Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಜಾಗತೀಕರಣೋತ್ತರ ಕಾಲಘಟ್ಟವು ಜ್ಞಾನವನ್ನು ಬಯಸುತ್ತಿದೆ : ಕುಲಪತಿ ಸಿ.ಎಂ. ತ್ಯಾಗರಾಜ

 

ಬೆಳಗಾವಿ : ಜಗತ್ತಿನ ಪ್ರತಿಯೊಂದು ಭಾಷೆಯಲ್ಲಿಯೂ ಅನುಪಮವಾದ ಜ್ಞಾನ ಸಂಪತ್ತಿದೆ. ಈ ಭಾಷೆಗಳಲ್ಲಿನ ಜ್ಞಾನವು ಸಮಾಜದ ಅಂಚಿನಲ್ಲಿರುವವರಿಗೂ ಸಿಗಬೇಕು. ಅದು ಸಾಧ್ಯ ಆಗಬೇಕಾದರೆ ಭಾಷಾಂತರದಿಂದ ಮಾತ್ರ ಸಾಧ್ಯ ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸಿ. ಎಂ. ತ್ಯಾಗರಾಜ ಅಭಿಪ್ರಾಯಪಟ್ಟರು.

ನಗರದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಸಭಾಂಗಣದಲ್ಲಿ
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಶಿಕ್ಷಣ ಶಾಸ್ತ್ರ ವಿಭಾಗ ಮತ್ತು ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯ, ಬೆಂಗಳೂರು ಇದರ ಸಹಭಾಗಿತ್ವದಲ್ಲಿ ಅನುವಾದ ಸಂಪದ ಎಂಬ ಪರಿಕಲ್ಪನೆಯಡಿಯಲ್ಲಿ ಭಾರತೀಯ ಭಾಷೆಗಳಲ್ಲಿ ಗುಣಾತ್ಮಕ ಶೈಕ್ಷಣಿಕ ಸಂಪನ್ಮೂಲಗಳ ಲಭ್ಯತೆ - ಸವಾಲುಗಳು ಮತ್ತು ಅವಕಾಶಗಳು ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣ ಹಾಗೂ ಕಾರ್ಯಾಗಾರವನ್ನು ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಜ್ಞಾನವೇ ನಾಗರೀಕತೆಯ ಬಲ. ಈ ಬಲದಿಂದಲೇ ನಾಗರಿಕತೆ ಇಷ್ಟು ವಿಕಾಸ ಹೊಂದಿದೆ. ಮನುಕುಲದ ಉದ್ಧಾರಕ್ಕೆ ಉದಾತ್ತವಾದ ಜ್ಞಾನ ಅವಶ್ಯಕ. ಅದರಿಂದ ಉತ್ತಮ ಸಮಾಜ ಮತ್ತು ದೇಶವನ್ನು ಕಟ್ಟಲು ಸಾಧ್ಯ. ಮೌಲ್ಯಯುತವಾದ ಶಿಕ್ಷಣವು ಯುವಕರ ಭವಿಷ್ಯವನ್ನು ರೂಪಿಸುತ್ತದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಶಿಕ್ಷಣ ದೊರಕಬೇಕು. ಆಗ ಮಾತ್ರ ವ್ಯಕ್ತಿ ಸಮಾಜದ ಮುಖ್ಯವಾಹಿನಿಗೆ ಬರಲು ಸಾಧ್ಯ. ಇಂತಹ ಸಾಧ್ಯತೆಗಳನ್ನು ಸಾಧ್ಯವಾಗಿಸಲು ಮತ್ತು ಮನುಕುಲದ ಒಳಿತಿಗಾಗಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಮತ್ತು ವಿಶ್ವವಿದ್ಯಾಲಯವು ನಿಸ್ವಾರ್ಥವಾಗಿ ಕಾರ್ಯನಿರ್ವಹಿಸುತ್ತಿದೆ. ಇದರ ಜ್ಞಾನ ಪ್ರಸರಣೆ ಎಲ್ಲರಿಗೂ ಸಿಗಲಿ. ಜ್ಞಾನದ ಸಂಪತ್ತು , ಜ್ಞಾನದ ದ್ವಿಗುಣತೆ ಈ ಕಾರ್ಯಕ್ರಮದ ಉದ್ದೇಶ. ಇದರ ಸದುಪಯೋಗ ಎಲ್ಲರೂ ಪಡೆದುಕೊಳ್ಳಲಿ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಚಾರ್ಯ ಪ್ರೊ. ಎಂ. ಜಿ. ಹೆಗಡೆ ಅವರು ಅನುವಾದವೇ ಸಂಪತ್ತು. ಜ್ಞಾನ ಕೊಡುಕೊಳ್ಳುವಿಕೆ ಆಗಬೇಕು. ಆಗ ಅದು ಎಲ್ಲರಿಗೂ ಸಿಗಲು ಸಾಧ್ಯ. ಸರ್ವ ಮೂಲದ ಜ್ಞಾನವನ್ನು ಬಳಸಿಕೊಂಡಾಗ ವ್ಯಕ್ತಿಯು ಜ್ಞಾನ ಸಂಪನ್ನನಾಗುತ್ತಾನೆ. ಅನುವಾದದಿಂದ ಸಮುದಾಯ, ದೇಶ ಬೌದ್ಧಿಕವಾಗಿ ವಿಕಾಸದ ಪಥವನ್ನು ಹಿಡಿಯುತ್ತದೆ. ಭವದಲ್ಲಿನ ಅನುಭವವನ್ನು ಅನುಭವಿಸಲು ಅನುವಾದದಿಂದ ಮಾತ್ರ ಸಾಧ್ಯ. ಸಮಕಾಲೀನ ಸಂದರ್ಭದಲ್ಲಿ ಅನುವಾದಕ್ಕೆ ಅಪಾರವಾದ ಬೇಡಿಕೆ ಇದೆ. ಈ ಕ್ಷೇತ್ರದ ಕಡೆಗೆ ಬರುವವರ ಸಂಖ್ಯೆ ಹೆಚ್ಚಾಗಬೇಕು ಎಂದರು.

ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯದ ಕನ್ನಡ ಉಪಕ್ರಮದ ಸಹ ನಿರ್ದೇಶಕ ಎಸ್. ವಿ.ಮಂಜುನಾಥ ಅವರು ಪ್ರಾಥಮಿಕದಿಂದ ಉನ್ನತ ಶಿಕ್ಷಣದವರೆಗೆ ಅನುವಾದ ಸಂಪದದ ಪರಿಕಲ್ಪನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ಭಾಷೆ, ಕೌಶಲ್ಯ, ಜ್ಞಾನವನ್ನು ಉಣಬಡಿಸುವ ಸಂಕಲ್ಪ ಹೊಂದಿದ್ದೇವೆ. ಭಾರತೀಯ ಎಲ್ಲಾ ಭಾಷೆಯವರಿಗೆ ಬೇಕಾದ ಜ್ಞಾನವನ್ನು ಈ ಒಂದು ಭೂಮಿಕೆಯಲ್ಲಿ ನೀಡುತ್ತಿದ್ದೇವೆ ಎಂದು ಹೇಳಿದರು.
ಪ್ರೊ. ಎಂ ಸಿ ಯರಿಸ್ವಾಮಿ ವಂದಿಸಿದರು. ಅಜೀಂ ಪ್ರೇಮ್ ಜಿ. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಮಹೇಶ ಕುಮಾರ್ ಸಿ. ಎಸ್. ನಿರೂಪಿಸಿದರು.
ವಿಚಾರ ಸಂಕಿರಣದಲ್ಲಿ ವಿಶ್ವವಿದ್ಯಾಲಯದ ವ್ಯಾಪ್ತಿಯ ಬಿಇಡಿ ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಮಹಾವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ