ಬೆಳಗಾವಿ : ಮಾರಿಹಾಳ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಮನೆಗಳಲ್ಲಿ ಕಳ್ಳತನ ಮಾಡಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿ ಸುಮಾರು 7.80 ಲಕ್ಷ ₹ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬೆಳಗಾವಿ ತಾಲೂಕು ಚಂದೂರು ಗ್ರಾಮದ ಬಸಪ್ಪ ಮಾರುತಿ ಕರಕಾಳಿ ಬಂದಿದ್ದ. ಈತ ಮೋದಗಾ, ಹೊನ್ನಿಹಾಳ, ಹುದಲಿ, ಖನಗಾಂವ ಗ್ರಾಮಗಳ ಹಲವು ಮನೆಗಳಲ್ಲಿ ಕಳ್ಳತನ ಮಾಡಿದ್ದ. ಚಿನ್ನಾಭರಣ ಸೇರಿದಂತೆ ಹಲವು ವಸ್ತುಗಳನ್ನು ದೋಚಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.