಧನಕ್ಕೊಳಗಾಗಿದ್ದರು.

ಸೋಮವಾರ ನಡೆದ ಸಮಾರಂಭದಲ್ಲಿ ಅವರನ್ನು ಅಧಿಕೃತವಾಗಿ ವಕೀಲರ ಪರಿಷತ್ತಿಗೆ ಸೇರಿಸಿಕೊಳ್ಳಲಾಯಿತು. ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಸುಶ್ರುತ್ ಅರವಿಂದ್ ಧರ್ಮಾಧಿಕಾರಿ ಅವರು ಈ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೇಂದ್ರ ಸರಕಾರದಿಂದ ವಿಶೇಷ ಯೋಜನೆ ಮತ್ತು ಅನುದಾನ ಒದಗಿಸುವಂತೆ ಕೇಂದ್ರ ಸಚಿವರಿಗೆ ಮನವಿ ಮಾಡಿದ ಕಿರಣ್ ಜಾಧವ ಆಟೋನಗರ, ರಾಮತೀರ್ಥನಗರ ಕೈಗಾರಿಕಾ ಪ್ರದೇಶಗಳಲ್ಲಿ ಮೂಲ ಸೌಕರ್ಯ ಹೆಚ್ಚಿಸಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಿSSLC ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ : ಶಿಕ್ಷಕನಿಗೆ ಥಳಿತವಾಯುಪಡೆ ಸಿಬ್ಬಂದಿ ಪತ್ನಿಗೆ ಮತ್ತು ಬರಿಸುವ ಪಾನೀಯ ನೀಡಿ ಅತ್ಯಾಚಾರ, ಬ್ಲ್ಯಾಕ್‌ಮೇಲ್, ಬಲವಂತದ ಮತಾಂತರಕ್ಕೆ ಯತ್ನ; ಇಬ್ಬರ ಬಂಧನಇನ್ಮುಂದೆ ವೈದ್ಯರ ಚೀಟಿ ಇಲ್ಲದೇ ಕೆಮ್ಮಿನ ಔಷಧ ಮಾರಾಟ ನಿಷೇಧಮಾರಿಹಾಳ ಗ್ರಾಮದಲ್ಲಿ ಎನ್‌ಎಸ್‌ಎಸ್ ವಿಶೇಷ ಶಿಬಿರ; ಉಚಿತ ನೇತ್ರ ತಪಾಸಣೆಯಿಂದ ಗ್ರಾಮಸ್ಥರಿಗೆ ಪ್ರಯೋಜನಟೆಲಿಗ್ರಾಮ್ ನಿರ್ಬಂಧಿಸಿದ ಕೇಂದ್ರ ಸರ್ಕಾರಶರಣರು ಜನಪರವಾದ ಸಾಹಿತ್ಯಕ್ಕೆ ಒತ್ತು ನೀಡಿದರು: ಡಾ.ವಿದ್ಯಾವತಿ ಕುಂದರಗಿ* *ಮಹಾಸಭೆಯಲ್ಲಿ ಅಮವಾಸ್ಯೆ ಅನುಭಾವ ಗೋಷ್ಠಿರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ ಹಣದ ತೊಂದರೆಯುದ್ದರೂ ಪರರ ಹಣ ಬೇಡವೆಂದು ಚಿಕ್ಕೋಡಿಯಲ್ಲಿ ಪ್ರಾಮಾಣಿಕತೆ ಮೆರೆದ ಕುಂದಾಪುರದ ವ್ಯಕ್ತಿ..!ಐಎಎಸ್‌ ಅಧಿಕಾರಿಗಳೂ ಸೇರಿದಂತೆ ಎಲ್ಲರ ಮೇಲೂ ‘ಎಐ’ ಕಣ್ಗಾವಲು | ಕರ್ತವ್ಯದ ಸ್ಥಳದ ಮಾಹಿತಿ ಸರ್ಕಾರಕ್ಕೆ ಲಭ್ಯ