Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಷ್ಟ್ರನಿರ್ಮಾಣದಲ್ಲಿ ಯುವಕರ ಪಾತ್ರ ಬಹುದೊಡ್ಡದು: ಡಾ.ಪ್ರಭಾಕರ ಕೋರೆ ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಧ್ವಜಾರೋಹಣ

ಬೆಳಗಾವಿ, ಜ.26: ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹೊಂದಿರುವ ಭಾರತ ಇಂದು ಜಾಗತಿಕವಾಗಿ ಪ್ರಕಾಶಿಸುತ್ತಿದ್ದು, ದೂರದೃಷ್ಟಿಯ ನಾಯಕರಿಂದ ಸ್ವಾತಂತ್ರ್ಯ ಪಡೆದು, ತನ್ನದೇ ಆದ ಸಂವಿಧಾನವನ್ನು ಅನುಷ್ಠಾನಗೊಳಿಸುವ ಮೂಲಕ ಪ್ರಬಲ ರಾಷ್ಟ್ರವಾಗಿ ಬೆಳೆದುನಿಂತಿದೆ ಎಂದು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆ ಅವರು ಹೇಳಿದರು.

ಅವರು ಬೆಳಗಾವಿಯ ಕೆಎಲ್‌ಇ ಸಂಸ್ಥೆಯ ಪ್ರಧಾನ ಕಚೇರಿಯಲ್ಲಿ 77ನೇ ಗಣರಾಜ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಸಂವಿಧಾನವನ್ನು ಅರಿಯುವುದು ಹಾಗೂ ಅದಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಇಂದು ಭಾರತ ಆತ್ಮನಿರ್ಭರ ಭಾರತದತ್ತ ದೃಢ ಹೆಜ್ಜೆ ಇಟ್ಟಿದ್ದು, ಆಧುನಿಕ ಜಗತ್ತಿನ ಎಲ್ಲ ಅಗತ್ಯಗಳಿಗೆ ಸ್ಪಂದಿಸುವ ಶಕ್ತಿಯನ್ನು ಹೊಂದಿದೆ. ರಾಷ್ಟ್ರವು ಎದುರಾಳಿಗಳಿಗೆ ಸಿಂಹಸ್ವಪ್ನವಾಗಿದ್ದು, ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರಗಳಲ್ಲಿ ಜಾಗತಿಕ ಮಟ್ಟದಲ್ಲಿ ಮನ್ನಣೆ ಪಡೆದಿದೆ. ಯುವಪೀಳಿಗೆ ಅತ್ಯುತ್ತಮ ಶಿಕ್ಷಣ ಪಡೆದು ರಾಷ್ಟ್ರ ನಿರ್ಮಾಣದಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕೆಂದು ಅವರು ಕರೆ ನೀಡಿದರು.

ಈ ಸಂದರ್ಭದಲ್ಲಿ ಕೆಎಲ್‌ಇ ನಿರ್ದೇಶಕಿ ಡಾ.ಪ್ರೀತಿ ದೊಡವಾಡ, ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿಗಳಾದ ಡಾ.ಸುನೀಲ ಜಲಾಲಪುರೆ, ಡಾ.ಪ್ರಕಾಶ ಕಡಕೋಳ ಹಾಗೂ ಸಂಸ್ಥೆಯ ಆಜೀವ ಸದಸ್ಯರು ಉಪಸ್ಥಿತರಿದ್ದರು.

 

ಪದ್ಮಶ್ರೀ ಪ್ರಭಾಕರ ಕೋರೆ ಅವರಿಗೆ ಅಭಿನಂದನೆಗಳ ಮಹಾಪೂರ : ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿಯವರು ಹೂಗುಚ್ಛ ನೀಡಿ ಅಭಿನಂದಿಸಿದರು.

ಅಂತೆಯೇ ಬೆಳಗಾವಿ ಜಿಲ್ಲಾ ಕ್ರೀಡಾಂಣದಲ್ಲಿ ಜರುಗಿದ ಗಣರಾಜ್ಯೋತ್ಸವದಲ್ಲಿ ಜಿಲ್ಲಾಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ, ಡಿ.ಸಿ.ಮೋಹಮ್ಮದ ರೋಷನ್‌, ಪೋಲೀಸ್‌ ಕಮೀಶನರ್‌  ಭೂಷಣ ಭೋರಸೆ ಮೊದಲಾದವರು ಉಪಸ್ಥಿತರಿದ್ದರು.
Advertisement
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಷ್ಟ್ರೀಯ ಸ್ಪರ್ಧೆಯಲ್ಲಿ ಕಂಚಿನ ಪದಕ ಗೆದ್ದ ಲಿಂಗರಾಜ ಕಾಲೇಜು ವಿದ್ಯಾರ್ಥಿನಿಟ್ರ್ಯಾಕ್ಟರ್ ಸೇತುವೆಯಿಂದ ಕೆಳಗೆ ಬಿದ್ದು ಸಂಭವಿಸಿದ ಭೀಕರ ಅಪಘಾತದಲ್ಲಿ 4 ಕ್ಕೂ ಅಧಿಕ ಜನ ಸಾವುಬೆಳಗಾವಿ ಕೃಷ್ಣಮಠದಲ್ಲಿ ಅಧಿಕ ಮಾಸದ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಆಯೋಜನೆಕಾನೂನು ವಿದ್ಯಾರ್ಥಿಗಳು ವೃತ್ತಿಪರ ಕೌಶಲಗಳನ್ನು ಬೆಳೆಸಿಕೊಳ್ಳಬೇಕು: ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಮಂಜುನಾಥ ನಾಯಕ್ ಕರೆಖ್ಯಾತ ನಟ ದರ್ಶನ್ ಗೆ ಇನ್ನೊಂದು ವರ್ಷ ಜಾಮೀನು ಇಲ್ಲ : ಸುಪ್ರೀಂ ಕೋರ್ಟ್ಸಿದ್ದಾಪುರ : ಸ್ಕೂಟಿಗೆ ಟ್ರ್ಯಾಕ್ಟರ್ ಡಿಕ್ಕಿ ; ಜನಗಣತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ಶಿಕ್ಷಕಿ ಸಾವುಗಾಳಿ ಮಳೆಗೆ ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ ನಾಲ್ವರ ದಾರುಣ ಸಾವುಒಂದೇ ಸಲ 224 ವಿಧಾನ ಸಭೆ ಸ್ಥಾನ ಗೆದ್ದು ಸಿಎಂ ಆಗುತ್ತೇನೆ ಎಂದಿದ್ದ ನೀಲಣ್ಣನವರಿಗೆ ಅಧಿಕಾರಿಗಳಿಂದ ಶಾಕ್ ..!ಉತ್ತರ ಪ್ರದೇಶದಲ್ಲಿ ಭೀಕರ ಬಿರುಗಾಳಿ ಮಳೆಗೆ 100ಕ್ಕೂ ಹೆಚ್ಚು ಮಂದಿ ಸಾವುಪ್ರತಿ ಲೀಟರ್‌ ಪೆಟ್ರೋಲ್‌, ಡೀಸೆಲ್‌ ದರ ಏರಿಕೆ