Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ರಾಜ್ಯಕ್ಕೆ ಅಂಟಿರುವ ಕಳಂಕ ತೊಡೆದು ಹಾಕಬೇಕು

 

ಬೆಂಗಳೂರು :
ರಾಜ್ಯ ಆಡಳಿತದಲ್ಲಿ ನಿಮ್ಮ ಸೇವೆಯ ತೂಕವೇ ಹೆಚ್ಚು. ನಿಮ್ಮ ಸೇವೆ ಅಮೂಲ್ಯ. ಆದರೆ ಕಳೆದ ಮೂರುವರೆ ವರ್ಷದ ಡಬಲ್ ಎಂಜಿನ್ ಸರಕಾರದ ಆಳ್ವಿಕೆಯಲ್ಲಿ ಉತ್ತಮ ಆಡಳಿತ ಎಂಬುದು ಮಾಯವಾಗಿ, ಭ್ರಷ್ಟಾಚಾರದ ರಾಜಧಾನಿ ಎಂಬ ಕಳಂಕ ಬಂದಿದೆ.

ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ಮಂಗಳವಾರ ನಡೆದ ಸರಕಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಮಾತುಗಳು ಇದು.

ದೇಶ ಮಾತ್ರವಲ್ಲ. ಇಡೀ ಜಗತ್ತು ಬೆಂಗಳೂರು ಮೂಲಕ ಭಾರತವನ್ನು ನೋಡುತ್ತಿದೆ. ಅನ್ಯ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದ ಸಂಪನ್ಮೂಲ, ಪ್ರತಿಭೆ, ಆಳ್ವಿಕೆ ಮಾದರಿ ಆದದ್ದು. ದೇವರಾಜ ಅರಸು, ವೀರೇಂದ್ರ ಪಾಟೀಲರ ಕಾಲದಿಂದ ಸಿದ್ದರಾಮಯ್ಯನವರ ಸರಕಾರದ ಅವಧಿವರೆಗೂ ಕರ್ನಾಟಕದ ಆಡಳಿತ ಯಾರೊಬ್ಬರೂ ಬೆರಳು ತೋರಿಸದಷ್ಟು ಉತ್ತಮವಾಗಿತ್ತು ಎಂದು ಹೇಳಿದರು.

ರಾಜಕೀಯ ದ್ವೇಷದಿಂದ ನನ್ನ ಮೇಲೆ ಸಿಬಿಐ ಸೇರಿದಂತೆ ತನಿಖಾ ಸಂಸ್ಥೆಗಳನ್ನು ಪ್ರಯೋಗ ಮಾಡಲಾಗಿದೆ. ಚುನಾವಣೆ ಸಮಯದವರೆಗೂ ಈ ಕಾಟ ತಪ್ಪಲಿಲ್ಲ. ಆದರೆ ಜನ ನಮ್ಮ ಪರ ನಿಂತಿದ್ದಾರೆ.

ಡಬಲ್ ಇಂಜಿನ್ ಸರಕಾರ ಇದ್ದರೂ, 26 ಬಿಜೆಪಿ ಎಂಪಿಗಳು ಇದ್ದರೂ, ರಾಜ್ಯದವರೇ ಕೇಂದ್ರದಲ್ಲಿ ಹಣಕಾಸು ಸಚಿವರಾಗಿದ್ದರೂ ನಮಗೆ ಅನ್ಯಾಯವಾಗಿದೆ. ಆಡಳಿತ ವಿಫಲವಾಗಿದೆ. ಕೇಂದ್ರ ಸರಕಾರ ಏನೆಲ್ಲ ಪ್ರಯೋಗ ಮಾಡಿದರೂ ಜನ ನಮ್ಮ ಮೇಲೆ ಪ್ರೀತಿ, ವಿಶ್ವಾಸ ಇಟ್ಟಿದ್ದಾರೆ ಎಂದು ತಿಳಿಸಿದರು.

ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು. ನಾವು ಉತ್ತಮ ಆಡಳಿತ, ಸರಕಾರ ನೀಡಲು ಬದ್ಧರಾಗಿದ್ದೇವೆ. ಅದರಲ್ಲಿ ನಿಮ್ಮ ಪಾಲೂ ಇದೆ.

ರಾಜ್ಯಕ್ಕೆ ಅಂಟಿರುವ ಕಳಂಕವನ್ನು ತೊಳೆದು ಹಾಕಲು ನೀವು ನಮ್ಮ ಜತೆ ಕೈ ಜೋಡಿಸಬೇಕು. ರಾಜ್ಯದಲ್ಲಿ ಬದಲಾವಣೆ ಕಾಣುವಂತಹ ಆಳ್ವಿಕೆ ನೀಡಬೇಕು. ನಿಮ್ಮಿಂದ ಪಾಸಿಟಿವ್ ಸಂದೇಶ ತಾಲೂಕು, ಗ್ರಾಮ ಮಟ್ಟದವರೆಗೂ ಹೋಗಬೇಕು ಎಂದು ಹೇಳಿದರು.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ