Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆನಂದ ಗಡ್ಡದೇವರಮಠಗೆ ಹಾವೇರಿ ಲೋಕಸಭಾ ಚುನಾವಣೆ ಕೈ ಟಿಕೆಟ್‌ ?

ಆನಂದಸ್ವಾಮಿಗಡ್ಡ ದೇವರಮಠ ಅವರನ್ನು ಕಾಂಗ್ರೆಸ್ ಪಕ್ಷ ಈ ಹಿಂದೆ ವಿಧಾನ ಪರಿಷತ್ ಚುನಾವಣೆಗೆ ತನ್ನ ಅಧಿಕೃತ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿತ್ತು. ಬೆಳಗಾವಿಯಲ್ಲೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ಬದಲಾದ ರಾಜಕೀಯ ಸನ್ನಿವೇಶಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಗೆಲುವಿಗೂ ಕಾರಣರಾಗಿದ್ದರು.

ಬೆಳಗಾವಿ : 2013 ರ ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಸಿಗದೇ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ಧ ಪ್ರಬಲ ರಾಜಕಾರಿಣಿ ಇದೀಗ ಹಾವೇರಿ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಭರದ ತಯಾರಿ ಮಾಡಿಕೊಳ್ಳುತ್ತಿದ್ದಾರೆ.

ಮಾಜಿ ಶಾಸಕ ಜಿ.ಎಸ್.ಗಡ್ಡದೇವರಮಠ ಎರಡು ಬಾರಿ ಶಿರಹಟ್ಟಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು.
ಅವರ ಪುತ್ರರಾಗಿರುವ ಆನಂದಸ್ವಾಮಿ ಗಡ್ಡದೇವರ ಮಠ ಅವರು ಈ ಹಿಂದೆ ಬೆಳಗಾವಿ ಗ್ರಾಮೀಣ ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ಕಾಂಗ್ರೆಸ್ ಪಕ್ಷ ಅವರ ಬದಲು ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಟಿಕೆಟ್ ನೀಡಿತ್ತು. ಹೀಗಾಗಿ ಗಡ್ಡದೇವರಮಠ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ. ಇದರಿಂದ ಬಂಡೆದ್ದ ಅವರು ಪಕ್ಷೇತರರಾಗಿ ಕಣಕ್ಕಿಳಿದು ಗಣನೀಯ ಪ್ರಮಾಣದ ಮತ ಪಡೆದಿದ್ದರು. ಆಗ ಅವರು ಸುಮಾರು 17,670 ಮತಗಳನ್ನು ಪಡೆದು ಕಾಂಗ್ರೆಸ್ ಅಧಿಕೃತ ಅಭ್ಯರ್ಥಿಯ ಸೋಲಿಗೆ ಕಾರಣರಾಗಿದ್ದರು. ಬೆಳಗಾವಿಯಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿರುವ ಅವರು ನಂತರದ ದಿನಗಳಲ್ಲಿ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಲಕ್ಷ್ಮೀ ಹೆಬ್ಬಾಳ್ಕರ ಅವರ ಗೆಲುವಿಗೂ ಸಹಾ ಕಾರಣರಾಗಿದ್ದರು.

ಕಾಂಗ್ರೆಸ್ ಪಕ್ಷ ಸೇರಿ ಆಗಾಗ ಚುನಾವಣೆಯಲ್ಲಿ ಸ್ಪರ್ಧಿಸುವ ಬಯಕೆ ವ್ಯಕ್ತಪಡಿಸುತ್ತಿದ್ದರು. ಇದೀಗ ಲೋಕಸಭಾ ಚುನಾವಣೆ ಎದುರಾಗುತ್ತಿರುವ ಹಿನ್ನೆಲೆಯಲ್ಲಿ ಅವರು ಮತ್ತೆ ಹಾವೇರಿ ಲೋಕಸಭಾ ಮತಕ್ಷೇತ್ರದಿಂದ ಕಣಕ್ಕಿಳಿಯಲು ಅಗತ್ಯವಾದ ತಯಾರಿ ನಡೆಸಿದ್ದಾರೆ. ತಾವೇ ಅಭ್ಯರ್ಥಿಯಾಗುವ ನಿಟ್ಟಿನಲ್ಲಿ ಎಲ್ಲೆಡೆ ಭರ್ಜರಿ ತಯಾರಿ ಮಾಡಿಕೊಳ್ಳುತ್ತಿರುವುದು ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷ ಈ ಬಾರಿಯಾದರೂ ಅವರಿಗೆ ಟಿಕೆಟ್ ನೀಡುತ್ತದಾ ಕಾದು ನೋಡಬೇಕಾಗಿದೆ.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು