Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಆಯುರ್ವೇದ ವೈದ್ಯನ ಕೊಲೆ ಆರೋಪಿಯನ್ನು ಬಂಧಿಸಿದ ಪೊಲೀಸರು ; ಚಿನ್ನದ ಆಸೆಗೆ ಪರಿಚಯಸ್ಥನಿಂದಲೇ ಕೊಲೆ

 

 

ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಕೆ.ಹೆಚ್.ಬಿ ಕಾಲೋನಿಯಲ್ಲಿ ಮದುವೆ ಸಿದ್ಧತೆಯಲ್ಲಿದ್ದ ವೈದ್ಯರನ್ನು ಹತ್ಯೆ ಮಾಡಿದ ಆರೋಪಿಯನ್ನು ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಬಂಗಾರದ ಸಮೇತ ಬಂಧಿಸಿದ್ದಾರೆ.

ಡಾ. ರಮೇಶ್ ಕಲಗುಟಕರ (51) ಅವರನ್ನು ಕೊಲೆ ಮಾಡಿದ ಆರೋಪದ ಮೇಲೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಮಂಜುನಾಥ ಪಿ.ಎಲ್‌. (70) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

 

ಆರೋಪಿಯಿಂದ 15 ಲಕ್ಷ ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ₹50 ಸಾವಿರ ನಗದು ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೊಲೆಗೆ ಬಳಸಿದ ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ.

 

ಈತ ವೈದ್ಯನಿಗೆ ಪರಿಚಯಸ್ಥ ಎನ್ನಲಾಗಿದೆ. ಬಂಗಾರದ ಆಸೆಗೆ ಬಿದ್ದ ಈತ ಸೋಮವಾರ (ಏಪ್ರಿಲ್‌ 20) ಮದುವೆಯಾಗಬೇಕಿದ್ದ ವೈದ್ಯ ಡಾ.ರಮೇಶ ಅವರನ್ನುಕೊಲೆ ಮಾಡಿರುವುದು ಪ್ರಾಥಮಿಕ ತನಿಖೆಯಿಂದ ಬೆಳಕಿಗೆ ಬಂದಿದೆ.

ಶನಿವಾರ ರಾತ್ರಿ ವೈದ್ಯರ ಮನೆಯಲ್ಲಿ ತಂಗಿದ್ದ ಮಂಜುನಾಥಗೆ ಡಾ. ರಮೇಶ, ತಾನು ಮದುವೆಗಾಗಿ ತಂದಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನದ ಒಡವೆಗಳನ್ನು ತೋರಿಸಿದ್ದಾರೆ. ಇದೇ ಅವರ ಪಾಲಿಗೆ ಮೃತ್ಯುವಾಗಿ ಪರಿಣಮಿಸಿದೆ.

 

ಇಬ್ಬರು ಮಲಗಿದ ನಂತರ ಮಂಜುನಾಥ ವೈದ್ಯರ ತಲೆಗೆ ಕಬ್ಬಿಣದ ರಾಡಿನಿಂದ ಬಲವಾಗಿ ಹೊಡೆದಿದ್ದು, ವೈದ್ಯರು ಸಾವಿಗೀಡಾಗಿದ್ದಾರೆ. ಬಳಿಕ ಮಂಜುನಾಥ ಒಡವೆ ಹಾಗೂ ಹಣ ತೆಗೆದುಕೊಂಡು ಹೊರಗಿನಿಂದ ಮನೆಗೆ ಬೀಗ ಹಾಕಿ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ಘಟನೆ ನಡೆದು 24 ಗಂಟೆಯೊಳಗೆ ಶಿರಸಿ ಮಾರುಕಟ್ಟೆ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳಗಾವಿ ಪೊಲೀಸರ ಬೇಜವಾಬ್ದಾರಿಗೆ ಮೊಮ್ಮಗನಿಂದಲೇ ಕೊಲೆಯಾದ ಅಜ್ಜಿ..!ರಾಜಧಾನಿ ಎಕ್ಸ್‌ಪ್ರೆಸ್‌ನಲ್ಲಿ ಭಾರಿ ಬೆಂಕಿ ಅವಘಡ; 68 ಪ್ರಯಾಣಿಕರ ಸ್ಥಳಾಂತರವಿದೇಶಕ್ಕೆ ತೆಗೆದುಕೊಂಡು ಹೋಗಿದ್ದ ಸಾವಿರ ವರ್ಷಗಳ ಹಿಂದಿನ ತಾಮ್ರ ಶಾಸನಕ್ಕೆ ಕೊನೆಗೂ ಭಾರತಕ್ಕೆ ವಾಪಸ್..!ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್‌ ಅಭ್ಯರ್ಥಿಗೆ  ಕಚ್ಚಿದ ಹಾವು; ಚುನಾವಣಾ ಪ್ರಚಾರದ ಮಧ್ಯೆ ಕೇತನ್ ಭಾಟಿಕರ್ ಸಾವು..ರಾಜ್ಯದಲ್ಲಿ ಜೂನ್ 1ಕ್ಕೆ ಶಾಲೆ ಪ್ರಾರಂಭೋತ್ಸವ : ಅಂದೇ ಪೋಷಕರ ಮಹಾಸಭೆಪೋಕ್ಸೋ ಪ್ರಕರಣ : ಪೊಲೀಸರ ಮುಂದೆ ಶರಣಾದ ಕೇಂದ್ರ ಸಚಿವ ಬಂಡಿ ಸಂಜಯ ಪುತ್ರ3 ನೇ ಮಗು ಜನಿಸಿದರೆ ₹30 ಸಾವಿರ, 4ನೇ ಮಗು ಜನಿಸಿದರೆ ₹40 ಸಾವಿರ ಧನಸಹಾಯ ! ವಿಶಿಷ್ಟ ಯೋಜನೆ ಘೋಷಿಸಿದ ಆಂಧ್ರ ಸಿಎಂ…!SSLC ಮರುಮೌಲ್ಯಮಾಪನ : ಜಿಲ್ಲೆಯ ವಿದ್ಯಾರ್ಥಿ ಈಗ ಇಡೀ ರಾಜ್ಯಕ್ಕೆ ಪ್ರಥಮ..!ಕಕ್ಷಿದಾರರ ಸಮಾಲೋಚನಾ ಸ್ಪರ್ಧೆ: ರಾಷ್ಟ್ರೀಯ ಕಾನೂನು ಉತ್ಸವದಲ್ಲಿ ಪ್ರಥಮ ಸ್ಥಾನ ಪಡೆದ ಗದಗ ಮಾನ್ವಿ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು