Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಪೊಲೀಸರು ಇನ್ಮುಂದೆ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ

ಬೆಂಗಳೂರು: ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸುವಂತಿಲ್ಲ. ಒಂದು ವೇಳೆ ಬರೆಸಿದ್ದರೆ ಅದು ಕಾನೂನು ಉಲ್ಲಂಘಿಸಿದಂತೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದ್ದಾರೆ.

ಶ್ರವಣ ಬೆಳಗೊಳದ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 561ಕ್ಕೆ ಲಿಖಿತವಾಗಿ ಸಚಿವ ಡಾ. ಜಿ ಪರಮೇಶ್ವರ್​ ಉತ್ತರಿಸಿದ್ದಾರೆ.

ರಾಜ್ಯದ ಪೊಲೀಸ್​ ಇಲಾಖೆಯ ಅಧಿಕಾರಿಗಳು, ನೌಕರರು ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿದೆಯೇ ಎಂಬ ಶಾಸಕ ಸಿ.ಎನ್. ಬಾಲಕೃಷ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವ ಉತ್ತರಿಸಿದ್ದು, ರಾಜ್ಯದ ಪೊಲೀಸ್ ಇಲಾಖೆಯ ಅಧಿಕಾರಿಗಳು ‌ತಮ್ಮ ಸ್ವಂತ ವಾಹನದ ಮೇಲೆ ಪೊಲೀಸ್ ಎಂದು ಬರೆಸಿಕೊಂಡು ಸಂಚಾರ ಮಾಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಉತ್ತರ ನೀಡಿದ್ದಾರೆ.

ಹಾಗಿದ್ದಲ್ಲಿ, ಸ್ವಂತ ವಾಹನಗಳ ಮೇಲೆ ಪೊಲೀಸ್​ ಎಂದು ಬರೆಸಿಕೊಂಡು ಕೆಲ ಪೊಲೀಸ್​ ನೌಕರರು ಮತ್ತು ಅಧಿಕಾರಿಗಳು ಕಾನೂನಿನ ಉಲ್ಲಂಘನೆ ಮಾಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? ಬಂದಿದ್ದಲ್ಲಿ, ಇವರ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳೇನು? ಎಂಬ ಪ್ರಶ್ನೆಗೆ ತಮ್ಮ ಸ್ವಂತ ವಾಹನಗಳ ಮೇಲೆ ಪೊಲೀಸ್ ಎಂದು ಬರೆಸಿಕೊಂಡಿರುವುದು ಗೃಹ ಇಲಾಖೆಯ ಗಮನಕ್ಕೆ ಬಂದಿದೆ. ಸ್ವಂತ ವಾಹನದ ಮೇಲೆ ಪೊಲೀಸ್ ಅಧಿಕಾರಿಗಳು ಹಾಗೂ ನೌಕರರು ಪೊಲೀಸ್ ಎಂದು ಬರೆಸಿದ್ದರೇ ಅವರ ವಿರುದ್ಧ 2022 ರ ಸರ್ಕಾರದ ಸುತ್ತೋಲೆ ಪ್ರಕಾರ ಕಾನೂನು ಕ್ರಮ ಆಗುತ್ತದೆ ಎಂದು ಗೃಹ ಸಚಿವ ಲಿಖಿತ ಉತ್ತರ ನೀಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪ್ರಶ್ನೆ ಪತ್ರಿಕೆ ಸೋರಿಕೆ ವಿಚಾರಣೆಗೆ ತ್ವರಿತ ನ್ಯಾಯಾಲಯ ಸ್ಥಾಪನೆ: ಪ್ರಧಾನಿ ಮೋದಿಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ? ಸಾರ್ವಜನಿಕರನ್ನು ಸತಾಯಿಸುತ್ತಿರುವ ಬಿ ಎಲ್ ಒ ಗಳ ವಿರುದ್ಧ ಕ್ರಮಕ್ಕೆ ಅಗ್ರಹಶಾಸಕರ ಮನೆಗಳಿಗೆ ಸೀಮಿತವಾದರೆ BLO ಗಳು ?ದೇಶಾದ್ಯಂತ ಆವರಿಸಿದ ಮೋಡಗಳು ; ಉಪಗ್ರಹ ಚಿತ್ರಗಳಲ್ಲಿ ಸ್ಪಷ್ಟ ; ಮುಂಗಾರು ಬಲಗೊಳ್ಳುತ್ತಿದೆ ಎಂದ ಹವಾಮಾನ ಇಲಾಖೆನೀಟ್‌ ಹೋರಾಟ : ಯುವ ಪ್ರತಿಭಟನಾಕಾರರ ವಿರುದ್ಧ ಯಾವುದೇ ಕ್ರಮವಿಲ್ಲ ಎಂದು ಭರವಸೆ ನೀಡಿದ್ರೆ ಉಪವಾಸ ಅಂತ್ಯ ; ಕೇಂದ್ರಕ್ಕೆ ವಾಂಗ್ಚುಕ್ ಷರತ್ತುಕೋಚಿಂಗ್ ಸೆಂಟರ್‌ನಲ್ಲಿ ಲೈಂಗಿಕ ದೌರ್ಜನ್ಯ: ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರುಆಷಾಢ ಏಕಾದಶಿ ಪ್ರಯುಕ್ತ ಧಾರವಾಡ-ಪಂಡರಪುರ ನಡುವೆ ವಿಶೇಷ ರೈಲು ಸಂಚಾರಕೆಎಲ್‌ಇ ಜೆಜಿಎಂಎಂ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಕೆಎಲ್‌ಇ ಆಸ್ಪತ್ರೆ, ಹುಬ್ಬಳ್ಳಿ ಉದ್ಘಾಟನಾ ಸಮಾರಂಭ ಮುಂದೂಡಿಕೆಎನ್‌ಡಿಎಗೆ ಎನ್‌ಸಿಪಿ ಬೆಂಬಲದ ವದಂತಿಗಳ ನಡುವೆ ಪ್ರಧಾನಿ ಮೋದಿ ಭೇಟಿ ಮಾಡಿದ ಶರದ್ ಪವಾರ್–ಸುಪ್ರಿಯಾ ಸುಳೆಗಣಿಕೊಪ್ಪ : ಶಾಸಕ ಬಾಬಾಸಾಹೇಬ ಪಾಟೀಲ ಅವರ ಜನ್ಮದಿನದ ಅಂಗವಾಗಿ ವಿದ್ಯಾರ್ಥಿಗಳಿಗೆ ಸಿಹಿ ಭೋಜನ, ಕಲಿಕಾ ಸಾಮಗ್ರಿ ವಿತರಣೆ