Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಬೆಳಗಾವಿ ಬಂದ್‌ ಗೆ ಕರೆ ಕೊಟ್ಟ ರೈತರು ತಾರಕಕ್ಕೇರಿದ ಕಬ್ಬು ಬೆಳೆಗಾರರ ಹೋರಾಟ

ಬೆಳಗಾವಿ: 28 ಸಕ್ಕರೆ ಕಾರ್ಖಾನೆಗಳನ್ನು ಹೊಂದಿರುವ ರಾಜ್ಯದ ಅತ್ಯಂತ ದೊಡ್ಡ ಜಿಲ್ಲೆ ಎನಿಸಿಕೊಂಡಿರುವ ಬೆಳಗಾವಿಯಲ್ಲಿ ಇದೀಗ ಕಬ್ಬು ಬೆಳೆಗಾರರು ರಸ್ತೆಗಳಿದಿದ್ದಾರೆ. ಕಳೆದ ಕೆಲ ದಿನಗಳಿಂದ ಕಬ್ಬು ಬೆಳೆಗಾರರು ಹಾಗೂ ಹೋರಾಟಗಾರರು ಬೀದಿಗಿಳಿದು ಹೋರಾಟ ನಡೆಸುತ್ತಿದ್ದಾರೆ. ಕಬ್ಬಿಗೆ ನ್ಯಾಯವಾದ ದರ ನೀಡುವವರೆಗೆ ಹೋರಾಟ ನಡೆಸಲಾಗುವುದು. ​​ಬೇಡಿಕೆ ಈಡೇರಿಸದಿದ್ದರೇ ನ. 7 ರಿಂದ ರಾಜ್ಯಾದ್ಯಂತ 4 ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ಗೆ ನಿರ್ಧರಿಸಲಾಗಿದೆ. ಈ ನಡುವೆ ಶುಕ್ರವಾರ ಬೆಳಗಾವಿ ಬಂದ್‌ ಗೆ ಕರೆ ನೀಡಲಾಗಿದೆ ಎಂದು ರೈತ ಮುಖಂಡರು ತಿಳಿಸಿದ್ದಾರೆ.

ಅಥಣಿ, ಗೋಕಾಕ, ಚಿಕ್ಕೋಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಈ ಪ್ರತಿಭಟನೆಗೆ ಸಾವಿರಾರು ಜನ ಬೆಂಬಲ ಸಾಥ್‌ ನೀಡುತ್ತಿದ್ದು, ಬಿಜೆಪಿ ಬೆಂಬಲ ಸೂಚಿಸಿದೆ. ಬೆಳಗಾವಿ ಜೊತೆಗೆ ಬಾಗಲಕೋಟೆ, ವಿಜಯಪುರ ಸೇರಿ ಹಲವೆಡೆ ರೈತರು ಬೀದಿಗೆ ಇಳಿದಿದ್ದಾರೆ. ಈಗಾಗಲೇ ಸರ್ಕಾರಕ್ಕೆ ನೀಡಿದ ಡೆಡ್‌ ಲೈನ್‌ ಮುಗಿದಿದೆ. ಪಂಜಾಬ್‌ ಮಾದರಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನವೆಂಬರ್‌ 7ರಂದು ರಾಷ್ಟ್ರೀಯ ಹೆದ್ದಾರಿ 4 ಬಂದ್‌ಗೆ ಕರೆ ನೀಡಿದ್ದಾರೆ.
ಕಬ್ಬು ಬೆಳೆಗಾರರ ಈ ಹೋರಾಟಕ್ಕೆ ಅನೇಕ ಕಡೆಗಳಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಪ್ರತಿಭಟನೆ 8ನೇ ದಿನಕ್ಕೆ ಕಾಲಿಟ್ಟಿದೆ. ಅನೇಕ ಕಡೆ ಸ್ವತಃ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿ ಪ್ರತಿಭಟನೆಗೆ ಸಾಥ್‌ ನೀಡಿದ್ದಾರೆ. ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಹಸಿರು ಸೇನೆ, ರೈತ ಸಂಘದ ರಾಜ್ಯಾಧ್ಯಕ್ಷ ಚೂನಪ್ಪ ಪೂಜಾರಿ, ಕಬ್ಬಿಗೆ ನ್ಯಾಯವಾದ ದರ ನೀಡುವವರೆಗೆ ಹೋರಾಟ ನಡೆಸಲಾಗುವುದು.
ಬೇಡಿಕೆ ಈಡೇರಿಸದಿದ್ದರೇ, ನವೆಂಬರ್ 7ರಿಂದ ರಾಜ್ಯಾದ್ಯಂತ 4 ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್‌ಗೆ ನಿರ್ಧರಿಸಲಾಗಿದೆ. ಬೆಂಗಳೂರಿಂದ ಬೆಳಗಾವಿವರೆಗೂ ಹೆದ್ದಾರಿ ಬಂದ್ ಮಾಡುವ ಬೃಹತ್ ಪ್ರತಿಭಟನೆ ಆಗಲಿದೆ. ಜೊತೆಗೆ ಮಂಡ್ಯ, ಮೈಸೂರು, ಶಿವಮೊಗ್ಗ, ಹಾವೇರಿ, ಧಾರವಾಡ ಸೇರಿ ಹಲವು ಜಿಲ್ಲೆಗಳಲ್ಲಿ ರೈತರು ಬೀದಿಗಿಳಿದು ಪ್ರತಿಭಟನೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ. ಒಟ್ಟಾರೆ ಇದೀಗ ದಿನೇ ದಿನೇ ಬೆಳಗಾವಿ ಸೇರಿದಂತೆ ಕಬ್ಬು ಬೆಳೆಯುವ ಜಿಲ್ಲೆಗಳಲ್ಲಿ ಹೋರಾಟ ಚುರುಕು ಗೊಳ್ಳುವ ಎಲ್ಲಾ ಸಾಧ್ಯತೆಗಳು ಕಂಡುಬಂದಿವೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಹುಕೋಟಿ ವಂಚನೆ : ನೀಲಣ್ಣವರ, ಆಪ್ತರ ನಿವಾಸಗಳ ಮೇಲೆ ಇಡಿ ದಾಳಿSIR : ಗಣತಿ ನಮೂನೆ ಸಲ್ಲಿಸಲು 17 ರವರೆಗೆ ಅವಕಾಶಈ ನಿಗೂಢ ಬಾವಿಯಲ್ಲಿ ಮತ್ತೆ ಅಚ್ಚರಿ ; ಸಮುದ್ರದ ಅಲೆಯಂತೆ ತನ್ನಷ್ಟಕ್ಕೆ ತಾನೇ ಏರಿಳಿಯುವ ನೀರು..!ವಿಭಾಗೀಯ ಕಚೇರಿಗಳನ್ನು ಬೆಳಗಾವಿಯಲ್ಲಿ ಸ್ಥಾಪಿಸಲು ಕ್ರಮ ಕೈಕೊಂಡವರು ಅರಸುಮದುವೆ ಮನೆಯಲ್ಲಿ ಪೊಲೀಸ್ ಅಧಿಕಾರಿ ಹತ್ಯೆ ; ಹೆಸರು ಬದಲಿಸಿಕೊಂಡು ನಕಲಿ ವೈದ್ಯನಾಗಿ ಬದುಕಿದ್ದ ಆರೋಪಿ 28 ವರ್ಷಗಳ ನಂತರ ಸೆರೆ…!ಕರ್ನಾಟಕದ 4 ಜಿಲ್ಲೆಗಳಲ್ಲಿ ಅತಿ ಭಾರಿ ಮಳೆ ಮುನ್ಸೂಚನೆ ; ಆರೆಂಜ್‌ ಅಲರ್ಟ್‌ ಘೋಷಣೆಪುತ್ರಿಯರಿಗಾಗಿ ಜೀವನ ಮುಡಿಪಾಗಿಟ್ಟಿದ್ದ ತಂದೆ ವೃದ್ಧಾಶ್ರಮದಲ್ಲಿ ನಿಧನ ; ₹5100 ಕಳುಹಿಸಿ ವಿಡಿಯೊ ಕಾಲ್‌ನಲ್ಲಿ ಕೊನೆ ವಿದಾಯ ಹೇಳಿದ ಪುತ್ರಿಯರು...!ಯುವಜನತೆ  ಪಠ್ಯ ಮತ್ತು ಪಠ್ಯೇತರ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಿ ವ್ಯಕ್ತಿತ್ವ ರೂಪಿಸಿಕೊಳ್ಳಿ : ಕುಲಪತಿ ತ್ಯಾಗರಾಜಗುರಿ, ಶಿಸ್ತು ಮತ್ತು ಸಾಧನೆಯಿಂದ ಯಶಸ್ಸು ಸಾಧ್ಯ: ಡಾ. ಸಿದ್ದು ಹುಲ್ಲೊಳ್ಳಿ  ಲಕ್ಷ್ಮೀ ಇದ್ದರೆ DK ಸಂಪುಟಕ್ಕೆ ಶೋಭೆ:  ಹೆಬ್ಬಾಳ್ಕರ್ ಯಾಕೆ ಸಂಪುಟಕ್ಕೆ ಅತ್ಯಂತ ಅವಶ್ಯಕ ಗೊತ್ತೇ ? ಬೆಳಗಾವಿಗೆ ಅಭಿವೃದ್ಧಿಯ ಹೊಳೆಯನ್ನೇ ಹರಿಸಿದ್ದ ಮಹಾನಾಯಕಿ