ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಇನ್ನೂ ಇಬ್ಬರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಇದೀಗ ಭಾರಿ ಚರ್ಚೆ ನಡೆದಿದೆ.
ಸದ್ಯ ಪರಮೇಶ್ವರ್ ಉಪ ಮುಖ್ಯಮಂತ್ರಿ ಆಗಿದ್ದು ಈ ಸಂಖ್ಯೆ ಹೆಚ್ಚು ಸಾಧ್ಯತೆ ಇದೆ. ಜೊತೆಗೆ ಸದ್ಯದಲ್ಲೇ ಸಚಿವ ಸಂಪುಟ ವಿಸ್ತರಣೆಯಾಗಲಿದ್ದು ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರಕಾರ ಸೇರಲು ಕಾಂಗ್ರೆಸ್ ಶಾಸಕರು ತುದಿಗಾಲಲ್ಲಿ ನಿಂತಿದ್ದಾರೆ.