Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೀದರ್ ಕ್ಷೇತ್ರಕ್ಕೆ ಕೇಳಿ ಬಂತು ಅಥಣಿ ಸಾಹುಕಾರ್ ಹೆಸರು !

 

ಬೆಳಗಾವಿ :
ಮಾಜಿ ಉಪ ಮುಖ್ಯಮಂತ್ರಿ ಹಾಗೂ ಅಥಣಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ಅವರನ್ನು ಬಿಜೆಪಿಗೆ ಕರೆ ತರಬೇಕು ಎಂಬ ಚರ್ಚೆ ಎಲ್ಲೆಡೆ ಜೋರಾಗಿ ನಡೆದಿದೆ.

ಈ ನಡುವೆ ಅವರನ್ನು ಮತ್ತೆ ಬಿಜೆಪಿಗೆ ಕರೆತಂದು ಲೋಕಸಭಾ ಚುನಾವಣೆಗೆ ಕಣಕ್ಕಿಳಿಸಬೇಕು ಎಂಬ ಪ್ರಯತ್ನವೂ ಸಹ ನಡೆದಿದೆ ಎನ್ನಲಾಗಿದೆ. ಇದೀಗ ದೂರದ ಬೀದರ್ ಲೋಕಸಭಾ ಮತಕ್ಷೇತ್ರಕ್ಕೆ ಲಕ್ಷ್ಮಣ ಸವದಿ ಅವರ ಹೆಸರು ಬಲವಾಗಿ ಕೇಳಿ ಬಂದಿದ್ದು ಅಲ್ಲಿನ ಹಾಲಿ ಲೋಕಸಭಾ ಸದಸ್ಯರ ಬಗೆಗಿನ ಸ್ಥಳೀಯ ಶಾಸಕರ ಭಿನ್ನಮತವೇ ಇದೀಗ ಸವದಿ ಅವರನ್ನು ಬೀದರ್ ನಲ್ಲಿ ಕಣಕ್ಕಿಳಿಸುವ ಬಗೆಗಿನ ಚರ್ಚೆಗೆ ಕಾರಣವಾಗಿದೆ.

ಈಗಾಗಲೇ ಬೆಳಗಾವಿ ಜಿಲ್ಲೆಯ ಬಿಜೆಪಿ ನಾಯಕರು ಸವದಿ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದು, ಸತತ ಸಂಪರ್ಕದಲ್ಲಿದ್ದು ಮನವೊಲಿಸುವ ಮುಂದುವರೆಸಿದ್ದಾರೆ.

ಬೀದರ್‌ ಲೋಕಸಭಾ ಕ್ಷೇತ್ರದ ಹಾಲಿ ಸದಸ್ಯರಾಗಿರುವ ಕೇಂದ್ರ ಸಚಿವ ಭಗವಂತ ಖೂಬಾ ಅವರಿಗೆ ಮತ್ತೊಮ್ಮೆ ಟಿಕೆಟ್ ನೀಡುವುದಕ್ಕೆ ಸ್ಥಳೀಯ ಬಿಜೆಪಿ ಶಾಸಕರೇ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಶಾಸಕ ಪ್ರಭು ಚವ್ಹಾಣ್ ಅವರಂತೂ ಬಹಿರಂಗವಾಗಿಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಾಲಿಗೆ ಎರಗಿ ಮನವಿ ಮಾಡಿದ್ದರು. ಚವ್ಹಾಣ್ ಅವರ ಅಭಿಪ್ರಾಯಕ್ಕೆ ಹಲವು ಶಾಸಕರ ಸಹಮತ ವ್ಯಕ್ತಪಡಿಸಿದ್ದಾರೆ.

ಹೀಗಾಗಿ, ಈಗ ರಾಜ್ಯ ಬಿಜೆಪಿ ನಾಯಕರು ಖೂಬಾ ಅವರನ್ನು ಬದಲಿಸುವುದಾದರೆ ಪರ್ಯಾಯವಾಗಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂಬ ಚಿಂತನೆ ನಡೆಸಿದ್ದಾರೆ. ಆಗ ಅವರಿಗೆ ಕಾಣಿಸಿದ್ದು ಕಾಂಗ್ರೆಸ್ಸಿನ ಲಕ್ಷ್ಮಣ ಸವದಿ.

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮರಾಠಾ ಭಾಷಿಕ ಮತದಾರರೂ ನಿರ್ಣಾಯಕರಾಗಿದ್ದಾರೆ. ಜತೆಗೆ ಲಿಂಗಾಯತ ಸಮುದಾಯವೂ ಪ್ರಮುಖ ಪಾತ್ರ ವಹಿಸಲಿದೆ. ಈ ಎರಡೂ ಅಂಶಗಳ ಮೇಲೆ ಲಕ್ಷ್ಮಣ ಸವದಿ ಅವರು ಸೂಕ್ತ ಅಭ್ಯರ್ಥಿಯಾಗಬಲ್ಲರು ಎಂಬ ಲೆಕ್ಕಾಚಾರ ಬಿಜೆಪಿ ಪಾಳೆಯದಲ್ಲಿ ನಡೆದಿದೆ ಎನ್ನಲಾಗಿದೆ.

ಬೀದರ್‌ನಲ್ಲಿ ಛಾಪು ಹೊಂದಿರುವ ಸವದಿ: ಹಿಂದೆ ಸವದಿ ಅವರು ಬಿಜೆಪಿಯಲ್ಲಿದ್ದಾಗ ನಡೆದ ಬೀದರ್‌ ಜಿಲ್ಲೆಯ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಉಸ್ತುವಾರಿಯನ್ನಾಗಿ ನೇಮಿಸಲಾಗಿತ್ತು. ಆ ಕ್ಷೇತ್ರದಲ್ಲಿ ಬಿಜೆಪಿ ಗೆಲುವನ್ನೂ ಸಾಧಿಸಿತ್ತು. ಈ ಕಾರಣದಿಂದ ಸವದಿ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಬಗ್ಗೆ ಪಕ್ಷದಲ್ಲಿ ಚರ್ಚೆ ನಡೆದಿದೆ.

ಈ ನಡುವೆ ಸವದಿ ಅವರೊಂದಿಗೆ ಕಳೆದ ವಾರ ನಡೆದ ಬೆಳಗಾವಿ ಬಿಜೆಪಿ ನಾಯಕರ ಮಾತುಕತೆ ವೇಳೆ ಲೋಕಸಭಾ ಚುನಾವಣೆ ಬಗ್ಗೆ ಚರ್ಚೆ ಬಂದಾಗ ಬೆಳಗಾವಿ ಲೋಕಸಭಾ ಕ್ಷೇತ್ರದ ಬಗ್ಗೆ ಒಲವು ವ್ಯಕ್ತವಾಗಿತ್ತು. ಆದರೆ, ಅಲ್ಲಿಂದ ಟಿಕೆಟ್ ನೀಡುವುದಕ್ಕೆ ಪಕ್ಷದ ನಾಯಕರಾದ ಜಾರಕಿಹೊಳಿ ಸಹೋದರರು ಒಪ್ಪುವುದಿಲ್ಲ ಎಂಬ ಕಾರಣಕ್ಕಾಗಿ ಬಿಜೆಪಿ ನಾಯಕರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ತಿಳಿದು ಬಂದಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ