Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Crime News

ಬೈಕ್ ಅಡ್ಡಗಟ್ಟಿ ಚಿನ್ನಾಭರಣ ದೋಚಿದ್ದ ತಂಡವನ್ನು ಕೊನೆಗೂ ಬಂಧಿಸಿದ ಪೊಲೀಸರು

 

ಬೆಳಗಾವಿ :
ಸವದತ್ತಿ ತಾಲೂಕು ಯಲ್ಲಮ್ಮ ಗುಡ್ಡದ ರಸ್ತೆಯ ಶಾಂತಿನಗರ ಬಳಿ ನಿರ್ಜನ ಗುಡ್ಡಗಾಡು ಪ್ರದೇಶದಲ್ಲಿ ಬೈಕ್ ಅಡ್ಡಗಟ್ಟಿ ಚಿನ್ನಾಭರಣ ದೋಚಿ ಪರಾರಿ ಆಗಿದ್ದ ಖತರ್ನಾಕ್ ದರೋಡೆಕೋರರ ತಂಡವನ್ನು ಸವದತ್ತಿ ಪೊಲೀಸರು ಕೊನೆಗೂ ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದರು.

ಬೈಕ್ ದರೋಡೆ ಮಾಡಿದ ಪ್ರಕರಣದಡಿ ಸವದತ್ತಿ ಪೊಲೀಸರು ಕಾರ್ಯಪ್ರವೃತ್ತರಾದರು. ಕೊನೆಗೂ ಪೊಲೀಸರ ಕಾರ್ಯಾಚರಣೆಗೆ ಫಲ ಸಿಕ್ಕಿದೆ. ನಾಲ್ವರು ಇದರಲ್ಲಿ ಭಾಗಿಯಾಗಿರುವುದು ಕಂಡು ಬಂದಿದೆ. ಬಂಧಿತರಿಂದ ಚಿನ್ನದ ಕೈಕಡಗ, ಚೈನ್, ಮೊಬೈಲ್, ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಸವದತ್ತಿಯ ಶಾಂತಿ ನಗರದ ಮಹಮ್ಮದ್ ಇಮಾಮಸಾಬ್ ಕಲ್ಲೇದ, ರಾಯಚೂರು ಜಿಲ್ಲೆಯ ಲಿಂಗಸುಗೂರಿನ ಮುತ್ತಣ್ಣ ಯಲ್ಲಪ್ಪ ಗುತ್ತೇದಾರ, ಕೊಪ್ಪಳ ಜಿಲ್ಲೆಯ ತೊಗ್ಗಲಡೋಣಿಯ ಲಾಲಸಾಬ್‌ ದಾವಲಸಾಬ್‌ ರಾಂಪೂರ, ಸವದತ್ತಿ ಶಾಂತಿ ನಗರದ ಇಬ್ರಾಹಿಂ ಅಕ್ಬರ್ ಕುಡಚಿ ಹಾಗೂ ಒಬ್ಬ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಬಂಧಿತರು.

2023 ರ ಆಗಸ್ಟ್ 24 ರಂದು ಸವದತ್ತಿ ಪೊಲೀಸ್ ಠಾಣೆಯಲ್ಲಿ ಸವದತ್ತಿ ತಾಲೂಕಿನ ಯಲಮ್ಮನ ಗುಡ್ಡದ ರಸ್ತೆಯ ಶಾಂತಿ ನಗರದ ಹತ್ತಿರ ದರೋಡೆ ಪ್ರಕರಣ ದಾಖಲಾಗಿತ್ತು. ಸವದತ್ತಿಯ ಅಶೋಕ ಬಸಪ್ಪ ಬಾಗೇವಾಡಿ ಎಂಬವರ ಬೈಕ್ ತಡೆದು ಚಿನ್ನಾಭರಣ ದೋಚಿ ಪರಾರಿಯಾಗಿದ್ದರು. ಬೈಕ್ ಸವಾರ ಅಶೋಕ ಬಾಗೇವಾಡಿ ದೂರು ನೀಡಿದ್ದರು. ಹಿಂದಿನ ಸಿಪಿಐ ಕರುಣೇಶಗೌಡ, ಈಗಿನ ಸಿಪಿಐ ಧರ್ಮಾಕರ್ ಧರ್ಮಟ್ಟಿ ನೇತೃತ್ವದಲ್ಲಿ ಪೊಲೀಸರು ದೂರು ದಾಖಲಿಸಿ ತನಿಖೆಗೆ ಇಳಿದಿದ್ದರು. ಇದೀಗ ಈ ದರೋಡೆ ಪ್ರಕರಣಕ್ಕೆ ಸಂಬಂಧಿಸಿದವರನ್ನು ಬಂಧಿಸಲಾಗಿದೆ ಎಂದು ಅವರು ತಿಳಿಸಿದರು.

Author
Jana Jeevala News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
RCU ದಲ್ಲಿ ಲಕ್ಷಾಂತರ ರೂ  ಗೋಲ್ಮಾಲ್, ಮೂವರು ಜೈಲುಪಾಲು.ಚೌತಿ ರಾತ್ರಿ ಅವಘಡ:  ಚವಾಟಗಲ್ಲಿಯಲ್ಲಿ ನಾಲ್ವರು ಸಜೀವ ದಹನದ್ವಿಚಕ್ರ ವಾಹನ-ಸಾರಿಗೆ ಬಸ್ ಅಪಘಾತ: ಮೂವರು ಸ್ಥಳದಲ್ಲೇ ಸಾವುಬೆಂಗಳೂರು-ಬೆಳಗಾವಿ ನಡುವೆ ಎರಡು ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ.ಪಾರ್ಕಿಂಗ್‌ ಮಾಡಿದ್ದ ಕಾರಿನ ಬಾನೆಟ್‌ನಲ್ಲಿ ಅಡಗಿತ್ತು ಬೃಹತ್‌ ಹೆಬ್ಬಾವು ; ಬೆಚ್ಚಿಬಿದ್ದ ನಿವಾಸಿಗಳು  ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರು