Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರಾ ಶೆಟ್ಟರ್ ಮಗ

ಬೆಳಗಾವಿ : ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಹಾಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಈ ಹಿಂದೆ ಸ್ಪರ್ಧೆ ನಡೆಸಿ ಗೆಲುವು ಸಾಧಿಸಿದ್ದ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರಕ್ಕೆ ಇದೀಗ ಉಪಚುನಾವಣೆ ನಡೆಯುತ್ತಿದೆ. ಬೊಮ್ಮಾಯಿ ಅವರು ಲೋಕಸಭಾ ಚುನಾವಣೆಗೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಶಿಗ್ಗಾವಿ ವಿಧಾನಸಭಾ ಮತಕ್ಷೇತ್ರಕ್ಕೆ ಈಗಾಗಲೇ ಉಪಚುನಾವಣೆ ದಿನಾಂಕ ಘೋಷಣೆಯಾಗಿದ್ದು ಬಿಜೆಪಿ ಪಾಳಯದಲ್ಲಿ ಯಾರು ಸ್ಪರ್ಧೆ ನಡೆಸುತ್ತಾರೆ ಎಂಬ ಕುತೂಹಲ ಇದೆ. ಈ ನಡುವೆ ಬೆಳಗಾವಿ ಬಿಜೆಪಿ ಸಂಸದ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರ ಪುತ್ರನ ಹೆಸರು ಶಿಗ್ಗಾವಿ ಮತಕ್ಷೇತ್ರಕ್ಕೆ ಮುನ್ನಲೆಗೆ ಬಂದಿದೆ. ಈಗಾಗಲೇ ಹುಬ್ಬಳ್ಳಿಯಲ್ಲಿ 'ನಶಾ ಮುಕ್ತ ಹುಬ್ಬಳ್ಳಿ' ಎಂಬ ಅಭಿಯಾನದ ಮೂಲಕ ಸಾಮಾಜಿಕ ಚಟುವಟಿಕೆಯಲ್ಲಿ ನಿರತರಾಗಿರುವ ಜಗದೀಶ ಶೆಟ್ಟರ್ ಸುಪುತ್ರ ಸಂಕಲ್ಪ ಶೆಟ್ಟರ್ ಅವರಿಗೆ ಬಿಜೆಪಿ ಶಿಗ್ಗಾವಿ ಉಪಚುನಾವಣೆಯಲ್ಲಿ ಟಿಕೆಟ್ ನೀಡುತ್ತದಾ ಕಾದು ನೋಡಬೇಕಾಗಿದೆ. ಶಿಗ್ಗಾವಿಗೆ ಬಿಜೆಪಿಯಲ್ಲಿ ಆಕಾಂಕ್ಷಿಗಳ ಬಹುದೊಡ್ಡ ಪಟ್ಟಿಯೇ ಹರಿದಾಡುತ್ತಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸುಪುತ್ರ ಭರತ್ ಅವರ ಹೆಸರು ಸಹ ಮೊದಲಿನಿಂದಲೂ ಶಿಗ್ಗಾವಿ ಮತಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಒಟ್ಟಾರೆ, ಬಿಜೆಪಿ ಇಷ್ಟರಲ್ಲೇ ಉಪಚುನಾವಣೆಗೆ ಟಿಕೆಟ್ ಘೋಷಣೆ ಮಾಡಲಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಕಾದು ನೋಡಬೇಕಾಗಿದೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ