Web Stories
Jana Jeevala News
ePaper
| LIVE |Local|Crime|State|National| International|Politics|Business|Education|Tech|Entertainment|Sports|Editorial|Health|Health|Traveling|Beauty Tips |
| LIVE |Local|Crime|State|National| International
PoliticsBusinessEducationTechEntertainmentSportsEditorialHealthHealthTravelingBeauty TipsRecipes Tips

ಹಾಸನದಲ್ಲಿ ಘೋರ ದುರಂತ : ಗಣೇಶ ಮೂರ್ತಿ ಮೆರವಣಿಗೆ ಮೇಲೆ ನುಗ್ಗಿದ ಟ್ರಕ್ ; 9 ಮಂದಿ ಸಾವು, ಹಲವರಿಗೆ ಗಾಯ

ಹಾಸನ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಜನಸಂದಣಿಯತ್ತ ಟ್ರಕ್ ನುಗ್ಗಿದ ಕಾರಣ 9 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದ ಮೊಸಳೆಹೊಸಳ್ಳಿ ಬಳಿ ಭೀಕರ ಅಪಘಾತ ನಡೆದಿದೆ. ನಡೆದಿದೆ ಎಂದು ವರದಿಯಾಗಿದೆ.
ಹಾಸನ ತಾಲೂಕಿನ ಹೊಳೇನರಸೀಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮೊಸಳೆ ಹೊಸಳ್ಳಿ ಬಳಿ ದುರಂತ ಸಂಭವಿಸಿದೆ. ಗಣಪತಿ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಮೂಲಕ ಸಾಗುತ್ತಿದ್ದಾಗ ವೇಗವಾಗಿ ಬಂದ ಕ್ಯಾಂಟರ್ ಜನರ ಗುಂಪಿನ ಮೇಲೆ ನುಗ್ಗಿದ್ದರಿಂದ ಎಂಟು ಮಂದಿ ಸಾವಿಗೀಡಾಗಿದ್ದಾರೆ. ಅಪಘಾತದಲ್ಲಿ 20ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ.

ಮೊಸಳೆಹೊಸಳ್ಳಿ ರಾಷ್ಟ್ರೀಯ ಹೆದ್ದಾರಿ 373ರ ಚತುಷ್ಪಥ ರಸ್ತೆಯ ಒಂದು ಬದಿಯಲ್ಲಿ ಗಣೇಶ ಮೂರ್ತಿ ಮೆರವಣಿಗೆಗೆ ಅವಕಾಶ ನೀಡಲಾಗಿತ್ತು. ಈ ವೇಳೆ ವೇಗವಾಗಿ ಬಂದ ಮಹಾರಾಷ್ಟ್ರ ಮೂಲದ ಕ್ಯಾಂಟರ್ ಮೊದಲಿಗೆ ಬೈಕ್ ಗೆ ಡಿಕ್ಕಿ ಹೊಡೆದು ನಂತರ ಮೆರವಣಿಗೆಯಲ್ಲಿ ಸಾಗುತ್ತಿದ್ದ ಜನರ ಮೇಲೆ ನುಗ್ಗಿದೆ. ಎದುರಿಗೆ ಬಂದ ಬೈಕ್‌ ಸವಾರನನನ್ನು ತಪ್ಪಿಸಲು ಹೋಗಿ ಕ್ಯಾಂಟರ್‌ ಮೆರವಣಿಗೆಯಲ್ಲಿ ತೆರಳುತ್ತಿದ್ದವರ ಮೇಲೆ ನುಗ್ಗಿದೆ ಎನ್ನಲಾಗಿದೆ.

ರಸ್ತೆಯ ಒಂದು ಬದಿಯಿಂದ ಏಕಾಏಕಿ ಡಿವೈಡರ್ ಗುದ್ದಿದ ಟ್ರಕ್‌ ಯಮನಂತೆ ಸಾವಿರಾರು ಜನರಿದ್ದ ಮೆರವಣಿಗೆಗೆ ನುಗ್ಗಿದೆ. ಇದರಿಂದಾಗಿ ಘನಘೋರ ದುರಂತ ಸಂಭವಿಸಿದೆ. ಸ್ಥಳದಲ್ಲೇ ಐವರು ಸಾವಿಗೀಡಾಗಿದ್ದಾರೆ ಎನ್ನಲಾಗಿದ್ದು, ಮೂವರು ಚಿಕಿತ್ಸೆ ಫಲಕಾರಿಯಾಗದೆ ಮೂವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೊಸಳೆಹೊಸಳ್ಳಿ ಗ್ರಾಮದಲ್ಲಿ ಜನರ ಆಕ್ರಂದನ ಮುಗಿಲು ಮುಟ್ಟಿದೆ.
ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಎಸ್‌ಪಿ ಆಗಮಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಸ್ಥಳೀಯ ಗ್ರಾಮಸ್ಥರು ಕೂಡ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.
Author
Jana Jeevala
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಬೆಳಗಾವಿ ಜಿಎ ಪ್ರೌಢಶಾಲೆ ಅದ್ವಿತೀಯ ಸಾಧನೆ ಶೈಕ್ಷಣಿಕ ಸಾಧನೆಗೆ ಮತ್ತೆ ಮುಕುಟಪ್ರಾಯವಾದ ಹಿರಿಯಣ್ಣಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಶೇ.94.1ರಷ್ಟು ವಿದ್ಯಾರ್ಥಿಗಳು ತೇರ್ಗಡೆ ; ಯಾವ ಜಿಲ್ಲೆ ಫಸ್ಟ್​​? ಯಾವುದು ಲಾಸ್ಟ್​​? ಇಲ್ಲಿದೆ ಮಾಹಿತಿ625 ಕ್ಕೆ 625 ಅಂಕ ಪಡೆದ ಕಟಗೇರಿ ವಿದ್ಯಾರ್ಥಿನಿ...!SSLC Results: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಹಿಂದಿ ಸೇರಿ ತೃತೀಯ ಭಾಷೆಗಳಿಗೆ ಈ ವರ್ಷ ಅಂಕ ನೀಡಲು ಸರಕಾರ ತೀರ್ಮಾನಸಹಜ ಸ್ಥಿತಿಗೆ ಬಾರದ ಕಾಶ್ಮೀರ: ಪಹಲ್ಗಾಮ್ ಹತ್ಯಾಕಾಂಡಕ್ಕೆ 1 ವರ್ಷ: ತನಿಖಾ ಸಂಸ್ಥೆಗಳ ಕೈಗೆ ಸಿಕ್ಕ ಸಾಕ್ಷ್ಯಗಳೇನು? ತನಿಖೆಯ ಈಗಿನ ಸ್ಥಿತಿಗತಿ ಏನು?2026 ರಲ್ಲಿ ಅಪ್ಪಳಿಸಲಿದೆಯೇ ‘ಮೆಗಾ ಎಲ್ ನಿನೋ’ ? 1877 ರ ಭೀಕರ ʼಬರʼ ಮರುಕಳಿಸುವ ಬಗ್ಗೆ ಎಚ್ಚರಿಕೆ ನೀಡಿದ ವಿಜ್ಞಾನಿಗಳು !  ನೈಟಿ ಹಾಕುವ ವಿಷಯವಾಗಿ ಹೆಂಡತಿಯೊಂದಿಗೆ ತಕರಾರು: ಕೊಲೆಗೆ ಯತ್ನಿಸಿದ ಪತಿರಾಯ..!ಇಂದು ಮಧ್ಯಾಹ್ನ 12 ಗಂಟೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಕೆಎಲ್‌ಇ ಪಿಯು ಕಾಲೇಜುಗಳ ಸಾಧನೆ – ಅದ್ವಿತೀಯ